ಗದಗ-ವಾಡಿ ರೈಲ್ವೆ ಮಾರ್ಗಕ್ಕೆ ತ್ವರಿತ ಭೂಸ್ವಾಧೀನ: ಸಚಿವ ಆರ್.ವಿ. ದೇಶಪಾಂಡೆ

7ಗದಗ-ವಾಡಿ ನೂತನ ರೈಲ್ವೆ ಮಾರ್ಗಕ್ಕಾಗಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್‍ನಿಂದ ಕುಷ್ಟಗಿ ವರೆಗಿನ 58 ಕಿ.ಮೀ. ರೈಲ್ವೆ ಲೈನ್‍ಗಾಗಿ ಅಗತ್ಯವಿರುವ 675 ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಏಪ್ರಿಲ್ ತಿಂಗಳ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗದಗ-ವಾಡಿ ರೈಲ್ವೆ ಮಾರ್ಗದ ಕಾಮಗಾರಿ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗದಗ-ವಾಡಿ ನೂತನ ರೈಲ್ವೆ ಮಾರ್ಗ 2013-14 ರಲ್ಲಿ ಮಂಜೂರಾದ ಯೋಜನೆಯಾಗಿದ್ದು, ಒಟ್ಟು 255 ಕಿ.ಮೀ. ದೂರದ ಮಾರ್ಗವಾಗಿದೆ. ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆ ವ್ಯಾಪ್ತಿಯಲ್ಲಿ ರೈಲ್ವೆ ಮಾರ್ಗ ಹಾದುಹೋಗಲಿದೆ. ಯೋಜನೆಗೆ ಸುಮಾರು 3 ಸಾವಿರ ಎಕರೆಗಿಂತಲೂ ಹೆಚ್ಚು ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಂಡು, ಯೋಜನೆ ಜಾರಿಗೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕಿದೆ. ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ರೈಲ್ವೆ ಯೋಜನೆಗಾಗಿ ತಳಕಲ್-ಕುಷ್ಟಗಿ ವರೆಗಿನ 58 ಕಿ.ಮೀ. ಉದ್ದದ ರೈಲ್ವೆ ಮಾರ್ಗಕ್ಕಾಗಿ 11 ಗ್ರಾಮಗಳಲ್ಲಿ ಸುಮಾರು 675 ಎಕರೆ ಜಮೀನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿದೆ. ಕಾಮಗಾರಿಗಾಗಿ ಈಗಾಗಲೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಕೊಪ್ಪಳ ಜಿಲ್ಲಾಧಿಕಾರಿಯವರ ಶ್ರಮದಿಂದಾಗಿ ಈಗಾಗಲೆ 325 ಎಕರೆಗೂ ಹೆಚ್ಚು ಜಮೀನು ಸ್ವಾಧೀನಕ್ಕೆ ರೈತರೊಂದಿಗೆ ಸಮಾಲೋಚಿಸಿ ದರ ನಿಗದಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯಲ್ಲಿ ಎಲ್ಲಾ 675 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಏಪ್ರಿಲ್ ಅಂತ್ಯದೊಳಗಾಗಿ ಪೂರ್ಣಗೊಳ್ಳಬೇಕು. ಅದೇ ಸಮಯದಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ಹಣ ವಿತರಿಸುವ ಕಾರ್ಯವೂ ಸಮರ್ಪಕವಾಗಿ ಆಗಬೇಕು. ಪರಿಹಾರ ಹಣ ಪಾವತಿಸಲು ಈಗಾಗಲೆ ಸರ್ಕಾರ ಒಟ್ಟು 72 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಪರಿಹಾರ ಪಾವತಿಸಲು ಹಣದ ಯಾವುದೇ ಕೊರತೆ ಇಲ್ಲ. ಎಲ್ಲಾ 675 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು, ರೈತರೊಂದಿಗೆ ಸಮಾಲೋಚಿಸಿ, ದರ ನಿಗದಿಪಡಿಸಬೇಕು. ಭೂಮಿಯನ್ನು ಏಪ್ರಿಲ್ ತಿಂಗಳ ಒಳಗಾಗಿ ಕೆಐಡಿಬಿ ವಶಕ್ಕೆ ಪಡೆದುಕೊಂಡು, ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದರೆ, ಯೋಜನಾ ವೆಚ್ಚದ ಗಾತ್ರ ಹೆಚ್ಚಾಗಲಿದ್ದು, ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೆಚ್ಚಿನ ಹೊರೆ ಬೀಳಲಿದೆ. ಆದಷ್ಟು ಶೀಘ್ರ ಭೂಸ್ವಾಧೀನ ಕಾರ್ಯ ಪೂರ್ಣಗೊಳ್ಳಬೇಕು. ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ಅಧಿಕಾರಿಗಳು ಪ್ರಾಮಾಣೀಕ ಯತ್ನ ಮಾಡಬೇಕು. ಇದರಿಂದ ಸರ್ಕಾರದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯ ಮೂಡಲು ಸಾಧ್ಯ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಅವರು ಜಿಲ್ಲಾಧಿಕಾರಿಗಳು, ರೈಲ್ವೆ ಇಲಾಖೆ ಮುಖ್ಯ ಇಂಜಿನಿಯರ್ ಹಾಗೂ ಕೆಐಡಿಬಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
8ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು, ಕೊಪ್ಪಳ ಜಿಲ್ಲೆಯಲ್ಲಿ ಗದಗ-ವಾಡಿ ರೈಲ್ವೆ ಮಾರ್ಗದ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭವಾಗಬೇಕು. ಭೂಸ್ವಾಧೀನ ಪ್ರಕ್ರಿಯೆ ಅಗತ್ಯವಿಲ್ಲದಿರುವ ಕಡೆಗಳಲ್ಲಿ ಬರುವ ರೈಲ್ವೆ ಮಾರ್ಗದ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ರೈಲ್ವೆ ಇಲಾಖೆ ಮುಖ್ಯ ಇಂಜಿನಿಯರ್ ರಾಮಗೋಪಾಲ್ ಅವರಿಗೆ ಸೂಚನೆ ನೀಡಿದರು. ಅಲ್ಲದೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುತ್ತಿರುವ ಜಿಲ್ಲಾಧಿಕಾರಿಗಳ ಕಾರ್ಯವನ್ನು ಮಂತ್ರಿಗಳು ಶ್ಲಾಘಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s