ಮೇ ತಿಂಗಳ ಅಂತ್ಯದವರೆಗೆ ಕುಡಿಯುವ ನೀರಿಗೆ ಭಾದಕವಿಲ್ಲ:ಸಚಿವ ಜಾರ್ಜ್

kj-georgeಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದರೂ ಬೆಂಗಳೂರು ನಗರಕ್ಕೆ ಮೇ ತಿಂಗಳ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು.

ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದ್ದ ಬೆಂಗಳೂರು ನಗರ ವ್ಯಾಪ್ತಿಯ ಚುನಾಯಿತ ಜನಪ್ರತಿನಿಧಿಗಳ ಸಭೆಯ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬೆಂಗಳೂರಿನ ನಾಗರಿಕರು ನೀರನ್ನು ಮಿತವಾಗಿ ಬಳಸುವಂತೆ ಮನವಿ ಮಾಡಿದರು.

ನೀರಿನ ಸಮಸ್ಯೆಗಳಿರುವ ಕಡೆ ತುರ್ತಾಗಿ ಉತ್ತಮ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಕೆಲವು ಖಾಸಗಿ ನೀರಿನ ಟ್ಯಾಂಕರ್ ಅವರು ನೀರು ಸರಬರಾಜು ಮಾಡುತ್ತಿದ್ದಾರೆ, ತಕ್ಷಣ ಆ ಪದ್ದತಿಯನ್ನು ನಿಲ್ಲಿಸಿದರೆ ತೊಂದರೆಯಾಗಬಹುದು. ಖಾಸಗಿ ಟ್ಯಾಂಕರ್‍ಗಳವರು ಅವ್ಯವಹಾರದಲ್ಲಿ ತೊಡಗಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಜಾರ್ಜ್ ಅವರು ತಿಳಿಸಿದರು.

ನೀರು ಪೂರೈಕೆ ಮಾಡುವಾಗ ಅನಗತ್ಯ ನೀರು ಸೋರಿಕೆಯಾಗುತ್ತಿದ್ದು ಇದನ್ನು ತಡೆಗಟ್ಟಲು ತನಿಖಾದಳ ರಚಿಸಲಾಗಿದೆ ಎಂದ ಸಚಿವರು ಬೆಂಗಳೂರು ನಗರದಲ್ಲಿ ಸುಮಾರು 100 ಬೋರ್‍ವೆಲ್‍ಗಳನ್ನು ಕೊರೆಸಲಾಗುವುದು. ಅಲ್ಲದೆ ಬೆಂಗಳೂರು ಹೊರವಲಯಗಳಲ್ಲಿ ಬರುವ 110 ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ವಹಿಸಿದ್ದು, ಇದಕ್ಕಾಗಿ ಮೂರು ಕೋಟಿ ರೂ. ಹಣವನ್ನು ಕಾಯ್ದಿರಿಸಲಾಗಿದೆ ಎಂದ ಸಚಿವ ಕೆ.ಜೆ. ಜಾರ್ಜ್ ಅವರು ನೀರಿನ ಕೊರತೆ ಹೆಚ್ಚು ಇರುವ ಕಡೆ ತಕ್ಷಣ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ನಗರಕ್ಕೆ ವಾರ್ಷಿಕ 19 ಟಿ.ಎಂ.ಸಿ. ನೀರು ಹಂಚಿಕೆಯಾಗಿದ್ದು, ನಿತ್ಯ 1400 ಎಂಎಲ್‍ಡಿ ನೀರನ್ನು ನಗರಕ್ಕೆ ತರಲಾಗುತ್ತಿದೆ. ಇದಕ್ಕಾಗಿ ಹೇಮಾವತಿ, ಹಾರಂಗಿ, ಕಬಿನಿ ಹಾಗೂ ಕೆ.ಆರ್.ಎಸ್. ಜಲಾಶಯಗಳಿಂದ ಸುಮಾರು 11.75 ಟಿ.ಎಂ.ಸಿ. ನೀರು ದೊರೆಯುವ ಸಾಧ್ಯತೆ ಇದೆ ಎಂದು ಮಾತನಾಡಿದ ಸಚಿವರು ವಿಪತ್ತು ನಿರ್ವಹಣಾ ಕಾಯ್ದೆಯಡಿ ಖಾಸಗಿ ಟ್ಯಾಂಕರ್‍ ಗಳನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸಲು ಬಿ.ಬಿ.ಎಂ.ಪಿ. ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s