ಸ್ಥಳೀಯ ಸಂಸ್ಥೆಗಳಿಗೆ ಕೆಪಿಎಸ್ಸಿ ಮೂಲಕ ಶೀಘ್ರ ನೇಮಕಾತಿ:ಸಚಿವ ಈಶ್ವರ ಖಂಡ್ರೆ

1ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ವರ್ಗದ 1500 ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಭರ್ತಿ ಮಾಡಲಾಗುವುದೆಂದು ರಾಜ್ಯ ಪೌರಾಡಳಿತ ಹಾಗೂ ಸಾರ್ವಜನಿಕ ಉದ್ಯಮಿಗಳ ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು.

ಅವರು ಗುರುವಾರ ಹಾವೇರಿ ನಗರದ ನಗರಸಭೆ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಹಾವೇರಿ ನಗರದ ಗುರುಭವನದಲ್ಲಿ ಮಾತನಾಡಿದರು.

ಈಗಾಗಲೇ 1500 ಖಾಲಿ ಹುದ್ದೆಗಳ ಭರ್ತಿಗಾಗಿ ಲೋಕಸೇವಾ ಆಯೋಗ ಕ್ರಮಕೈಗೊಂಡಿದೆ. ಮುಂದಿನ ದಿನಮಾನಗಳಲ್ಲಿ ಹಂತ ಹಂತವಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕನ್ನು ಖಾಯಂ ಗೊಳಿಸಲಾಗುವುದೆಂದು ಸಚಿವರು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಇಂಜನೀಯರ್‍ ಗಳು ಹಾಗೂ ಯೋಜನಾ ಸಮಾಲೋಚಕರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಮಾಡಿಕೊಂಡು ತ್ವರಿತವಾಗಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ನಿಯಮಾವಳಿಯನ್ನು ರೂಪಿಸಲಾಗಿದೆ. ಶೀಘ್ರವೇ ನೇಮಕಾತಿ ಮಾಡಿಕೊಳ್ಳಲಾಗುವುದು. ಹಂತ ಹಂತವಾಗಿ ಹಾವೇರಿ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

3ಇತ್ತೀಚಿನ ದಿನಮಾನಗಳಲ್ಲಿ ಹಳ್ಳಿಯಿಂದ ನಗರಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಶೇ.40ರ ಪ್ರಮಾಣದಲ್ಲಿ ನಗರದಲ್ಲಿ ವಾಸಿಸುವರ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆಗನುಗಣವಾಗಿ ಮೂಲ ಭೂತ ಸೌಕರ್ಯ ಒದಗಿಸಲು ನಗರೋತ್ಥಾನ ಮೂರನೇ ಹಂತದಲ್ಲಿ 1200 ಕೋಟಿ ರೂ. ಅನುದಾನ ಸೇರಿದಂತೆ 2886 ಕೋಟಿ ರೂ.ಗಳ ಅನುದಾನವನ್ನು ಪೌರಾಡಳಿತ ಇಲಾಖೆಗೆ ಸರ್ಕಾರ ಒದಗಿಸಿದೆ. ತ್ವರಿತವಾಗಿ ಪಾರದರ್ಶಕವಾಗಿ ಗುಣಮಟ್ಟದ ಕಾಮಗಾರಿ ಅನುಷ್ಠಾನಗೊಳಿಸಲು ಅಧಿಕಾರ ವಿಕೇಂದ್ರೀಕರಣಗೊಳಿಸಿ 5 ಕೋಟಿ ರೂ.ವರೆಗಿನ ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಹಾಗೂ ಸಾರ್ವಜನಿಕ ಕುಂದುಕೊರತೆ ದೂರುಗಳ ಸ್ವೀಕಾರ, ಕಾಮಗಾರಿಗಳ ಗುಣಮಟ್ಟದ ಮೇಲೆ ನಿಗಾವಹಿಸಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಇದು ರಾಷ್ಟ್ರಕ್ಕೆ ಮಾದರಿಯಾಗಿದೆ. ಜನರ ಕುಂದುಕೊರತೆಗಾಗಿ ಜನಹಿತ ಎಂಬ ಮೊಬೈಲ್ ಆಪ್ ರಚಿಸಲಾಗಿದೆ ಎಂದು ಹೇಳಿದರು.

ಹಾವೇರಿ ನಗರವನ್ನು ಒಂದು ಮಾದರಿ ನಗರವನ್ನಾಗಿ ರೂಪಿಸಲಾಗುವುದು. ಸರ್ಕಾರ ಹಾವೇರಿ ನಗರಕ್ಕೆ ವಿಶೇಷ ಅನುದಾನವನ್ನು ಒದಗಿಸಿದೆ. ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಪಿಂಗ್ ಕಾಂಪ್ಲೆಕ್ಸ್, ಹಾವೇರಿ ನಗರಸಭೆಗೆ ನೂತನ ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಎಲ್ಲ ನೆರವು ಒದಗಿಸಲಾಗುವುದೆಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜವಳಿ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಲಮಾಣಿ ಅವರು ಮಾತನಾಡಿ, ಹಾವೇರಿ ನಗರಕ್ಕೆ ನೀರು ಒದಗಿಸುವ ಕಾಮಗಾರಿಗೆ ಶೇ.80 ರಷ್ಟು ಪೂರ್ಣಗೊಂಡಿದೆ. ನಗರ ಮೂಲ ಸೌಕರ್ಯ ಒದಗಿಸಲು 35 ಕೋಟಿ ರೂ.ಗಳನ್ನು ನಗರೋತ್ಥಾನ ಯೋಜನೆಯಡಿ ಒದಗಿಸಲಾಗಿದೆ. ವಿಶೇಷ ಅನುದಾನದಡಿ ಮುಖ್ಯಮಂತ್ರಿಗಳು 50 ಕೋಟಿ ರೂ.ಗಳನ್ನು ಒದಗಿಸಿದ್ದಾರೆ. ಒಂದು ತಿಂಗಳ ಒಳಗಾಗಿ ಕೆಲಸ ಆರಂಭಿಸಲಾಗುವುದು. ಮೂರ್ನಾಲ್ಕು ತಿಂಗಳೊಳಗಾಗಿ ಯು.ಟಿ.ಪಿ.ಯಿಂದ ಹೆಗ್ಗೇರಿ ಕೆರೆಗೆ ನೀರು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ರೀಂಗ್ ರಸ್ತೆ ನಿರ್ಮಾಣ, ಮಾಸ್ಟರ್ ಪ್ಲಾನ್, 100 ಎಕರೆ ಜಾಗದಲ್ಲಿ ಹೌಸಿಂಗ್ ಬೋಡ್ ನಿವೇಶನ ಮತ್ತು ಮನೆಗಳ ನಿರ್ಮಾಣ, 24 ಕೋಟಿ ರೂ. ವೆಚ್ಚದಲ್ಲಿ ಗೂಗಿಕಟ್ಟಿಯಲ್ಲಿ ಶಾಪಿಂಗ್ ಮಾಲ್ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ 2000 ಮನೆಗಳ ನಿರ್ಮಾಣ ಮಾಡಿ, ಬಡವರಿಗೆ ಹಂಚಿಕೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s