ಸಂಗೊಳ್ಳಿ ಗ್ರಾಮದ ಅಭಿವೃದ್ದಿಗೆ ಮಾರ್ಚ್ ಅಂತ್ಯದೊಳಗೆ 75ಲಕ್ಷ ಅನುದಾನ:ಮುಖ್ಯಮಂತ್ರಿ ಸಿದ್ದರಾಮಯ್ಯ

99d09442-d5d5-4af9-a861-2dc43571ddf8ಸಂಗೊಳ್ಳಿ ರಾಯಣ್ಣನ ಹುಟ್ಟೂರಾದ ಸಂಗೊಳ್ಳಿ ಗ್ರಾಮದ ಅಭಿವೃದ್ಧಿಗೆ ಮಾರ್ಚ್ ಅಂತ್ಯದ ಒಳಗೆ ೭೫ ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಏರ್ಪಡಿಸಲಾದ ಸಂಗೊಳ್ಳಿ ರಾಯಣ್ಣ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ರಾಯಣ್ಣ ಸ್ಮಾರಕ ಉದ್ಯಾನ ನಿರ್ಮಾಣ:       

cc799fb9-4808-404b-85d1-b5f64a2332b4            

ರಾಯಣ್ಣನನ್ನು ನೇಣುಗಂಬಕ್ಕೇರಿಸಲಾದ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ೧೨.೩೦ ಎಕರೆ ಜಾಗೆಯಲ್ಲಿ ಆಧುನಿಕ ತಂತ್ರಜ್ಜಾನದ ವಸ್ತುಸಂಗ್ರಹಾಲಯ ಸ್ಥಾಪನೆ ಮಾಡಲಾಗುವುದು ಮತ್ತು ನಂದಗಡದಲ್ಲಿ ರಾಯಣ್ಣ ಸ್ಮಾರಕ ಉದ್ಯಾನ ನಿರ್ಮಾಣ ಮಾಡಲಾಗುವದು ಎಂದು ಮುಖ್ಯಮಂತ್ರಿಗಳು ಹೇಳಿದರು.

 

 

 

 

 

ರಾಯಣ್ಣ ಶೌರ್ಯ ಅಕಾಡೆಮಿ:   

d1038116-ef64-46a7-bec7-4977c8b84809             

ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸೆರೆ ಸಿಕ್ಕ ಕೆರೆಯನ್ನು ಕೂಡ ಅಭಿವೃದ್ಧಿಪಡಿಸಲಾಗುವುದು. ಸಂಗೊಳ್ಳಿಯಲ್ಲಿ ನೂರು ಎಕರೆ ಜಾಗೆಯಲ್ಲಿ ಸೈನಿಕ ಶಾಲೆ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯ ಅಕಾಡೆಮಿ ಸ್ಥಾಪನೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಯಾತ್ರಾ ಸ್ಥಳವಾಗಿ ಅಬಿವೃದ್ದಿ:    

1b9b4f0b-4f60-45d0-8524-57e02de75d74            

ದೇಶಪ್ರೇಮಕ್ಕೆ ಉದಾಹರಣೆಯಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟೂರು ಸಂಗೊಳ್ಳಿ ಹಾಗೂ ನೇಣುಗಂಬಕ್ಕೆ ಏರಿಸಿದ ನಂದಗಡವನ್ನು ಯಾತ್ರಾ ಸ್ಥಳವನ್ನಾಗಿ ಸರ್ಕಾರ ಅಭಿವೃದ್ಧಿಪಡಿಸಲಿದೆ.ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಶಾಶ್ವತ ಪ್ರಾಧಿಕಾರ ಆಗಿದ್ದು, ಈ ಪ್ರಾಧಿಕಾರದ ವತಿಯಿಂದ ಸಂಗೊಳ್ಳಿ ಹಾಗೂ ನಂದಗಡ ಮಾತ್ರವಲ್ಲದೇ ಸುತ್ತಮುತ್ತಲಿನ ಗ್ರಾಮಗಳನ್ನು ಕೂಡ ಅಭಿವೃದ್ಧಿಪಡಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಉಮಾಶ್ರೀ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ಸಚಿವ ಎ.ಮಂಜು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮತ್ತಿತರರು ಉಪಸ್ಥಿತರಿದ್ದರು. ಬೈಲಹೊಂಗಲ ಶಾಸಕ ವಿ.ಐ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s