ರಾಜ್ಯದಲ್ಲಿ ಸಂಭವಿಸಿದ ಕಾಡ್ಗಿಚ್ಚು ಕುರಿತು ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

cmಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾಡ್ಗಿಚ್ಚು ಮತ್ತು ವನ್ಯಜೀವಿಗಳಿಗೆ ಕುಡಿಯುವ ನೀರಿಗೆ ಎದುರಾಗಿರುವ ತೊಂದರೆ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿಯವರು ಅರಣ್ಯ ಇಲಾಖೆ ಸಚಿವ ರಮಾನಾಥ ರೈ ಅವರಿಗೆ ಈ ಸೂಚನೆ ನೀಡಿದರು.
ಬಂಡೀಪುರ, ಕಪ್ಪತಗುಡ್ಡ ಸೇರಿದಂತೆ ರಾಜ್ಯದ ಹಲವೆಡೆ ಕಾಡುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರು ಆದೇಶಿಸಿದರು. ಜೊತೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಕುರಿತು ವರದಿ ನೀಡುವಂತೆಯೂ ಸೂಚಿಸಿದ್ದಾರೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಕಾಡಿಗೆ ಹೋಗಬೇಕು. ಆದರೆ ಆ ಕೆಲಸ ಆಗುತ್ತಿಲ್ಲ. ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವ ಅಧಿಕಾರಿ ಎಷ್ಟು ಬಾರಿ ಕಾಡಿಗೆ ಹೋಗಿದ್ದಾರೆ ಎಂಬುದನ್ನು ವರದಿಯಲ್ಲಿ ದಾಖಲು ಮಾಡಿ ಎಂದು ಸಿಎಂ ಹೇಳಿದ್ದಾರೆ.
ಅರಣ್ಯ ಕಾಪಾಡುವ ವಿಚಾರದಲ್ಲಿ ಅಧಿಕಾರಿಗಳು ಚೆಲ್ಲಾಟವಾಡಬಾರದು. ಅದನ್ನು ನಾನು ಸಹಿಸುವುದಿಲ್ಲ. ಬಂಡೀಪುರ, ಕಪ್ಪತಗುಡ್ಡ ಸೇರಿದಂತೆ ಇತ್ತೀಚೆಗೆ ಹಲವೆಡೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಇದರಿಂದ ಅರಣ್ಯ ಪ್ರದೇಶ ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಇದಕ್ಕೆ ಯಾರು ಹೊಣೆ ? ಎಂದು ಮುಖ್ಯಮಂತ್ರಿಯವರು ಖಾರವಾಗಿ ಪ್ರಶ್ನಿಸಿದರು.
ಕಾಡ್ಗಿಚ್ಚು ಸಂಭವಿಸಿದಾಗ ಅದನ್ನು ನಿಯಂತ್ರಿಸಲು ಮತ್ತು ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಮಳೆಗಾಲ ಆರಂಭವಾಗುವುದಕ್ಕೆ ಇನ್ನೂ ಎರಡು ತಿಂಗಳು ಕಾಯಬೇಕಾಗುತ್ತದೆ. ಅಲ್ಲಿಯವರೆಗೆ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ನಮ್ಮ ತಪ್ಪಿನಿಂದ ಏನೂ ಆಗಬಾರದು ಎಂದು ಹೇಳಿದರು.
ಬೆಂಕಿ ಕಾಣಿಸಿಕೊಂಡ ತಕ್ಷಣ ಅದನ್ನು ನಂದಿಸಲು ಅನುಕೂಲವಾಗುವಂತೆ ಕಾಡಂಚಿನಲ್ಲಿ ಆಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ನೆರವು ಒದಗಿಸಲಿದೆ. ಜೊತೆಗೆ ಬೆಂಕಿ ಆರಿಸಲು ಸಿಬ್ಬಂದಿಗೆ ಮತ್ತು ಸ್ಥಳೀಯರಿಗೆ ಇನ್ನೂ ಹೆಚ್ಚಿನ ತರಬೇತಿ ನೀಡಿ ಎಂದು ಸೂಚಿಸಿದರು.
ರಾಷ್ಟ್ರೀಯ ಅಭಯಾರಣ್ಯಗಳಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಕೊಳವೆಬಾವಿಗಳನ್ನು ಕೊರೆಯಿಸಿ ಅದರಿಂದ ನೀರೆತ್ತಿ ಕೆರೆಗಳನ್ನು ತುಂಬಿಸಿ. ಅಲ್ಲಲ್ಲಿ ಚೆಕ್‍ಡ್ಯಾಂಗಳನ್ನೂ ನಿರ್ಮಿಸಿ ಎಂದು ಮುಖ್ಯಮಂತ್ರಿಯವರು ಹೇಳಿದರು.
ಕಳೆದ ಮೂರು ವರ್ಷದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿದಿದೆ. ಅರಣ್ಯ ಪ್ರದೇಶದಲ್ಲಿ ತೇವಾಂಶ ಕೊರತೆ ಉಂಟಾಗಿ ಹುಲ್ಲು ಮತ್ತು ಗಿಡಗಂಟೆಗಳು ಸಂಪೂರ್ಣವಾಗಿ ಒಣಗಿದೆ. ಹೀಗಾಗಿ ಹಿಂದಿನ ಬೇಸಿಗೆಗೆ ಹೋಲಿಸಿದರೆ ಈ ಬಾರಿ ಅರಣ್ಯವನ್ನು ಬೆಂಕಿಯಿಂದ ರಕ್ಷಿಸುವುದು ಸವಾಲಿನ ಕೆಲಸವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಸಮಸ್ಯೆ ಜೊತೆಗೆ ಅರಣ್ಯದ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಬೆಳೆದಿರುವ ಲಂಟಾನ ಸಸ್ಯ ಪ್ರಬೇಧವು ಸಮಸ್ಯೆ ಉಲ್ಬಣಗೊಳ್ಳುವಂತೆ ಮಾಡಿದೆ ಎಂದು ತಿಳಿಸಿದರು. ರಾಷ್ಟ್ರೀಯ ನೀತಿ ಮತ್ತು ನ್ಯಾಯಾಲಯಗಳ ಆದೇಶ ಪ್ರಕಾರ ಕಾಡಿನಲ್ಲಿ ಬಿದ್ದ ಮರಗಳನ್ನು ತೆರವು ಮಾಡುವಂತಿಲ್ಲ. ಇದರಿಂದಲೂ ಬೆಂಕಿ ವ್ಯಾಪಕವಾಗಿ ಹಬ್ಬುತ್ತದೆ ಎಂದರು.
ಎಲ್ಲ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಿದ್ದು, ಇದರಲ್ಲಿ ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆ ನೀಡುವಲ್ಲಿ ಅವರು ನೆರವಾಗುತ್ತಿದ್ದಾರೆ ಎಂದರು.
ಅರಣ್ಯ ಸಚಿವ ರಮಾನಾಥ ರೈ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿ:
ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ಕಲ್ಕೆರೆ ವಲಯದಲ್ಲಿ ಇತ್ತೀಚೆಗೆ ಬೆಂಕಿ ನಂದಿಸುವ ಕೆಲಸದ ವೇಳೆ ಪ್ರಾಣ ಕಳೆದುಕೊಂಡ ಅರಣ್ಯ ರಕ್ಷಕರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s