ಅನಾರೋಗ್ಯ ಪೀಡಿತ ಮಹಿಳೆ ನೋವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಡಳಿತ: 24ಗಂಟೆಯೊಳಗೆ ಆಧಾರ್ ನೋಂದಣಿ

whatsapp-image-2017-01-05-at-17-35-01ಆಧಾರ್ ಕಾರ್ಡ್ ಇಲ್ಲದ ಕಾರಣ ನಿವೃತ್ತಿ ವೇತನ ಪಡೆಯಲು ಸಮಸ್ಯೆ ಎದುರಿಸುತ್ತಿದ್ದ ಅನಾರೋಗ್ಯ ಪೀಡಿತ ವೃದ್ಧೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಮನವಿ ಸ್ವೀಕರಿಸಿದ 24ಗಂಟೆ ಒಳಗಾಗಿ ಆಧಾರ್ ಕಾರ್ಡ್ ನೋಂದಣಿ ಮಾಡಿಸಿ ಶ್ಲಾಘನೆಗೆ ಪಾತ್ರವಾಗಿದೆ.

ನಿವೃತ್ತಿ ವೇತನಕ್ಕೆ ಸಂಚಕಾರ:
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಎಲ್.ಆರ್.ನಗರದ ನಿವಾಸಿ ಅಂಚೆ ಇಲಾಖೆ ನಿವೃತ್ತ ನೌಕರರಾಗಿರುವ ಕನ್ನಿಕಾ ಈಶ್ವರ ಹೆಗಡೆ ಕಳೆದ ಆರು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದಾರೆ. ಕಣ್ಣುಗಳು ಸಹ ಸಂಪೂರ್ಣ ಕಾಣದಾಗಿದ್ದು ಅವರು ಅತ್ತಿತ್ತ ಚಲಿಸಲಾರದ ಪರಿಸ್ಥಿತಿಯಲ್ಲಿದ್ದಾರೆ. ಅವರಿಗೆ ಅಂಚೆ ಇಲಾಖೆಯಲ್ಲಿ ಬರುತ್ತಿದ್ದ ನಿವೃತ್ತಿ ವೇತನ ಪಡೆಯಲು ಖಾತೆಗೆ ಇದೀಗ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕಾಗಿದ್ದು, ಅವರ ಬಳಿ ಆಧಾರ್ ಕಾರ್ಡ್ ಇರಲಿಲ್ಲ, ಈ ಹಿನ್ನೆಲೆಯಲ್ಲಿ ನಿವೃತ್ತಿ ವೇತನ ಪಡೆಯುವುದು ದುಸ್ತರವಾಗಿತ್ತು.

ಎಸ್ ಎಂ ಎಸ್ ಮನವಿ:

whatsapp-image-2017-01-05-at-17-34-59
ಈ ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ನೌಕರಿಯಲ್ಲಿರುವ ಅವರ ಮಗ ರವಿ ಹೆಗಡೆ ಎಂಬವರು ಎಸ್‍ಎಂಎಸ್ ಮೂಲಕ ರಾಜೀವ್‍ಗಾಂಧಿ ವಸತಿ ನಿಗಮದ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಅವರ ಗಮನ ಸೆಳೆದಿದ್ದರು. `ನನ್ನ ತಾಯಿಯವರು ನಿರಂತರ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದು, ಮನೆಯಿಂದ ಹೊರ ಹೋಗುವುದು ಅಸಾಧ್ಯವಾಗಿದೆ. ಹೊನ್ನಾವರ ಉಪ ಅಂಚೆಕಚೇರಿಯಲ್ಲಿ ಅವರ ನಿವೃತ್ತಿ ವೇತನದ ಖಾತೆಯಿದ್ದು, ಇದೀಗ ಅದಕ್ಕೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ, ಆಧಾರ್ ನೋಂದಣಿಗೆ ನೆರವಾಗುವಂತೆ ಅವರು ಮನವಿ ಮಾಡಿದ್ದರು.
ಸ್ಪಂದಿಸಿದ ಜಿಲ್ಲಾಡಳಿತ:

whatsapp-image-2017-01-05-at-17-35-02
ಈ ಎಸ್‍ಎಂಎಸ್ ಮನವಿಯನ್ನು ಜಿಲ್ಲಾಡಳಿತಕ್ಕೆ ಫಾರ್ವರ್ಡ್ ಮಾಡಿದ್ದ ಮುನೀಷ್ ಮೌದ್ಗಿಲ್ ಅವರು ವೃದ್ಧೆಗೆ ನೆರವಾಗುವಂತೆ ಸೂಚನೆ ನೀಡಿದ್ದರು. ವೃದ್ಧೆಯ ಮನೆಗೆ ತಕ್ಷಣ ತೆರಳಿ ಆಧಾರ್ ಕಾರ್ಡ್ ನೋಂದಣಿ ಮಾಡಿಸುವಂತೆ ಅಟಲ್‍ಜಿ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಡಳಿತ ನೀಡಿದ ಸೂಚನೆಯಂತೆ ಸಿಬ್ಬಂದಿಗಳು ಹೊನ್ನಾವರದ ಆಕೆಯ ಮನೆಗೆ ತೆರಳಿ 24ಗಂಟೆಗಳ ಒಳಗಾಗಿ ನೋಂದಣಿ ಕಾರ್ಯ ಮುಗಿಸಿದ್ದಾರೆ.

“ನನ್ನ ತಾಯಿಗೆ ಆಧಾರ್ ಕಾರ್ಡ್ ಮಾಡಿಸಲು ಆಡಳಿತ ವ್ಯವಸ್ಥೆ ತೋರಿಸಿದ ಮುತುವರ್ಜಿಗೆ ಅಭಾರಿಯಾಗಿದ್ದೇವೆ. ಅತ್ತಿತ್ತ ಚಲಿಸಲು ಸಾಧ್ಯವಿಲ್ಲದ ಆಕೆಗೆ ಆಧಾರ ಕಾರ್ಡ್ ಮಾಡಿಸುವುದು ಹೇಗೆ ಎಂಬುವುದೇ ದೊಡ್ಡ ಸಮಸ್ಯೆಯಾಗಿತ್ತು’’ ಎಂದು ರವಿ ಹೆಗಡೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

`ಜಿಲ್ಲೆಯಲ್ಲಿ 21ಸಂಚಾರಿ ಆಧಾರ್ ಕಿಟ್‍ಗಳಿದ್ದು, ತುರ್ತು ಸಂದರ್ಭಗಳಲ್ಲಿ ಮನೆಗಳಿಗೆ ತೆರಳಿ ಆಧಾರ ನೋಂದಣಿ ಕಾರ್ಯವನ್ನು ಸಿಬ್ಬಂದಿ ಮಾಡುತ್ತಿದ್ದಾರೆ’ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹೇಳಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s