ಬರ ಪರಿಹಾರ: ಪ್ರಧಾನಿಗೆ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಸಂಜೆ ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗವು ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಉಪಶಮನ ಉಪಕ್ರಮಗಳನ್ನು ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕೂಡಲೇ 4702.54 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತು.
ರಾಜ್ಯದ ಬಹು ಭಾಗ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲೂ ಎಂಟರಿಂದ 12 ವಾರಗಳ ಕಾಲ ಸತತವಾಗಿ ಒಣ ಹವೆ ದಾಖಲಾಗಿದೆ.
ಬೆಳೆಹಾನಿ:
ಭಾರತ ಸರ್ಕಾರದ ಬರ ಕೈಪಿಡಿ-2009 ರ ಮಾನದಂಡ ಸೂತ್ರಗಳಂತೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 176 ತಾಲ್ಲೂಕುಗಳ ಪೈಕಿ 139 ತಾಲ್ಲೂಕುಗಳು ಬರಪೀಡಿತ ಎಂದು ಘೋಷಿತವಾಗಿದೆ. ಮಳೆ ಪ್ರಮಾಣದ ಕೊರತೆಯ ಹಿನ್ನೆಲೆಯಲ್ಲಿ, ರಾಜ್ಯದ 36.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ 17,193 ಕೋಟಿ ರೂ. ಅಂದಾಜು ಮೌಲ್ಯದ ಬೆಳೆ ಹಾನಿಯಾಗಿದೆ.
ಮೇವಿನ ಕೊರತೆ:
35 ಲಕ್ಷ ರೈತರು ಬಾಧಿತರಾಗಿದ್ದಾರೆ. ರಾಜ್ಯದಲ್ಲಿ ಈ ಕಠಿಣ ಬರದಿಂದ ಕೃಷಿ, ವಿದ್ಯುತ್ ಉತ್ಪಾದನೆ, ಅಂತರ್ಜಲ ಮರುಪೂರಣ, ಕುಡಿಯುವ ನೀರು ಪೂರೈಕೆ ಹಾಗೂ ಮೇವಿನ ಲಭ್ಯತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಪ್ರಸ್ತುತ ಹಿಂಗಾರು ಹಂಗಾಮಿನ ಅವಧಿಯಲ್ಲೂ ಮಳೆಯ ಪ್ರಮಾಣದಲ್ಲಿ ದಾಖಲೆಯ ಶೇಕಡಾ 80 ರಷ್ಟು ಕೊರತೆ ಉಂಟಾಗಿರುವುದು ರಾಜ್ಯದ ಸಂಕಷ್ಟ ದುಪ್ಪಟ್ಟಾದಂತಾಗಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಸತತ ಆರನೇ ಬಾರಿಗೆ ಬರ ಪರಿಸ್ಥಿತಿ ಎದುರಾಗಿದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಬಯಸಿದೆ. 2015-16 ನೇ ಸಾಲಿನಲ್ಲಿ 137 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಪ್ರಸಕ್ತ ವರ್ಷವು ಸತತ ಎರಡನೇ ಬಾರಿಗೆ ರಾಜ್ಯದ ಬಹು ಭಾಗವು ಬಾಧಿತವಾಗಿದೆ.

ಬರ ಬಾಧಿತ ತಾಲ್ಲೂಕುಗಳಲ್ಲಿ ಉಪ ಶಮನದ ಉಪಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು 4702.54 ಕೋಟಿ ರೂ ಆರ್ಥಿಕ ನೆರವು ಕೋರಿ ಕೇಂದ್ರ ಕೃಷಿ ಸಚಿವರಿಗೆ ನವೆಂಬರ್ 15 ರಂದು ಮನವಿ ಸಲ್ಲಿಸಿದೆ. ಕೇಂದ್ರದ ಅಧಿಕಾರಿಗಳ ತಂಡವು ನವೆಂಬರ್ 2 ರಿಂದ 5 ರ ವರೆಗೆ ಬರ-ಪೀಡಿತ ತಾಲ್ಲೂಕುಗಳಿಗೆ ಭೇಟಿ ನೀಡಿದೆ. ಆದರೆ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕೇಂದ್ರದ ನೆರವು ಈವರೆಗೆ ಮಂಜೂರು ಹಾಗೂ ಬಿಡುಗಡೆಯಾಗಿಲ್ಲ. ಕುಡಿಯುವ ನೀರು ಪೂರೈಕೆ ಹಾಗೂ ಮೇವಿನಂತಹ ತುರ್ತು ಚಟುವಟಿಕೆಗಳಿಗಾಗಿ ರಾಜ್ಯ ಸರ್ಕಾರವು ಬಿಡುಗಡೆ ಮಾಡುವುದು ಅನಿವಾರ್ಯವಾಗಿದೆ. ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಿದೆ.
ಸಮೀಕ್ಷೆ:
ಸೆಪ್ಟೆಂಬರ್ ತಿಂಗಳಲ್ಲಿ ಅತಿವೃಷ್ಠಿಯಿಂದ ಉತ್ತರ ಕರ್ನಾಟಕದ ಐದು ಜಿಲ್ಲೆಗಳ ಹಲವು ತಾಲ್ಲೂಕುಗಳಲ್ಲಿ ನೆರೆ ಪರಿಸ್ಥಿತಿ ಉದ್ಭವಿಸಿ, ಮಾನವ ಹಾಗೂ ಜಾನುವಾರು ಜೀವ ಹಾನಿ, ಬೆಳೆ ಹಾಗೂ ಸಾರ್ವಜನಿಕ ಆಸ್ತಿ ನಷ್ಟ ಉಂಟಾಗಿದೆ. ತುರ್ತು ಪರಿಹಾರ ಕ್ರಮಕ್ಕಾಗಿ ರಾಜ್ಯ ಸರ್ಕಾರವು 75 ಕೋಟಿ ರೂ ಬಿಡುಗಡೆ ಮಾಡಿದೆ. ಅಲ್ಲದೆ, ಅಕ್ಟೋಬರ್ 28 ರಂದು ಕೇಂದ್ರ ಗೃಹ ಸಚಿವರಿಗೆ ನೆರೆ ಪರಿಹಾರ ಕಾಮಗಾರಿಗಳಿಗೆ 386.44 ಕೋಟಿ ರೂ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಮನವಿ ಸಲ್ಲಿಸಲಾಗಿದೆ. ನಷ್ಟದ ಪ್ರಮಾಣವನ್ನು ಅಂದಾಜಿಸಲು ಕೇಂದ್ರದ ಅಧಿಕಾರಿಗಳ ತಂಡವು ಡಿಸೆಂಬರ್ 14 ರಿಂದ 17 ರ ವರೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದೆ.
ನಿರೀಕ್ಷೆ:
ರಾಜ್ಯವು ಇನ್ನೂ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರದ ನಿರೀಕ್ಷೆಯಲ್ಲಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರದ ಮೊತ್ತವನ್ನು ಅನುದಾನದ ರೂಪದಲ್ಲಿ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಸಂಬಂಧಿತರಿಗೆ ಕೂಡಲೇ ಸೂಚಿಸುವಂತೆ ಮನವಿ ಮಾಡುತ್ತೇನೆ. ಇದರಿಂದ ಯಾವುದೇ ವಿಳಂಬವಿಲ್ಲದೆ ಉಪ ಶಮನ ಉಪ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಪರವಾಗಿ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s