ಸ್ವಾಮಿ ವಿವೇಕಾನಂದ ಜಯಂತೋತ್ಸವವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸಲಾಗುವುದು-ಬಸವರಾಜ ರಾಯರೆಡ್ಡಿ

 

ಜನವರಿ 12 ರಂದು ಸ್ವಾಮಿ ವಿವೇಕಾನಂದ ಅವರ 154 ನೇ ಜಯಂತೋತ್ಸವವನ್ನು ರಾಜ್ಯಾದ್ಯಂತ ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ತಿಳಿಸಿದರು.

swami-vivekanandaಇಂದು ವಿಧಾನ ಸೌಧದಲ್ಲಿ ನಡೆದ  ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು  ಜನವರಿ 12 ರಿಂದ 18 ರವರೆಗೆ ಒಂದು ವಾರಗಳ ಕಾಲ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸ್ವಾಮಿ ವಿವೇಕಾನಂದ ಅವರ ತತ್ವ, ವಿಧ್ಯಾರ್ಥಿಗಳ ಸಬಲೀಕರಣ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜನವರಿ 12 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸ್ಥಳೀಯ ಕಾಲೇಜ್ ಒಂದರಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ಸಚಿವರು ಈ ಕುರಿತು ಚರ್ಚಾಕೂಟವನ್ನು ಸಹ ಹಮ್ಮಿಕೊಂಡಿದ್ದು ವಿಜೇತ ಮೂರು ವಿಧ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದರು.  ಅದೇ ಮಾದರಿಯಲ್ಲಿ ಜನರಿ 13 ರಿಂದ 16 ರವರೆಗೆ ರಾಜ್ಯದ 177 ತಾಲ್ಲೂಕು ಕೇಂದ್ರಗಳಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದ ಸಚಿವರು ಜನವರಿ 18 ರಂದು ರಾಜ್ಯಮಟ್ಟದ ಸ್ವಾಮಿ ವಿವೇಕಾನಂದರ ಸಪ್ತಾಹದ ಸಮಾರೋಪ ಸಮಾರಂಭವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ಎಲ್ಲಾ ಜಿಲ್ಲಾ ಕೇಂದ್ರಗಳಿಂದ ತಲಾ 500 ವಿದ್ಯಾರ್ಥಿಗಳಂತೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು ರಾಜ್ಯದಲ್ಲಿರುವ 23 ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ಸಮಾವೇಶದಲ್ಲಿ ಸುಮಾರು 50,000 ವಿದ್ಯಾರ್ಥಿಗಳು ಭಾಗವಹಿಸಲಿದ್ದು ಇದು ಭಾವೈಕ್ಯತಾ ಸಮಾವೇಶ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ಭಾವೈಕ್ಯತೆಯ ಸಂದೇಶವನ್ನು ರವಾನಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದ ಸಚಿವರು ಮೈಸೂರಿನ ರಾಮಕೃಷ್ಣಮಿಷನ್ ಸೇರಿದಂತೆ ಇಂತಹ ಸಂಘಸಂಸ್ಥೆಗಳು ಕೂಡ ಸಮಾವೇಶದಲ್ಲಿ ಪಾಲ್ಗೊಳ್ಳಲಿವೆ ಎಂದರು.

ವಿಧ್ಯಾರ್ಥಿಗಳಿಗೆ ಒಳ್ಳೆಯ ಮಾರ್ಗದರ್ಶನ ಆಚಾರ ವಿಚಾರಗಳನ್ನು ಪ್ರಸ್ತುತ ಪಡಿಸುವುದು ಸ್ವಾಮಿ ವಿವೇಕಾನಂದ ಜಯಂತಿ ಸಪ್ತಾಹದ ಪ್ರಮುಖ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಶಾಸಕರು ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ
ಕಾರ್ಯದರ್ಶಿ ಭರತ್ ಲಾಲ್ ಮೀನಾ ಅವರು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s