ಕೇಂದ್ರದಿಂದ ಪರಿಹಾರ ಬಿಡುಗಡೆ ನಿರೀಕ್ಷೆ:ಮುಖ್ಯಮಂತ್ರಿ ಸಿದ್ದರಾಮಯ್ಯ

cmಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಐದು ಗೋಶಾಲೆ ತೆರೆಯಲಾಗಿದೆ. ಅಗತ್ಯಕ್ಕನುಗುಣವಾಗಿ ಶೀಘ್ರದಲ್ಲೇ ಇನ್ನಷ್ಟು ಗೋಶಾಲೆ ತೆರೆಯಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮುಂಗಾರು ಬೆಳೆಹಾನಿ ವಿಚಾರದಲ್ಲಿ 4702 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 1782 ಕೋಟಿ ರೂ. ನೀಡಲು ಒಪ್ಪಿಗೆ ನೀಡಿದ್ದು, ಆ ಪೈಕಿ ಈವರೆಗೆ 450 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಮನವಿ:
ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಏಕಕಾಲಕ್ಕೆ ಬಿಡುಗಡೆ ಮಾಡಿದರೆ ಮಾತ್ರ ರೈತರಿಗೆ ಇನ್‍ಪುಟ್ ಸಬ್ಸಿಡಿಯನ್ನು ಸಮರ್ಪಕವಾಗಿ ನೀಡಲು ಸಾಧ್ಯವಾಗಲಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ ಸಂದರ್ಭದಲ್ಲಿ ಪರಿಹಾರ ಅನುದಾನವನ್ನು ಹಂತ, ಹಂತವಾಗಿ ಬಿಡುಗಡೆ ಮಾಡಿದರೆ, ರೈತರಿಗೆ ತಲುಪಿಸುವುದು ಕಷ್ಟವಾಗಲಿದೆ, ಇನ್‍ಪುಟ್ ಸಬ್ಸಿಡಿಯನ್ನು ರೈತರಿಗೆ ಒಟ್ಟಿಗೇ ಕೊಡಬೇಕಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಒದಗಿಸುವ ಪರಿಹಾರ ಮೊತ್ತವನ್ನು ಒಟ್ಟಿಗೆ ಬಿಡುಗಡೆ ಮಾಡುವಂತೆ ಇತ್ತೀಚೆಗೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ರಾಯರಡ್ಡಿ, ಹೆಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್ ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s