ಹಕ್ಕಿಜ್ವರ ಭೀತಿ ಹಿನ್ನೆಲೆ-ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ

ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಮೃಗಾಲಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಗೆ ವೀರೇಶ್, ಕಾರ್ಯನಿರ್ವಾಹಕ ನಿರ್ದೇಶಕರಾದ ಕಮಲಾ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

whatsapp-image-2017-01-06-at-6-56-49-pmರೋಗ ವ್ಯಾಪಕವಾಗಿ ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ಮೃಗಾಲಯಕ್ಕೆ ಒಂದು ತಿಂಗಳು ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಔಷಧಿ ಸಿಂಪಡಿಸುವ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ಹಿಂದೆ ರಷ್ಯಾ, ಚೀನಾ, ಆಸ್ಟ್ರೇಲಿಯಾದಲ್ಲಿ ಮತ್ತು ದೆಹಲಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಇದೀಗ ಭುವನೇಶ್ವರ ಹಾಗೂ ಮೈಸೂರಿನಲ್ಲಿ ಪತ್ತೆಯಾಗಿದೆ. ರೋಗ ಬೇರೆ ಕಡೆಗೆ ಹಬ್ಬುವುದನ್ನು ತಡೆಯುವ ದೃಷ್ಟಿಯಿಂದ ಮೃಗಾಲಯಕ್ಕೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಮೈಸೂರಿಗೆ ಆಗಮಿಸುವ ಪ್ರವಾಸಿಗರ ಪ್ರಮುಖ ಆಕರ್ಷಣೆ ಮೃಗಾಲಯ. ರಜೆ ಘೋಷಣೆಯಿಂದ ಪ್ರವಾಸೋದ್ಯಮಕ್ಕೂ ಪೆಟ್ಟು ಬೀಳುವ ಸಾಧ್ಯತೆ ಇರುತ್ತದೆ. ಹೀಗಾಗಿ ರಜೆ ಅವಧಿಯನ್ನು ಮತ್ತೆ ವಿಸ್ತರಿಸದಿರುವುದು ಸೂಕ್ತ ಎಂದು ಮುಖ್ಯಮಂತ್ರಿಯವರು ಹೇಳಿದರು.
ಮೃಗಾಲಯದ ಮುಂಭಾಗದಲ್ಲಿ ವಾಹನಗಳ ನಿಲುಗಡೆಗೆ ಬಹುಮಹಡಿ ಕಟ್ಟಡ ನಿರ್ಮಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಸೋಮಶೇಖರ್ ಸಹ ಸಭೆಯಲ್ಲಿದ್ದರು.

Advertisements
Posted in CM

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s