ಕೈಗಾರಿಕಾ ಪ್ರದೇಶಗಳ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ದ: ಸಚಿವ ಆರ್ ವಿ ದೇಶಪಾಂಡೆ

0e28e9ba-a57c-41e6-a0e1-0bd3796b9cc6ಕರ್ನಾಟಕ ಸರ್ಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಹಾಗೂ ಸಣ್ಣ ಕೈಗಾರಿಕಾ ಇಲಾಖೆಯ ಮೂಲಕ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುತ್ತಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವರಾದ ಆರ್.ವಿ.ದೇಶಪಾಂಡೆ ತಿಳಿಸಿದರು.

ಬೆಳಗಾವಿ ನಗರದ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ(ಜ.15) 110 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಕ್ಕೆ ಅಡಿಗಲ್ಲು, ಕಾಕತಿ, ಕಣಬರಗಿ(ಆಟೋನಗರ) ಮತ್ತು ಗೋಕಾಕ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಆಟೋನಗರದ ಖಾಯಂ ವಸ್ತುಪ್ರದರ್ಶನ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನೀರು, ವಿದ್ಯುಚ್ಛಕ್ತಿ, ರಸ್ತೆ, ಒಳಚರಂಡಿ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಕೈಗಾರಿಕಾ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಿದೆ ಎಂದರು.

ಕಣಬರಗಿ(ಆಟೋನಗರ) ಕೈಗಾರಿಕಾ ಪ್ರದೇಶದ ಡಬಲ್ ರಸ್ತೆ ಅಭಿವೃದ್ಧಿಗೆ 6.90 ಕೋಟಿ ರೂಪಾಯಿ; ಗೋಕಾಕ ಕೈಗಾರಿಕಾ ಪ್ರದೇಶಕ್ಕೆ 2.10 ಕೋಟಿ ರೂಪಾಯಿ; ಹೊನಗಾ ಕೈಗಾರಿಕಾ ಪ್ರದೇಶದಲ್ಲಿ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ 15.33 ಕೋಟಿ ಮತ್ತು ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ 3.40 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ಸಚಿವ ದೇಶಪಾಂಡೆ ವಿವರಿಸಿದರು.

ಸಣ್ಣ ಕೈಗಾರಿಕೆಗೆ 8.73 ಕೋಟಿ:

a88ebd2b-a82d-4732-aa83-73bb8e617a28
ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ತೋರಿಸಿರುವ ಸರ್ಕಾರವು ಬೆಳಗಾವಿ ಜಿಲ್ಲೆಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 8.73 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಸಚಿವ ದೇಶಪಾಂಡೆ ತಿಳಿಸಿದರು.

 

ಮೊದಲ ತಲೆಮಾರಿನ ಅಂದರೆ ಹೊಸದಾಗಿ ಕೈಗಾರಿಕೆ ಸ್ಥಾಪಿಸುವವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ಬೆಳಗಾವಿಯ ಖಾಯಂ ವಸ್ತುಪ್ರದರ್ಶನ ಸಂಕೀರ್ಣದಲ್ಲಿ ವರ್ಷದಲ್ಲಿ ಕನಿಷ್ಠ 6-8 ವಸ್ತುಪ್ರದರ್ಶನವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

310fd395-bb92-4004-8e4b-bc330e3f761eಕೇಂದ್ರ ಸರ್ಕಾರವು ಬೆಳಗಾವಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಫ್ತು ಕೇಂದ್ರಕ್ಕೆ ಭೂಮಿ ಸೇರಿದಂತೆ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ದೇಶಪಾಂಡೆ ಭರವಸೆ ನೀಡಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s