ಮಹಿಳೆಯರಿಗೆ ಹೊಸ ಕೈಗಾರಿಕಾ ನೀತಿ ಜಾರಿಗೆ:ಮುಖ್ಯಮಂತ್ರಿ ಸಿದ್ದರಾಮಯ್ಯ

cmಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ. 33 ರಷ್ಟು ಮೀಸಲಾತಿ, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಶೇ 50 ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಲಾಗಿದೆ. ಮಹಿಳೆಯರಿಗೆ ಸಮಾನವಾದ ಅವಕಾಶ ಸಿಕ್ಕಿದಾಗ ಮಾತ್ರ ನಾಡಿನ, ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
cm1ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಫಾಟಿಸಿ ಮಾತನಾಡಿದ ಅವರು , ಅಂದು ಬೇರೆ ಬೇರೆ ಸಮುದಾಯದ ಜನರು ಶೋಷಣೆ ಅನುಭವಿಸಿದ ರೀತಿಯಲ್ಲೇ ಮಹಿಳೆಯರು ಕೂಡಾ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಸಮಾಜವಾದಿ, ದೇಶ ಕಂಡ ಶ್ರೇಷ್ಠ ರಾಜಕಾರಣಿ ಲೋಹಿಯಾ ಅವರು ಹೇಳುತ್ತಿದ್ದರು ಎಂದು ಸಮಾರಂಭದಲ್ಲಿ ನೆನಪಿಸಿಕೊಂಡರು.
ಈ ವರ್ಷದ ಘೋಷ ವಾಕ್ಯ “ಮಹಿಳೆಯರು ಬದಲಾವಣೆಯತ್ತ ಧೈರ್ಯದಿಂದ ಮುನ್ನುಗಿ” ಎಂಬುದು. ನಮ್ಮ ರಾಜ್ಯದಲ್ಲಿ ಬಹಳಷ್ಟು ಮಹಿಳೆಯರು ಶ್ರೇಷ್ಠ ಕೈಗಾರಿಕೋದ್ಯಮಿಗಳಾಗಿ ಹೊರಹೊಮ್ಮಿದ್ದಾರೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಅವರಿಗೆಲ್ಲ ನನ್ನ ಧನ್ಯವಾದಗಳು ಎಂದರು.
cm2ದೇಶಕ್ಕೆ ಸ್ವಾತಂತ್ರ್ಯ ಬಂದು ಸುಮಾರು 70 ವರ್ಷವಾದರೂ ಸಮಾಜದಲ್ಲಿ ಲಿಂಗ ತಾರತಮ್ಯವಿದೆ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾದರೆ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಬೇಕು. ನಮ್ಮ ಸರ್ಕಾರ ಕೈಗಾರಿಕಾ ನೀತಿ ಹೊಸ ಯೋಜನೆಯನ್ನು ತಂದಿದ್ದು ಮಹಿಳಾ ಕೈಗಾರಿಕೋದ್ಯಮಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ದೇಶದಲ್ಲಿಯೇ ನಮ್ಮ ರಾಜ್ಯದ ಕೈಗಾರಿಕಾ ನೀತಿಯು ಉತ್ತಮವಾಗಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಅಪರ ಮುಖ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಅನೇಕ ಮಹಿಳಾ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s