ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಸ್ತ್ರೀ ಶಕ್ತಿ ಗುಂಪುಗಳಿಗೆ ಪ್ರಶಸ್ತಿ ಘೋಷಣೆ- ಸಚಿವೆ ಉಮಾಶ್ರೀ 

umashreeಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಹಾಗೂ ಅತ್ಯುತ್ತಮ ಸ್ತ್ರೀ ಶಕ್ತಿ ಗುಂಪು ಪ್ರಶಸ್ತಿಗಳಿಗೆ ಅರ್ಹ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಉಮಾಶ್ರೀ ಅವರು ಹೇಳಿದ್ದಾರೆ.

ಮಹಿಳೆಯರ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಪ್ರೋತ್ಸಾಹಿಸಲು ಹಾಗೂ ಕಲೆ, ಕ್ರೀಡೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಮಹಿಳೆಯರನ್ನು ಮತ್ತು ಅಸಾಮಾನ್ಯ ಧೈರ್ಯ ಪ್ರದರ್ಶಿಸಿದ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸಲು 1994-95ನೇ ಸಾಲಿನಿಂದ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ”ಗಳನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ದಿನಾಂಕ 08-03-2017ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬೆಳಿಗ್ಗೆ 11.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಾರಾಟ ಮತ್ತು ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳ್ಳುವ “ಸಮೃದ್ಧಿ” ಮತ್ತು “ಧನಶ್ರೀ” ಯೋಜನೆಗಳನ್ನು ಲೋಕಾರ್ಪಣೆ ಮಾಡುವ ಮೂಲಕ ಸಾಂಕೇತಿಕವಾಗಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ಸಚಿವರಾದ ಉಮಾಶ್ರೀ ಹೇಳಿದರು.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 8 ವ್ಯಕ್ತಿಗಳಿಗೆ ಮತ್ತು 5 ಸಂಸ್ಥೆಗಳಿಗೆ ಹಾಗೂ ಕಲೆ, ಕ್ರೀಡೆ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಅವಿರತವಾಗಿ ಸಾಧನೆ ಮಾಡಿರುವ 9 ಸಾಧಕರಿಗೆ ಹಾಗೂ ಸಮಯಪ್ರಜ್ಞೆಯಿಂದ ಜೀವರಕ್ಷಣೆ ಮಾಡಿದ ವೀರಮಹಿಳೆ ಸೇರಿದಂತೆ 2015-2016ನೇ ಸಾಲಿನ “ಕಿತ್ತೂರು ರಾಣಿ ಚೆನ್ನಮ್ಮ” ಪ್ರಶಸ್ತಿಗಳನ್ನು ಪ್ರದಾನ ಮಾಡಿ, ಗೌರವಿಸಲಾಗುತ್ತದೆ. ಒಟ್ಟು 23 ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ.

ಗ್ರಾಮೀಣ ಮಹಿಳೆಯರ ಸರ್ವಾಂಗೀಣ ಸಬಲೀಕರಣಕ್ಕಾಗಿ ರಚಿಸಲಾಗಿರುವ ಸ್ತ್ರೀಶಕ್ತಿ ಗುಂಪುಗಳ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 3 ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ 3 ಸ್ತ್ರೀಶಕ್ತಿ ಒಕ್ಕೂಟಗಳಿಗೆ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇದಲ್ಲದೆ 4 ಕಂದಾಯ ವಿಭಾಗೀಯ ಮಟ್ಟದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ 4 ಸ್ತ್ರೀ ಶಕ್ತಿ ಗುಂಪುಗಳಿಗೆ ಶ್ರೀಮತಿ ಯಶೋಧರಮ್ಮ ದಾಸಪ್ಪ ಇವರ ಹೆಸರಿನಲ್ಲಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಉದ್ದೇಶಿತ ಆಯವ್ಯಯ ಅನುಷ್ಠಾನದಲ್ಲಿ ರಾಜ್ಯದಲ್ಲಿ ವಿವಿಧ ಇಲಾಖೆಗಳಿಂದ ಸೌಲಭ್ಯಗಳನ್ನು ಪಡೆದು ಯಶಸ್ವಿಯಾಗಿ ಜೀವನ ನಿರ್ವಹಿಸುತ್ತಿರುವ ಮಹಿಳೆಯರ ಯಶೋಗಾಥೆಯನ್ನು ಬಿಂಬಿಸುವ “ಸುಕೃತ” ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಹಮ್ಮಿಕೊಂಡಿರುವ ಆದಾಯೋತ್ಪನ್ನ ಚಟುವಟಿಕೆಗಳ ಸಾಧನೆಯನ್ನು ಬಿಂಬಿಸುವ “ಅಂತರಾಳ” ಕಿರುಹೊತ್ತಿಗೆಯ 12ನೇ ಸಂಚಿಕೆಯನ್ನು ಹಾಗೂ ಸ್ತ್ರೀಶಕ್ತಿ ಯೋಜನೆಯ ಕೈಪಿಡಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಇದಲ್ಲದೆ ವಿವಿಧ ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಸ್ವಯಂ ಉದ್ಯೋಗದಡಿಯಲ್ಲಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಹಮ್ಮಿಕೊಂಡು ಉತ್ಪಾದಿಸಿದ ಉತ್ಪನ್ನಗಳ ಮಾಹಿತಿ ಕೈಪಿಡಿಯನ್ನು ಹೊರತರಲಾಗುತ್ತಿದೆ.

ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಗಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಬಾಲಕಿ ಕು. ರೇವತಿ ನಾಯಕ್ ಇವರನ್ನು ಅಭಿನಂದಿಸಲಾಗುವುದು. ಬಳ್ಳಾರಿ ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವಲ್ಲಿ ವಿಶೇಷ ಕಾಳಜಿ ತೆಗೆದು ಸಾಗಾಣಿಕೆಯನ್ನು ತಡೆಗಟ್ಟುವಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿ ಪಬ್ಲಿಕ್ ಪ್ರಾಸಿಕ್ಯೂಟರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸ್ವಯಂ ಸೇವಾ ಸಂಸ್ಥೆಯ ಸೇವೆಯನ್ನು ಗುರುತಿಸಿ ಈ ಸಂದರ್ಭದಲ್ಲಿ ಅಭಿನಂದಿಸಲಾಗುವುದು.

ಮಹಿಳಾ ದಿನಾಚರಣೆಯ ಅಂಗವಾಗಿ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರಿಗಾಗಿ ಕ್ರೀಡಾಕೂಟವನ್ನು ಹಮ್ಮಿಕೊಂಡಿದ್ದು ರಾಜ್ಯಮಟ್ಟದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಗುವುದು.

ಮಹಿಳಾ ದಿನಾಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸದರಿ ದಿನದಂದು ಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s