ನಮ್ಮ ಸರ್ಕಾರ ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯ ನೆರವು ನೀಡಿದೆ:ಸಿದ್ದರಾಮಯ್ಯ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಪೊಲೀಸ್ ಇಲಾಖೆ ಹೆಚ್ಚು ದಕ್ಷತೆಯಿಂದ ಹಾಗೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಅನೇಕ ಸೌಲಭ್ಯ ಹಾಗೂ ಸೌಕರ್ಯಗಳನ್ನು ಒದಗಿಸಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗೆ ಹೊಸದಾಗಿ ಸೇರ್ಪಡೆಯಾಗಿರುವ ಆಧುನಿಕ ತಂತ್ರಜ್ಞಾನ ಸೌಲಭ್ಯ ಹೊಂದಿರುವ 102 ಬಸ್‍ಗಳಿಗೆ ಚಾಲನೆ ನೀಡಿ  ಮಾತನಾಡಿದ ಮುಖ್ಯಮಂತ್ರಿಗಳು ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ.  ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.  ಈ 102 ವಾಹನಗಳಿಗೆ 24 ಕೋಟಿ ರೂ. ಖರ್ಚು ತಗಲಿದ್ದು ಈಗಾಗಲೇ ಸುಮಾರು 300 ವಾಹನಗಳನ್ನು ಗಸ್ತು ತಿರುಗುವ ಪೊಲೀಸರಿಗೆ ನೀಡಲಾಗಿದೆ ಎಂದು ಅವರು ಮಾತನಾಡಿದರು.

ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವಾಗಲು, ಅಪರಾಧಗಳನ್ನು ನಿಯಂತ್ರಿಸಲು ವೇಗ ಹೊಂದಿರುವ ವಾಹನಗಳ ಅಗತ್ಯವಿದೆ ಎಂಬುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.  ನಮ್ಮ ಸರ್ಕಾರ ಬಂದಮೇಲೆ ಬೆಂಗಳೂರು ನಗರ  ಹಾಗೂ ಇತರ ನಗರಗಳಲ್ಲಿ ಗಸ್ತು ತಿರುಗುವ ಹಾಗೂ ಅಪರಾಧಗಳನ್ನು ನಿಯಂತ್ರಿಸುವ ಕೆಲಸವನ್ನು ಈ ವಾಹನಗಳು ಮತ್ತು ವಾಹದಲ್ಲಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಶೌಚಾಲಯ ಸೌಲಭ್ಯ ಹೊಂದಿರುವ ವಾಹನಗಳನ್ನು ಒದಗಿಸುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಪೊಲೀಸ್ ಸಿಬ್ಬಂದಿಗೆ ಕ್ಯಾಂಟಿನ್ ಸೌಲಭ್ಯ, ಆರೋಗ್ಯ ತಪಾಸಣೆಗೆ ವರ್ಷಕ್ಕೆ 1,000 ರೂ. ನೀಡಲಾಗುತ್ತಿದೆ.  ಅಲ್ಲದೆ ಪೊಲೀಸರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಿ.ಬಿ.ಎಸ್.ಸಿ. ಶಾಲೆಯ ಮಾದರಿಯಂತೆ ಬೆಂಗಳೂರು ಮತ್ತು ಮೈಸೂರುಗಳಲ್ಲಿ ಈಗಾಗಲೇ ಶಾಲೆ ಪ್ರಾರಂಭಿಸಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ವಲಯಗಳಲ್ಲೂ ಶಾಲೆಗಳನ್ನು ತೆರೆಯಲಾಗುವುದು ಎಂದರು.

1ಅಪರಾಧ ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗದಿದ್ದರೂ, ಅಪರಾಧಗಳನ್ನು ನಿಯಂತ್ರಿಸಿ ಕಾನೂನಿನ ಬಗ್ಗೆ ಜನರಲ್ಲಿ ಗೌರವ ಬರುವಂತಹ ಕೆಲಸವನ್ನು  ಪೊಲೀಸರು ಮಾಡಬೇಕು ಎಂದ ಮುಖ್ಯಮಂತ್ರಿಗಳು ದಕ್ಷತೆಯಿಂದ ಕೆಲಸ ನಿರ್ವಹಿಸಲು ಎಲ್ಲಾ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.  ಈಗ 40 ಕಿ.ಮಿ. ಗೆ ಒಂದರಂತೆ ಗಸ್ತು ತಿರುಗುವ ವಾಹನವಿದ್ದು ಮುಂದಿನ ದಿನಗಳಲ್ಲಿ 20 ಕಿ.ಮಿ. ಗೆ ಒಂದರಂತೆ ವಾಹನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮಾತನಾಡಿದ ಮುಖ್ಯಮಂತ್ರಿಗಳು ಸುಮಾರು 11,000 ಪೊಲೀಸ್ ಸಿಬ್ಬಂದಿಗಳಿಗೆ ಮುಂಬಡ್ತಿ ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಸುಮಾರು ವರ್ಷಗಳ ನಂತರ ಸಶಸ್ತ್ರ ಮೀಸಲು ಪಡೆ ವಿಭಾಗಕ್ಕೆ  102 ವಾಹನಗಳನ್ನು ಖರೀದಿ ಮಾಡುತ್ತಿರುವುದು ಇದೇ ಮೊದಲು ಎಂದು ಮಾತನಾಡಿದ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ಈ ವಾಹನಗಳಲ್ಲಿ ಆಧುನಿಕವಾಗಿ, ವೃತ್ತಿಗೆ ಬೇಕಾದ ಎಲ್ಲಾ ಸಲಕರಣೆಗಳು ಇವೆ.  ಅಲ್ಲದೆ ಪೊಲೀಸ್ ಸಿಬ್ಬಂದಿಯೂ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕಾಗಿದ್ದು ವಾಹನಗಳನ್ನು ಆಧುನಿಕವಾಗಿ ನಿರ್ಮಾಣಗೊಳಿಸಲಾಗಿದೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮುಖ್ಯಮಂತ್ರಿಗಳು ಇಲಾಖೆಗೆ 1000 ವಾಹನಗಳನ್ನು ಖರೀದಿ ಮಾಡಲು ಒಪ್ಪಿಗೆ ನೀಡಿದ್ದಾರೆ.  ಇಲಾಖೆ ಸಿಬ್ಬಂದಿಗೆ ಹಲವು ರೀತಿಯ ಭತ್ಯೆಗಳು, ಸಂಬಳ ಪರಿಷ್ಕರಣೆ ಮತ್ತಿತರ ಸೌಲಭ್ಯ ನೀಡಲಾಗಿದ್ದು ಜನರ ನಿರೀಕ್ಷೆಗೆ ತಕ್ಕಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಗೃಹ ಸಚಿವರ ಆಪ್ತ ಸಲಹೆಗಾರ ಕೆಂಪಯ್ಯ, ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ಪೊಲೀಸ್ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisements
Posted in CM

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s