3ಕೋಟಿ ರೂ. ವೆಚ್ಚದಲ್ಲಿ ದೇಸೀ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರ:ಸಚಿವ ಎ ಮಂಜು

72ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರಾದ ಎ. ಮಂಜು ಅವರು ಹೇಳಿದರು.
ತಾಲೂಕಿನ ಮುನಿರಾಬಾದಿನ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
3ದೇಶಿ ತಳಿಗಳಿಂದ ಗುಣಮಟ್ಟದ ಹಾಲು ಉತ್ಪಾದನೆಯ ಜೊತೆಗೆ ಜನರ ಆರೋಗ್ಯ ಸುಧಾರಣೆ ಸಾಧ್ಯ ಎನ್ನುವ ಅಂಶವನ್ನು ತಜ್ಞರು ಸಂಶೋಧನೆಗಳಿಂದ ದೃಢಪಡಿಸಿದ್ದಾರೆ. ದೇಶಿ ತಳಿ ದನಗಳ ಸಂರಕ್ಷಣೆ ಹಾಗೂ ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್‍ಗಿಡ್ಡ, ಕೃಷ್ಣಾ, ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ. ಇದಕ್ಕಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮುನಿರಾಬಾದಿನಲ್ಲಿ ದೇಸಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕಟ್ಟಡ ಹಾಗೂ ಅಗತ್ಯ ಉಪಕರಣಗಳ ಖರೀದಿಗೆ 3 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಬರುವ 6 ತಿಂಗಳ ಒಳಗಾಗಿ ಈ ಕೇಂದ್ರ ಪ್ರಾರಂಭಗೊಂಡು ಲೋಕಾರ್ಪಣೆಯಾಗಲಿದೆ. ದೇಸಿ ಹೋರಿಗಳಿಂದ ವೀರ್ಯವನ್ನು ಸಂಗ್ರಹಿಸಿ, ಸಂಸ್ಕರಿಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೆ, ಆಯಾ ಪ್ರದೇಶದ ಭೌಗೋಳಿಕ ಹವಾಗುಣಕ್ಕೆ ಹೊಂದಿಕೊಳ್ಳುವಂತಹ ದೇಶೀಯ ತಳಿಗಳ ದನಗಳನ್ನು ಆಯಾ ಭಾಗಕ್ಕೆ ಪೂರೈಕೆಯಾಗುವ ರೀತಿಯಲ್ಲಿ ವೀರ್ಯ ಸಂಸ್ಕರಣಾ ಕೇಂದ್ರ ಕಾರ್ಯ ನಿರ್ವಹಿಸಲಿದೆ. ಇದಕ್ಕಾಗಿ 6. 55 ಕೋಟಿ ರೂ. ಅನುದಾನವನ್ನು 2017-18 ನೇ ಸಾಲಿಗೆ ಒದಗಿಸಲಾಗುವುದು ಎಂದು ಸಚಿವರು ಹೇಳಿದರು.
4ಪಶುವೈದ್ಯಕೀಯ ಡಿಪ್ಲೋಮಾ ಕಾಲೇಜು :
ಕೊಪ್ಪಳ ತಾಲೂಕಿನ ಮುನಿರಾಬಾದಿನಲ್ಲಿ ಪಶುಸಂಗೋಪನೆ ಇಲಾಖೆಗೆ ಸೇರಿದ ಸಾಕಷ್ಟು ಭೂಮಿ ಲಭ್ಯವಿದ್ದು, ಇಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭ ಮಾಡುವಂತೆ ಸ್ಥಳೀಯ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮನವಿ ಸಲ್ಲಿಸಿದ್ದು, ಈಗಾಗಲೆ ಪಶುವೈದ್ಯಕೀಯ ಕಾಲೇಜು ಬೇರೆ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ. ಪಶು ವೈದ್ಯರ ನೇಮಕದ ಜೊತೆಗೆ ಪಶು ವೈದ್ಯ ಸಹಾಯಕರ ಹುದ್ದೆಗಳೂ ಸಹ ಹೆಚ್ಚು ಖಾಲಿ ಇರುವುದರಿಂದ, ಇದಕ್ಕೆ ಪೂರಕವಾಗುವಂತೆ ಮುನಿರಾಬಾದಿನಲ್ಲಿ ಪಶುವೈದ್ಯಕೀಯ ಡಿಪ್ಲೋಮಾ ಕಾಲೇಜು ಪ್ರಾರಂಭಿಸುವ ಉದ್ದೇಶವಿದ್ದು, ಈ ಕುರಿತು ಬರುವ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಸಚಿವ ಎ. ಮಂಜು ಅವರು ಹೇಳಿದರು.
5550 ಪಶುವೈದ್ಯರ ನೇರ ನೇಮಕಾತಿ :
ರಾಜ್ಯದಲ್ಲಿ ಪಶು ವೈದ್ಯಾಧಿಕಾರಿಗಳ ವೃಂದದ 695 ಹುದ್ದೆಗಳು ಖಾಲಿ ಇದ್ದು, ಈ ಪೈಕಿ 550 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಶೀಘ್ರ ಭರ್ತಿ ಮಾಡಲಾಗುವುದು. ಅಲ್ಲದೆ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ 371(ಜೆ) ಅಡಿ 116 ಪಶು ವೈದ್ಯರನ್ನು ಕೂಡ ಶೀಘ್ರ ಭರ್ತಿ ಮಾಡಲಾಗುವುದು. 1512 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವರಾದ ಎ. ಮಂಜು ಅವರು ಹೇಳಿದರು.
6ಎಲ್ಲ ಹೋಬಳಿಗಳಿಗೆ ಆ್ಯಂಬುಲೆನ್ಸ್ :
ಮನೆ ಬಾಗಿಲಿಗೆ ಪಶುವೈದ್ಯ ಸೇವೆ ನೀಡುವ ಉದ್ದೇಶದಿಂದ ಸಂಚಾರಿ ಪಶು ಚಿಕಿತ್ಸಾ ಸೌಲಭ್ಯವನ್ನು ತಾಲೂಕು ಮಟ್ಟದಿಂದ ಹೋಬಳಿ ಮಟ್ಟಕ್ಕೂ ವಿಸ್ತರಿಸಲಾಗಿದ್ದು, ಈಗಾಗಲೆ ರಾಜ್ಯದ 45 ಹೋಬಳಿಗಳಿಗೆ ಆ್ಯಂಬುಲೆನ್ಸ್ ಒದಗಿಸಲಾಗಿದೆ. ಈ ವರ್ಷ ಇನ್ನೂ 50 ಹೋಬಳಿಗಳಿಗೆ ಆ್ಯಂಬುಲೆನ್ಸ್ ಮಂಜೂರು ಮಾಡಲಾಗುತ್ತಿದ್ದು, ಬರುವ ದಿನಗಳಲ್ಲಿ ಎಲ್ಲ ಹೋಬಳಿಗಳಿಗೆ ಸಂಚಾರಿ ಪಶು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲು ಇಲಾಖೆ ಉದ್ದೇಶಿಸಿದೆ ಎಂದು ಸಚಿವರು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s