ಕರ್ನಾಟಕ ಚಲನಚಿತ್ರ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ

ಕನ್ನಡದ ಮೊದಲ ಮಾತನಾಡುವ ಚಿತ್ರ ‘ಸತಿ ಸುಲೋಚನ’ (03.03.1934) ಬಿಡುಗಡೆಗೊಂಡ ಸವಿನೆನಪಿನಲ್ಲಿ ಕರ್ನಾಟಕ ಚಲಚಿತ್ರ ಅಕಾಡೆಮಿ ಕಳೆದ ವರ್ಷದಿಂದ ‘ಕನ್ನಡ ವಾಕ್ಚಿತ್ರ ಹುಟ್ಟುಹಬ್ಬ’ ಆಚರಿಸುತ್ತಾ ಬಂದಿದೆ.

ಈ ಸಂದರ್ಭದಲ್ಲಿ ಕನ್ನಡ ಚಲಚಿತ್ರ ಅಭಿವೃದ್ಧಿಗಾಗಿ ಶ್ರಮಿಸಿದ ವಿವಿಧ ಕ್ಷೇತ್ರಗಳ ಗಣ್ಯರನ್ನು ಗುರುತಿಸಿ, ಅಂತಹ ಮಹನೀಯರಿಗೆ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವ ಪರಿಪಾಠವನ್ನು ಆರಂಭಿಸಲಾಗಿದೆ. ಕಳೆದ ವರ್ಷ ಹತ್ತು ಮಂದಿಯನ್ನು ಪ್ರಶಸ್ತಿಗೆ ಆರಿಸಲಾಗಿದ್ದರೆ, ಈ ಬಾರಿ ಹದಿನೈದು ಮಂದಿ ಸಾಧಕರನ್ನು ಗುರ್ತಿಸಲಾಗಿದೆ.

ಪ್ರತಿ ಪ್ರಶಸ್ತಿಯನ್ನೂ ಆಯಾ ವಿಭಾಗದಲ್ಲಿ ಸಾಧನೆ ಮಾಡಿ, ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗಾಗಿ ಕಾಣಿಕೆ ನೀಡಿದ ಮಹನೀಯರ ಹೆಸರಿನಲ್ಲಿ ನೀಡುತ್ತಿರುವುದು ವಿಶೇಷವಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 50,000 ರೂ ನಗದು ಬಹುಮಾನ ನೀಡಲಾಗುವುದಲ್ಲದೆ, ಸ್ಮರಣಿಕೆ ಹಾಗೂ ಪ್ರಶಸ್ತಿಪತ್ರ ನೀಡಿ ಸತ್ಕರಿಸಲಾಗುವುದು. ಕರ್ನಾಟಕ ಚಲಚಿತ್ರ ಅಕಾಡೆಮಿ ಅಧ್ಯಕ್ಷರಾದ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ್ದ ಅಕಾಡೆಮಿ ಸದಸ್ಯ ಮಂಡಲಿ ಈ ಪ್ರಶಸ್ತಿಗಳನ್ನು ಅಂತಿಮಗೊಳಿಸಿದೆ.
ಬೆಂಗಳೂರಿನ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ 2017ರ ಮಾರ್ಚ್ 3ರಂದು (ಶುಕ್ರವಾರ) ಸಂಜೆ 6 ಗಂಟೆಗೆ ಸಂಜೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಏರ್ಪಡಿಸಿರುವ ‘ಕನ್ನಡ ವಾಕ್ಚಿತ್ರ ಹುಟ್ಟುಹಬ್ಬ’ ಸಮಾರಂಭದಲ್ಲಿ ವಸತಿ ಸಚಿವರಾದ ಎಂ.ಕೃಷ್ಣಪ್ಪ ಮತ್ತು ಹಿರಿಯ ಕಲಾವಿದರೂ ಹಾಗೂ ಮಾಜಿ ಸಚಿವರೂ ಆದ ಅಂಬರೀಷ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡುವರು. ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೇಯ ಸಚಿವರಾದ ಉಮಾಶ್ರೀ ಕಾರ್ಯಕ್ರಮ ಉದ್ಘಾಟಿಸುವರು.

ವಿಧಾನ ಪರಿಷತ್ ಸದಸ್ಯರಾದ ಡಾ.ಜಯಮಾಲ, ಹಿರಿಯ ಕಲಾವಿದೆ ಡಾ.ಭಾರತಿ ವಿಷ್ಣುವರ್ಧನ್, ಹಿರಿಯ ಕಲಾವಿದರಾದ ವಿ.ರವಿಚಂದ್ರನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ಮುಖ್ಯ ಅತಿಥಿಗಳಾಗಿರುತ್ತಾರೆ. ಕರ್ನಾಟಕ ಚಲಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಎಸ್.ವಿ.ರಾಜೇಂದ್ರಸಿಂಗ್ ಬಾಬು ಸಮಾರಂಭದ ಅಧ್ಯಕ್ಷತೆವಹಿಸುವರು. ಅರ್ಚನಾ ಉಡುಪ ತಂಡದವರಿಂದ ಸ್ಮೃತಿ ಗೀತಗಾಯನ ಕಾರ್ಯಕ್ರಮವಿದೆ.

3.jpgcollage

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s