ಮಡಿಕೇರಿ: ಅಭಿವ್ಯಕ್ತಿ ಸ್ವಾತಂತ್ರ್ಯದ ದುರ್ಬಳಕೆ ಬೇಡ-ನ್ಯಾಯಮೂರ್ತಿ ಮಹಾಸ್ವಾಮೀಜಿ

2ರಾಷ್ಟ್ರದ ಸಂವಿಧಾನವು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ ವ್ಯವಸ್ಥೆಯನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಕಲ್ಪಿಸಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಅವರು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಕಾರದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ‘ಮೂಲಭೂತ ಹಕ್ಕುಗಳ’ ಕುರಿತು ಬುಧವಾರ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಮೂಲಭೂತ ಹಕ್ಕುಗಳಲ್ಲಿ ಪ್ರಮುಖವಾಗಿ ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕು, ಶೋಷಣೆಯ ವಿರುದ್ಧ ಹಕ್ಕು, ಧಾಮಿ೯ಕ ಸ್ವಾತಂತ್ರ್ಯ ಹಕ್ಕು, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಹಾಗೂ ಸಂವಿಧಾನಾತ್ಮಕ ಪರಿಹಾರ ಹಕ್ಕುಗಳನ್ನು ನೀಡಲಾಗಿದೆ. ಆದ್ದರಿಂದ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು ಎಂದರು.
1ಬಡವ-ಬಲ್ಲಿದ, ಗಂಡು-ಹೆಣ್ಣು, ಮೇಲು-ಕೀಳು ಎಂಬ ಭಾವನೆ ಇರಬಾರದು, ಎಲ್ಲರೂ ಸಮಾನರು ಎಂಬುದನ್ನು ಅರಿತುಕೊಳ್ಳಬೇಕು. ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದ್ದು, ಮತ್ತೊಬ್ಬರಿಗೆ ನೋವು ಉಂಟಾಗದಂತೆ ನಡೆದು ಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹೇಳಿದರು.
‘ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ ಎಂದು ಮನಬಂದಂತೆ ನಡೆದುಕೊಳ್ಳುವಂತಿಲ್ಲ. ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾಗದಂತೆ ನಡೆದುಕೊಳ್ಳಬೇಕು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳನ್ನು ತಾತ್ಕಾಲಿಕವಾಗಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.
ವಾತಾ೯ಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶ್ವಿತ ನಿರೂಪಿಸಿದರು, ಶೃತಿ ಪ್ರಾಥಿ೯ಸಿದರು, ಕಾನಾನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್.ಜಯಪ್ಪ ವಂದಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s