ಭಾರತ ಭಾಗ್ಯ ವಿಧಾತ: ಧ್ವನಿ-ಬೆಳಕು ಕಾರ್ಯಕ್ರಮಕ್ಕೆ ವರ್ಣರಂಜಿತ ಚಾಲನೆ

e872dba5-c432-4d1f-af73-fb589e6fa202ಭಾರತದಲ್ಲಿ ಸಂವಿದಾನ ಇರುವವರೆಗೂ ಡಾ.ಬಿ.ಆರ್. ಅಂಬೇಡ್ಕರ್ ಅವರು ಅಮರ, ಕಾನೂನಿಗಿಂತ ದೊಡ್ಡವರಿಲ್ಲ ಎನ್ನುವ ಮಾತಿದೆ, ಆ ಕಾನೂನುಗಳ ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್  ಎಂದು ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಅವರು ಹೇಳಿದರು.

ec13c443-f04c-4d60-b947-321da249aad7 ಅವರು ಬೆಂಗಳೂರು ವಿಶ್ವವಿದ್ಯಾನಿಲಯ ಆವರಣದ ಕಲಾಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ಭಾರತ ಭಾಗ್ಯ ವಿಧಾತ”-ಧ್ವನಿ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು ಶೀರ್ಷಿಕೆ ಸಹ ಅದ್ಭುತವಾಗಿದೆ ಎಂದರು.

f4e8b525-568a-4e17-acd8-3f183cebef5eರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ನಡೆಯಲಿರುವ ಈ ಕಾರ್ಯಕ್ರಮ ತಮ್ಮ ಕ್ಷೇತ್ರದಲ್ಲಿ ಉದ್ಘಾಟನೆಗೊಳ್ಳುತ್ತಿರುವುದು ಸಂತಸದ ವಿಷಯ, ಇದೊಂದು ಯಶಸ್ವಿ ಕಾರ್ಯಕ್ರಮವಾಗಲಿ ಎಂದು ಶುಭ ಹಾರೈಸಿದರು.

5286f97d-9926-451b-ad8c-40afbbb35518ಬೆಂಗಳೂರು ಮಹಾಪೌರರಾದ ಶ್ರೀಮತಿ ಪದ್ಮಾವತಿ ಅವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಶುಭಕೋರಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ವಾರ್ತಾ ಇಲಾಖೆಯನ್ನು ಶ್ಲಾಘಿಸಿದರು.

287fc36d-6590-4d13-aacd-e3c4e1119973ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅವರು ಈ ಕಾರ್ಯಕ್ರಮವನ್ನು ರಚಿಸಿ ನಿರ್ದೇಶನ ಮಾಡಿರುವ ಬಿ.ಎಂ.ಗಿರಿರಾಜ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಕಲಾ ನಿರ್ದೇಶಕ ಶಶಿಧರ ಅಡಪ, ಸಾಹಿತಿ ಕೆ.ವೈ.ನಾರಾಯಣ್ ಸ್ವಾಮಿ ಸೇರಿದಂತೆ ಗಣ್ಯರಿಗೆ ಪುಷ್ಪಗುಚ್ಚ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಕಂಬಿ, ಉಪ ನಿರ್ದೇಶಕ ದೇವರಾಜಯ್ಯ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಧ್ವನಿ ಬೆಳಕು ಭಾರತ ಭಾಗ್ಯ ವಿಧಾತ ಸಾಂಸ್ಕೃತಿಕ ಕಾರ್ಯಕ್ರಮ ಅನಾವರಣಗೊಂಡಿತು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s