ಪ.ಜಾ/ಪ.ಪಂ.: 29.77 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಆಂಜನೇಯ ಚಾಲನೆ

anjaneya4ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭಿವೃದ್ಧಿ, ಸಮುದಾಯದ ಪ್ರಗತಿ ಹಾಗೂ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಚಾಲನೆ ನೀಡಿದರು.

ಕೊರಗ ಕಾಲನಿ ಅಭಿವೃದ್ಧಿಗೆ 674 ಲಕ್ಷ:

ಸಮಾಜ ಕಲ್ಯಾಣ ಇಲಾಖೆಯ ಸುಮಾರು ರೂ. 23.03 ಕೋಟಿ ಹಾಗೂ ಕೊರಗ ಕಾಲನಿಗಳ ಅಭಿವೃದ್ಧಿಗೆ ಸುಮಾರು 674 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವರು ಮಂಗಳೂರಿನಲ್ಲಿ ಚಾಲನೆ ನೀಡಿದರು.

ಮಂಗಳೂರು ನಗರದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಮಟ್ಟದ ಅಂಬೇಡ್ಕರ್ ಭವನ ಕಾಮಗಾರಿ, 31 ಲಕ್ಷ ರೂ. ವೆಚ್ಚದಲ್ಲಿ ಗಡಿಪ್ರದೇಶದ ಕಾಮಗಾರಿ, 3.96 ಕೋಟಿ ರೂ. ವೆಚ್ಚದಲ್ಲಿ ನಗರದ ಉರ್ವಾ ಮಾರಿಗುಡಿಯಲ್ಲಿ 100 ಸೀಟುಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆಗೊಂಡಿತು.
ಅಂಬೇಡ್ಕರ್ ಭವನ ನಿರ್ಮಾಣ:

anjaneya2
ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‍ನಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ, ಕಕ್ಕೆಪದವು ಹಾಗೂ ಚೆನೈತ್ತೋಡಿಯಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಹೋಬಳಿ ಮಟ್ಟದ ಅಂಬೇಡ್ಕರ್ ಭವನ, 31 ಲಕ್ಷ ವೆಚ್ಚದಲ್ಲಿ ಗಡಿ ಪ್ರದೇಶದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಪುತ್ತೂರು ತಾಲೂಕಿನಲ್ಲಿ ರೂ. 74 ಲಕ್ಷ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ, 31 ಲಕ್ಷ ವೆಚ್ಚದಲ್ಲಿ ಗಡಿ ಪ್ರದೇಶದ ಕಾಮಗಾರಿ, 20 ಲಕ್ಷ ರೂ. ವೆಚ್ಚದಲ್ಲಿ ನೆಟ್ಟಣಿಗೆ ಮುಡ್ನೂರು ಸ್ಮಶಾನ ಭೂಮಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರಕಿದೆ.
ಹಕ್ಕುಪತ್ರ ವಿತರಣೆ:

anjaneya1
ಸುಳ್ಯ ತಾಲೂಕಿನಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ, ರೂ.75 ಲಕ್ಷ ವೆಚ್ಚದಲ್ಲಿ ಗಡಿ ಪ್ರದೇಶದ ಕಾಮಗಾರಿ, ರೂ.120 ಲಕ್ಷ ವೆಚ್ಚದಲ್ಲಿ 10 ವಿವಿಧ ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ಹಾಗೂ ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಹ 35 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ನಡೆಯಿತು.

ಹಾಡಿ ವಾಸ್ತವ್ಯದ ಭರವಸೆ:

anjaneya5
ಕಳೆದ ವರ್ಷ ಏಪ್ರಿಲ್ 15ರಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರು ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪದ ಕೆರೆಕಾಡು ಎಂಬಲ್ಲಿ ಕೊರಗರ ಕಾಲನಿಯಲ್ಲಿ ವಾಸ್ತವ್ಯ ಹೂಡಿದ್ದಾಗ ಕೊರಗ ಸಮುದಾಯದ ಕಲ್ಯಾಣಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದರು. ಇದರನ್ವಯ ಸುಮಾರು 674 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಯಾಯಿತು. ಮಂಗಳೂರು ತಾಲೂಕಿನ ಕೊರಗ ಕಾಲನಿಗಳ ರಸ್ತೆ ಕಾಂಕ್ರಿಟೀಕರಣ ಮತ್ತು ಸಮುದಾಯ ಭವನಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ರೂ. 365 ಲಕ್ಷ ವೆಚ್ಚದಲ್ಲಿ ಒಟ್ಟು 17 ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

anjaneya-3
ಬಂಟ್ವಾಳ ತಾಲೂಕಿನಲ್ಲಿ ಕೊರಗ ಕಾಲೋನಿಗಳ ರಸ್ತೆ ಕಾಂಕ್ರೀಟೀಕರಣಕ್ಕೆ ರೂ. 150 ಲಕ್ಷ ವೆಚ್ಚದಲ್ಲಿ ಒಟ್ಟು 7 ಕಾಮಗಾರಿಗಳು ಹಾಗೂ ಪುತ್ತೂರು ತಾಲೂಕಿನ ಕೊರಗ ಕಾಲೋನಿಗಳ ರಸ್ತೆ ಕಾಂಕ್ರೀಟಿಕರಣಲ್ಲಿ 159 ಲಕ್ಷ ವೆಚ್ಚದಲ್ಲಿ ಒಟ್ಟು 10 ಕಾಮಗಾರಿಗಳ ಶಂಕುಸ್ಥಾಪನೆಯನ್ನು ಸಚಿವ ಆಂಜನೇಯ ನೆರವೇರಿಸಿದರು.
ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಶಾಸಕರು ಮತ್ತು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s