ಪಶ್ಚಿಮಘಟ್ಟ ಕುರಿತು ಸಧ್ಯದಲ್ಲೇ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಕೆ: ಸಚಿವ ಬಿ. ರಮಾನಾಥ ರೈ

ramanath-raiಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವಿಚಾರಕ್ಕೆ ಸಂಬಂಧಿಸಿದಂತೆ ಸಧ್ಯದಲ್ಲೇ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದರು.

ವಿಧಾನ ಸೌಧ ತಮ್ಮ ಕಛೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವಿಚಾರ ಆರು ರಾಜ್ಯಗಳಿಗೆ ಸಂಬಂಧಿಸಿದ್ದಾಗಿದ್ದು ಆ ಪೈಕಿ ಕೇರಳ ಹಾಗೂ ಕರ್ನಾಟಕ ರಾಜ್ಯಗಳು ಮಾತ್ರ ಹೆಚ್ಚು ಆಸಕ್ತಿ ವಹಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಆಕ್ಷೇಪಣೆ ಸಲ್ಲಿಸಿವೆ ಆದರೂ ಕೇಂದ್ರ ಸರ್ಕಾರ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದ್ದು ನಾವು ಮತ್ತೊಮ್ಮೆ ಆಕ್ಷೇಪಣೆ ಸಲ್ಲಿಸುತ್ತೇವೆ ಎಂದರು.

ಪಶ್ಚಿಮ ಘಟ್ಟ ಹಾಗೂ ರಾಜ್ಯದ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ ಅರಣ್ಯ ಸಚಿವರು ರಾಜ್ಯ ಸರ್ಕಾರ ಅಡಳಿತಾತ್ಮಕವಾಗಿ ಹಾಗೂ ರಾಜಕೀಯವಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ಭೌತಿಕ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ಆರ್.ಎಂ.ಎನ್. ಸಹಾಯ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ತಜ್ಞರ ಸಮಿತಿಯನ್ನು ರಚಿಸಿ ಸಮಿತಿ ಸೂಚಿಸಿರುವ ಸೂಕ್ಷ್ಮಪ್ರದೇಶಗಳ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ ಎಂದ ಸಚಿವರು ಜನರ ಅಭಿಪ್ರಾಯಗಳನ್ನು ಎರಡು ತಿಂಗಳುಗಳ ಕಾಲ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಮಿತಿ ವರದಿ ಮಾಡಿದೆ ಎಂದರು.

ಈ ಭಾರಿ ಬಂಡಿಪುರ ಹಾಗೂ ಕಪ್ಪತ್ತಗುಡ್ಡ ಅರಣ್ಯ ಪ್ರದೇಶಗಳಲ್ಲಿ ಸುಮಾರು 100 ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ದುರಂತ ಕಂಡುಬಂದಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s