ಕೇಂದ್ರದ ಬರ ಅನುದಾನ ಸದ್ಭಳಕೆಯಾಗಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

5a69025f-99eb-4b87-a890-d6596f0be361ಬರ ಪರಿಹಾರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ಬಿಡುಗಡೆ ಮಾಡಿರುವ ಅನುದಾನವನ್ನು ಬಳಕೆ ಮಾಡಿಕೊಂಡಿಲ್ಲ ಎಂಬ ವಿರೋಧ ಪಕ್ಷದ ಮುಖಂಡರ ಆರೋಪ ಸಂಪೂರ್ಣ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರ ಬಿಡುಗಡೆ ಮಾಡಿರುವ ಅನುದಾನದಲ್ಲಿ ಒಂದು ರೂಪಾಯಿ ಕೂಡ ಬಾಕಿ ಉಳಿಸಿಕೊಂಡಿಲ್ಲ. ಬರ ಪರಿಹಾರ ಕಾಮಗಾರಿಗಳಿಗೆ ಮತ್ತು ರೈತರ ಬ್ಯಾಂಕ್ ಖಾತೆಗಳಿಗೆ ಹಣ ತುಂಬಲು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂದರು.
ಕೇಂದ್ರದ ಮೇಲೆ ಸುಮ್ಮನೆ ಆರೋಪ ಮಾಡುತ್ತಿಲ್ಲ. ಮನವಿ ಕೊಟ್ಟು ಮೂರು ತಿಂಗಳಾದರೂ ಕೇಂದ್ರದಿಂದ ನಯಾಪೈಸೆ ಅನುದಾನ ಬಂದಿಲ್ಲ. ನೆರವು ನೀಡುವಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದು 15 ದಿನಗಳಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಇದಕ್ಕಿಂತ ಇನ್ನೇನು ಬೇಕು.
ಈವರೆಗೂ ಒಂದು ರೂಪಾಯಿಯನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂದರೆ ವಿರೋಧ ಪಕ್ಷದ ನಾಯಕರು ಇಲ್ಲಿ ಮಾತನಾಡುವ ಬದಲು ಪ್ರಧಾನಿಯವರ ಜೊತೆ ಕುಳಿತು ಹಣ ಬಿಡುಗಡೆ ಮಾಡಿಸುವುದು ಒಳ್ಳೆಯದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಅನಗತ್ಯ ಆರೋಪ ಬೇಡ:
ರಾಜ್ಯದ ಹಿತ ಕಾಯುವ ಬಗ್ಗೆ ಆಸಕ್ತಿ ಇದ್ದರೆ‌ ವಿರೋಧ ಪಕ್ಷದವರು ಮೊದಲು ಈ ಕೆಲಸ ಮಾಡಲಿ. ಅದು ಬಿಟ್ಟು ಅನಗತ್ಯ ಆರೋಪಗಳ ಮೂಲಕ‌ ಜನರನ್ನು ತಪ್ಪು ದಾರಿಗೆಳೆಯಬಾರದು ಎಂದು ನುಡಿದ ಮುಖ್ಯಮಂತ್ರಿಗಳು, ನಾವು ಫಾಲೋಅಪ್ ಮಾಡಿಲ್ಲ ಎಂದು ಅವರು ಹೇಳುತ್ತಾರೆ. ಎಷ್ಟು ಬಾರಿ ಮಾಡಬೇಕು. ನಮ್ಮ ಕೃಷಿ ಮತ್ತು ಕಂದಾಯ ಸಚಿವರು ಕೇಂದ್ರದ ಮಂತ್ರಿ ಗಳನ್ನು ಭೇಟಿಯಾಗಿದ್ದಾರೆ. ನಾನು ಸಹ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ಜೊತೆ ಮಾತನಾಡಿದ್ದೇನೆ. ಸರ್ವಪಕ್ಷ ನಿಯೋಗದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರೂ ಇದ್ದರು ಎಂದು ಮುಖ್ಯಮಂತ್ರಿ ಯವರು ಹೇಳಿದರು.
ಕಂಬಳಕ್ಕೆ ಸುಗ್ರೀವಾಜ್ಞೆ:
ಕಂಬಳ‌‌ ಒಂದು ಗ್ರಾಮೀಣ ಕ್ರೀಡೆ. ಅದಕ್ಕೆ ನಮ್ಮ ವಿರೋಧವಿಲ್ಲ. ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಜೊತೆಗೆ ಫೆಬ್ರವರಿ 6ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು ಅಲ್ಲಿಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯವರು ತಿಳಿಸಿದರು.

ಎರಡು ದಿನಗಳಲ್ಲಿ ಹೊಸ ಡಿಜಿಪಿ:
ನೂತನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ನೇಮಕ ಸಂಬಂಧ ಎರಡು ಮೂರು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಲೋಕಾಯುಕ್ತ ನೇಮಕ ಸಂಬಂಧ ರಾಜ್ಯಪಾಲರು ಕೆಲವೊಂದು ಸ್ಪಷ್ಟೀಕರಣ ಕೇಳಿದ್ದಾರೆ. ಸ್ಪಷ್ಟೀಕರಣದೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರಿಗೆ ವಾಪಸ್ ಕಳುಹಿಸಲಾಗುವುದು ಎಂದು ಹೇಳಿದರು.

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s