ಫೆ 2 ರಿಂದ 9ರ ವರೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

9ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (ಬಿಫೆಸ್-BIFFE) ಬೆಂಗಳೂರು ಮತ್ತು ಮೈಸೂರುಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಂ ಲಕ್ಷ್ಮಿನಾರಾಯಣ ಹೇಳಿದರು.

ಚಲನಚಿತ್ರೋತ್ಸವದ ಉದ್ಘಾಟನೆ ಫೆಬ್ರುವರಿ 2, 2017 ರಂದು ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ.
ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರುವರಿ 9, 2017 ಗುರುವಾರ ಸಂಜೆ ಮೈಸೂರಿನಲ್ಲಿ ನಡೆಯಲಿದೆ.

ಚಿತ್ರ ಪ್ರದರ್ಶನ ಫೆಬ್ರುವರಿ 3, 2017 ರಿಂದ ಪ್ರಾರಂಭವಾಗಲಿದೆ . ಬೆಂಗಳೂರು ರಾಜಾಜಿನಗರದಲ್ಲಿರುವ ಓರಾಯನ್ ಮಾಲ್ ನ ಪಿವಿಆರ್ ಸಿನಿಮಾಸ್ ನ 11ಪರದೆಗಳು ಮತ್ತು ಮೈಸೂರು ಮಾಲ್ ಆಪ್ ಮೈಸೂರು ಐನಾಕ್ಸ್ ಸಿನಿಮಾಸ್ ನ 4ಪರದೆಗಳಲ್ಲಿ ಚಿತ್ರ ಪ್ರದರ್ಶನ ನಡೆಯಲಿವೆ. ಸುಮಾರು 50ದೇಶಗಳ ಒಟ್ಟು 180ಚಿತ್ರಗಳು ವಿವಿಧ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಹಿರಿಯ ಅಧಿಕಾರಿ ಎಚ್ ಬಿ ದಿನೇಶ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು, ಸಿನಿಮೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಉಪಸ್ಥಿತರಿದ್ದರು.

a0f5eb11-7a1c-4a7a-b108-af0d5f19a22d.jpg

091548fa-fd24-44b1-bd39-94be55cc590a.jpg

54c88501-11c3-42ac-94d7-4235f74e298d.jpg

4ec89354-8c8b-45ad-a0b0-a668dad0d88d.jpg

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s