ಕುಡಿಯುವ ನೀರು ಪೂರೈಕೆಗೆ ಕಟ್ಟು ನಿಟ್ಟಿನ ಸೂಚನೆ:ಮುಖ್ಯಮಂತ್ರಿ ಸಿದ್ದರಾಮಯ್ಯ

cm-181ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ವಿಮಾನ ನಿಲ್ದಾಣಕ್ಕೆ ರಾಯಚೂರು ಜಿಲ್ಲೆಗೆ ತೆರಳುವ ಸಲುವಾಗಿ ವಿಶೇಷ ವಿಮಾನ ಮೂಲಕ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನೀರು ಪೂರೈಕೆಗೆ ಸೂಚನೆ:
ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಎದುರಿಸಲು ನಮ್ಮ ಸರ್ಕಾರ ಸಜ್ಜಾಗಿದೆ. ಈಗಾಗಲೆ ಜಾನುವಾರುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಮೇವು ಬ್ಯಾಂಕ್, ಗೋಶಾಲೆಗಳನ್ನು ತೆರೆಯಲಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಸಭೆ ಕೈಗೊಂಡು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ, ಕೂಡಲೆ ನೀರು ಒದಗಿಸಬೇಕು, ನೀರಿನ ಮೂಲ ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು, ಖಾಸಗಿ ಬೋರ್‍ ವೆಲ್ ಬಾಡಿಗೆಗೆ ಪಡೆದು, ನೀರು ಪೂರೈಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಷ್ಟೇ ಅನುದಾನ ಖರ್ಚಾದರೂ ಪರವಾಗಿಲ್ಲ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೂಚನೆ ನೀಡಲಾಗಿದೆ. ಬರಗಾಲದ ಕುರಿತು ಈಗಾಗಲೆ ಅಧಿವೇಶನದಲ್ಲಿಯೂ ಸಹ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಗೋಶಾಲೆ:
ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಐದು ಗೋಶಾಲೆ ತೆರೆಯಲಾಗಿದೆ. ಅಗತ್ಯಕ್ಕನುಗುಣವಾಗಿ ಶೀಘ್ರದಲ್ಲೇ ಇನ್ನಷ್ಟು ಗೋಶಾಲೆ ತೆರೆಯಲು ಸೂಚನೆ ನೀಡಲಾಗಿದೆ. ಮುಂಗಾರು ಬೆಳೆಹಾನಿ ವಿಚಾರದಲ್ಲಿ 4702 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 1782 ಕೋಟಿ ರೂ. ನೀಡಲು ಒಪ್ಪಿಗೆ ನೀಡಿದ್ದು, ಆ ಪೈಕಿ ಈವರೆಗೆ 450 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಮಾಡಿದೆ. ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಏಕಕಾಲಕ್ಕೆ ಬಿಡುಗಡೆ ಮಾಡಿದರೆ ಮಾತ್ರ ರೈತರಿಗೆ ಇನ್‍ಪುಟ್ ಸಬ್ಸಿಡಿಯನ್ನು ಸಮರ್ಪಕವಾಗಿ ನೀಡಲು ಸಾಧ್ಯವಾಗಲಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ ಸಂದರ್ಭದಲ್ಲಿ ಪರಿಹಾರ ಅನುದಾನವನ್ನು ಹಂತ, ಹಂತವಾಗಿ ಬಿಡುಗಡೆ ಮಾಡಿದರೆ, ರೈತರಿಗೆ ತಲುಪಿಸುವುದು ಕಷ್ಟವಾಗಲಿದೆ, ಇನ್‍ಪುಟ್ ಸಬ್ಸಿಡಿಯನ್ನು ರೈತರಿಗೆ ಒಟ್ಟಿಗೇ ಕೊಡಬೇಕಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಒದಗಿಸುವ ಪರಿಹಾರ ಮೊತ್ತವನ್ನು ಒಟ್ಟಿಗೆ ಬಿಡುಗಡೆ ಮಾಡುವಂತೆ ಇತ್ತೀಚೆಗೆ ಮನವಿ ಸಲ್ಲಿಸಲಾಗಿದೆ.

ಬೀದರ್, ಗುಲಬರ್ಗಾ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿಗೆ ಪರಿಹಾರ ಕಲ್ಪಿಸಲು 386 ಕೋಟಿ ರೂ., ರಾಜ್ಯದಲ್ಲಿನ ತೀವ್ರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಸಲುವಾಗಿ 800 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದಕ್ಕೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಪ್ರಸಕ್ತ ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ 3310 ಕೋಟಿ ರೂ. ಒದಗಿಸಲು ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಂರಕ್ಷಣೆ ನಿಟ್ಟಿನಲ್ಲಿ 05 ಕಡೆ ಗೋಶಾಲೆಗಳನ್ನು ತೆರೆಯಲಾಗಿದೆ. ಬರುವ ತಿಂಗಳು ಇನ್ನೂ ಐದು ಗೋಶಾಲೆಗಳನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಲೋಕೋಪಯೋಗಿ ಸಚಿವರಾದ ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ. ಪಾಟೀಲ್ ಮತ್ತು ಗಣ್ಯರು ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s