ಪ್ರತಿಬಿಂಬ – ಮುಖ್ಯಮಂತ್ರಿ ಆನ್ ಲೈನ್ ಮಾಹಿತಿ ಕೋಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

cm-181ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಮಹತ್ವಾಂಕ್ಷೆಯ ಪ್ರಮುಖ ಯೋಜನೆಗಳ ಭೌತಿಕ ಸಾಧನೆ ಹಾಗೂ ಆರ್ಥಿಕ ಪ್ರಗತಿ ಕುರಿತು ಮಾಹಿತಿ ಒದಗಿಸುವ ಸರ್ಕಾರದ ಮಾಹಿತಿ ಕೋಶ ‘ಪ್ರತಿಬಿಂಬ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ‘ಪ್ರತಿಬಿಂಬ’ ಅಂತರ್ಜಾಲಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಗುರಿ ಮತ್ತು ಸಾಧನೆಗಳನ್ನು ಸಾರ್ವಜನಿಕರೂ ಸೇರಿದಂತೆ ನಾಡಿನ ಜನರಿಗೆ ಮಾಹಿತಿ ಒದಗಿಸುವ ವೇದಿಕೆಯಾಗಲಿದೆ ಈ ಪ್ರತಿಬಿಂಬ ಮಾಹಿತಿ ಕೋಶ ಎಂದರು.

ಚುನಾಯಿತ ಪ್ರತಿನಿಧಿಯಾಗಿ ಜನರಿಗೆ ಉತ್ತರದಾಯಿತ್ವ ಇರಬೇಕು, ಐದು ವರ್ಷಗಳಿಗೊಮ್ಮೆ ಚುನಾವಣೆ ಮೂಲಕ ಅರಿಸಿ ಬರುವ ಸರ್ಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಗಳ ಉತ್ತದಾಯಿತ್ವ ಈ ಅಂತರ್ಜಾಲದಲ್ಲಿ ದಾಖಲಾಗುತ್ತದೆ. ಉದಾಹರಣೆಗೆ ಕೃಷಿಭಾಗ್ಯ ಯೋಜನೆಯಲ್ಲಿ ಒಂದು ಲಕ್ಷ ಕೃಷಿ ಹೊಂಡ ನಿರ್ಮಾಣ ಮಾಡಲಾಗಿದೆ. ವರ್ಷಾಂತ್ಯದಲ್ಲಿ ಇನ್ನು 30 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು. ಕೃಷಿ ಹೊಂಡ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಗುರಿ ಮತ್ತು ಸಾಧನೆಯ ಮಾಹಿತಿ ಲಭ್ಯವಾಗುವ ಪ್ರತಿಬಿಂಬದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ನೀಡಲಾಗಿದ್ದ 165 ಭರವಸೆಗಳಲ್ಲಿ ಈಗಾಗಲೇ 125 ಕ್ಕೂ ಹೆಚ್ಚು ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ. ನುಡಿದಂತೆ ನಡೆಯುವ ಭರವಸೆ ಈಡೇರಿಸುವ ಸರ್ಕಾರ ನಮ್ಮದು. ರಾಜ್ಯ ಹಾಗೂ ದೇಶದ ಜನರ ಮುಂದೆ ನಮ್ಮ ಸಾಧನೆಯ ಮಾಹಿತಿ ಒದಗಿಸಲು ‘ಪ್ರತಿಬಿಂಬ’ ಮಾಹಿತಿ ಕೋಶ ವೇದಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಪ್ರತಿಬಿಂಬ’ ಎಂಬ ಮಾಹಿತಿ ಒದಗಿಸುವ ಯೋಜನೆಯಲ್ಲಿ ಆಂಧ್ರ ಪ್ರದೇಶ ರಾಜ್ಯ ಸರ್ಕಾರವು ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದ ಮುಖ್ಯಮಂತ್ರಿ ಅವರು ಸರ್ಕಾರದ ಗುರಿ-ಸಾಧನೆಗಳನ್ನು ಜನರ ಬಳಿಗೆ ಕೊಂಡ್ಯೊಯ್ಯುವ ಕೆಲಸವನ್ನು ಈ ‘ಪ್ರತಿಬಿಂಬ’ ಮಾಡಲಿದ್ದು ಇದರಲ್ಲಿ ಪ್ರಮುಖ ಇಲಾಖೆಗಳ ಪ್ರಮುಖ ಯೋಜನೆಗಳ ಮಾಹಿತಿಗಳನ್ನು ಆಯಾ ತಿಂಗಳಿನ ಸಾಧನೆಗಳ ಬಗ್ಗೆ ಮಾಹಿತಿ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ, ಕಾನೂನು ಸಚಿವರಾದ ಟಿ.ಬಿ. ಜಯಚಂದ್ರ, ಅರಣ್ಯ ಸಚಿವರಾದ ರಮಾನಾಥ್ ರೈ, ಸಮಾಜ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ, ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ, ಯುವಜನ ಸಬಲೀಕರಣ ಹಾಗೂ ಮೀನುಗಾರಿಗೆ ಸಚಿವರಾದ ಪ್ರಮೋದ್ ಮಧ್ವರಾಜ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಕೆ. ರತ್ನಪ್ರಭ, ಅಭಿವೃದ್ಧಿ ಆಯುಕ್ತ ವಿಜಯಭಾಸ್ಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಎಲ್.ಕೆ. ಅತೀಖ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಜರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s