ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ನಿಯಂತ್ರಿಸಲು ಬಿಗಿ ಕ್ರಮ: ಸಚಿವ ಕೆ ಜೆ ಜಾರ್ಜ್

2ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ತಡೆಯಲು ಬಿಬಿಎಂಪಿ ವತಿಯಿಂದ ಸಾರ್ವಜನಿಕ ತಿಳುವಳಿಕೆ ಪ್ರಕಟಣೆ ನೀಡಲಾಗಿದ್ದು, ವಸತಿ ವಲಯಗಳಲ್ಲಿ ಅನುಮತಿಸಬಹುದಾದ ಉಪಯೋಗಗಳಿಗೆ ವಿರುದ್ದವಾಗಿ ಚಟುವಟಿಕೆ ನಡೆಸುತ್ತಿರುವ ವಾಣಿಜ್ಯೋದ್ಯಮಿಗಳ ಪಟ್ಟಿ ಮಾಡಿ ಅಂತಹ ಚಟುವಟಿಕೆ ಮುಚ್ಚಿಸಲು ಕ್ರಮ ಕೈಗೊಳ್ಳುವಂತೆ ಪಾಲಿಕೆಯ ಆರೋಗ್ಯ ನಿರೀಕ್ಷಕರುಗಳಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಸಚಿವ ಕೆ.ಜೆ ಜಾರ್ಜ್ ಅವರು ವಿಧಾನಸಭೆಗೆ ತಿಳಿಸಿದರು.

ಶಾಸಕ ಎನ್.ಎ ಹ್ಯಾರಿಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭವಿಷ್ಯದಲ್ಲಿ ವಸತಿ ಪ್ರದೇಶದಲ್ಲಿ ಅನಧಿಕೃತವಾಗಿ ವಸತಿಯೇತರ ಚಟುವಟಿಕೆಗಳಿಗೆ ಟ್ರೇಡ್ ಲೈಸೆನ್ಸ್ ನೀಡುವಾಗ ಅಂತಹ ಕಟ್ಟಡಗಳಿಗೆ ನೀಡಲಾದ ನಕ್ಷೆ ಮಂಜೂರಾತಿ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರದಲ್ಲಿ ನೀಡಲಾದ ಉಪಯೋಗಗಳಿಗೆ ಮಾತ್ರ ಅನುಮತಿಸಲು ಮತ್ತು ಅನಧಿಕೃತವಾಗಿ ವಸತಿಯೇತರ ಚಟುವಟಿಕೆ ಕೈಗೊಳ್ಳದಂತೆ ಪಾಲಿಕೆಯ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಇದಲ್ಲದೆ ವಾಣಿಜ್ಯ ತೆರಿಗೆ, ಅಬಕಾರಿ, ತೂಕ ಮತ್ತು ಅಳತೆ ಮಾಪನ ಇಲಾಖೆ, ಜಲಮಂಡಳಿ, ಬೆಸ್ಕಾಂ ಇಲಾಖೆಗಳು ಇಂತಹ ವಸತಿಯೇತರ ಚಟುವಟಿಕೆಗಳಿಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಪಾಲಿಕೆಯಿಂದ ಮಂಜೂರಾದ ನಕ್ಷೆ ಮತ್ತು ಸ್ವಾಧಿನಾನುಭವ ಪ್ರಮಾಣಪತ್ರ ಪಡೆದು ಅನುಮತಿಸಿದ ಉದ್ದೇಶಗಳಿಗೆ ಅನುಮತಿ ನೀಡಲು ನಿರ್ದೇಶನ ನೀಡಲಾಗುವುದು ಎಂದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s