ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ:ಸಚಿವ ರಮೇಶ್ ಕುಮಾರ್

16508190_1464578580219494_2986865350230387221_nರಾಜ್ಯದ  146 ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರ ಉಚಿತ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್‍ಕುಮಾರ್ ಅವರು ಹೇಳಿದರು.

ಬೆಂಗಳೂರಿನ ಜಯನಗರದ ಸಂಜಯ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮಕ್ಕಳ (ಎಂ.ಸಿ.ಹೆಚ್) ಕಟ್ಟಡವನ್ನು ಉದ್ಫಾಟಿಸಿ ಮಾತನಾಡಿ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಕೇಂದ್ರ ಸರ್ಕಾರ ಪ್ರಾರಂಭಿಸಿರುವ ಪ್ರಧಾನಮಂತ್ರಿ ಜನ ಔಷಧಿ 200 ಮಳಿಗೆಗಳನ್ನು ರಾಜ್ಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಪ್ರಾರಂಭಿಸುವ ಗುರಿಯನ್ನು ಹೊಂದಿದೆ ಎಂದರು.

ಹೆಲ್ತ್ ಕಾರ್ಡ್ ಯೋಜನೆ:

ದೇಶದಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ರಾಜ್ಯ ಕರ್ನಾಟಕ.  ರಾಜ್ಯದಲ್ಲಿ ಈಗ ಒಟ್ಟು 53 ಮೆಡಿಕಲ್ ಕಾಲೇಜುಗಳು ಇದ್ದು 2053 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 146 ತಾಲ್ಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳು ಹಾಗೂ 31 ಜಿಲ್ಲಾ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.  ಸರ್ಕಾರ ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಈಗಿರುವ ಹನ್ನೊಂದು ವಿವಿಧ ಯೋಜನೆಗಳನ್ನು ಒಂದೇ ವೇದಿಕೆಯಡಿ ತರಲು ನಿರ್ಧರಿಸಿದ್ದು ಶೀಘ್ರದಲ್ಲಿ ಆಧಾರ್ ಕಾರ್ಡ್ ಸಹಾಯದೊಂದಿಗೆ ಯುನಿವರ್ಸಲ್ ಹೆಲ್ತ್ ಕಾರ್ಡ್ ನೀಡಲು ಯೋಜನೆ ರೂಪಿಸಿದೆ.

ಜಯನಗರದ ಸಂಜಯ್ ಗಾಂಧಿ ಆಸ್ಪತ್ರೆಯನ್ನು ಸ್ಥಳಾಂತರಿಸುವ ಕಾರ್ಯ ಪ್ರಾರಂಭವಾಗಲಿದ್ದು ಈಗಿರುವ ಸಾರ್ವಜನಿಕ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಉನ್ನತೀಕರಿಸಲು ತೀರ್ಮಾನಿಸಲಾಗಿದೆ. ಇದೇ ಆವರಣದಲ್ಲಿ ಆಯುಷ್ ವಿಭಾಗವನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s