ಪಿಯು ಕಾಲೇಜು ವೇತನ ತಾರತಮ್ಯ ನಿವಾರಣೆಗೆ ಬದ್ದ:ಮುಖ್ಯಮಂತ್ರಿ ಸಿದ್ದರಾಮಯ್ಯ

cmಪದವಿಪೂರ್ವ ಕಾಲೇಜು ಉಪನ್ಯಾಸಕರ ವೇತನದಲ್ಲಿ ಆಗಿರುವ ತಾರತಮ್ಯ ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾಗಿದ್ದ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಮತ್ತು ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಯವರು ಈ ಭರವಸೆ ನೀಡಿದರು.
ತಾರತಮ್ಯ ನಿವಾರಣೆಗೆ ವೇತನ ಆಯೋಗ:
ಸರ್ಕಾರಿ ನೌಕರರ ವೇತನ ತಾರತಮ್ಯ ನಿವಾರಣೆ ಸಲುವಾಗಿ ಏಳನೇ ವೇತನ ಆಯೋಗ ರಚನೆಯಾಗಲಿದೆ. ಆಯೋಗ ನೀಡುವ ವರದಿ ಆಧಾರದ ಮೇಲೆ ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಎಲ್ಲ ನೌಕರರ ವೇತನ ತಾರತಮ್ಯ ನಿವಾರಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ. ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನ ತಾರತಮ್ಯ ವಿಚಾರವನ್ನೂ ರಚನೆಯಾಗಲಿರುವ ವೇತನ ಆಯೋಗದ ವಿಷಯ ಸೂಚಿಯಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಚರ್ಚೆಗೆ ಸಿದ್ದ:
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಹಾಗೂ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದ ಬಳಿಕ ಬೇಡಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು, ಮೌಲ್ಯಮಾಪನ ಸಮೀಪಿಸುವ ಸಂದರ್ಭದಲ್ಲಿ ಉಪನ್ಯಾಸಕರು ಮತ್ತು ಶಿಕ್ಷಕರು ಬಹಿಷ್ಕಾರದ ಮಾತು ಹೇಳುವುದು ಬೇಡ. ಬೇಡಿಕೆ ಈಡೇರಿಸಲು ಮತ್ತು ಚರ್ಚೆಗೆ ಸರ್ಕಾರ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.

ಮುಷ್ಕರ ಬೇಡ:

ಮೌಲ್ಯಮಾಪನದ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವ ಅಥವಾ ಚಳವಳಿಗೆ ಇಳಿಯುವುದು ಬೇಡ. ಸಮಾಜ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ಮುಷ್ಕರಕ್ಕೆ ಮುಂದಾಗಬೇಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ವೇತನ ಆಯೋಗ ರಚಿಸಿಸುವ ಸಂದರ್ಭದಲ್ಲಿ ವೇತನ ತಾರತಮ್ಯ ಸಂಬಂಧ ಶಿಕ್ಷಕರು ಮತ್ತು ಉಪನ್ಯಾಸಕರ ಅಹವಾಲು ಆಲಿಸುವಂತೆಯೂ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಮತ್ತು ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಜೊತೆ ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s