ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್ ಸೌಲಭ್ಯ:ಸಚಿವ ಕೆ.ಆರ್. ರಮೇಶ್‍ಕುಮಾರ್

3ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮುಂದಿನ ಆರು ತಿಂಗಳ ಒಳಗಾಗಿ ಟೆಲಿಮೆಡಿಸಿನ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್‍ಕುಮಾರ್ ಅವರು ತಿಳಿಸಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಇಂದು ಏರ್ಪಡಿಸಿದ್ದ ‘ಇ-ಆರೋಗ್ಯ ಕಾರ್ಯಕ್ರಮದ ಪಿ.ಹೆಚ್.ಸಿ. ಮ್ಯಾನೇಜ್‍ಮೆಂಟ್ ಇನ್‍ಫರ್‍ಮೇಷನ್ ಸಿಸ್ಟಮ್’ ಅನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ನುರಿತ ಹಾಗೂ ಪರಿಣಿತ ಶ್ರೇಣಿಯ ವೈದ್ಯರುಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೇವೆ ಒದಗಿಸಲು ಈ ಯೋಜನೆಯಿಂದ ಸಹಕಾರಿಯಾಗಲಿದೆ ಎಂದರು.

2ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ ಸಚಿವರು, ಪ್ರತಿ 15 ಕಿ.ಮಿ. ಗೆ ಒಂದರಂತೆ ಸಂಚಾರಿ ಆಂಬುಲೆನ್ಸ್ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಅಂಬ್ಯುಲೆನ್ಸ್ ಗಳಲ್ಲಿ ಕೃತಕ ಉಸಿರಾಟದ ಉಪಕರಣ, ತರಬೇತಿ ಪಡೆದ ದಾದಿಯರು ಹಾಗೂ ಅಗತ್ಯ ಸಿಬ್ಬಂದಿಗಳಿದ್ದು ತುರ್ತು ಸಂದರ್ಭಗಳಲ್ಲಿ ರೋಗಿಯ ಹಾಗೂ ಜನರ ಜೀವ ರಕ್ಷಣೆಗೆ ಈ ಸಿಬ್ಬಂದಿ ಶ್ರಮಿಸಲಿದ್ದಾರೆ ಎಂದು ಹೇಳಿದರು.

1ದುಬಾರಿ ವೆಚ್ಚದ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೋಗಿಗಳು ಹೋಗಿ ಚಿಕಿತ್ಸೆ ಪಡೆಯುವುದು ಕಷ್ಟ. ಆದ್ದರಿಂದ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿಯು ಎಲ್ಲಾ ರೀತಿಯ ಕಾಯಿಲೆಗಳಿಗೆ ಉತ್ತಮ ಚಿಕಿತ್ಸೆ ದೊರಕುವಂತೆ ಮಾಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದ ಆರೋಗ್ಯ ಸಚಿವರು, ಈ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಆಶಾ ಕಾರ್ಯಕರ್ತರು ತಮ್ಮ ಕರ್ತವ್ಯಗಳನ್ನು ಜಬಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 2335 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ನಮ್ಮ ಸಹಭಾಗಿತ್ವದಲ್ಲಿ ಸ್ಯಾಮ್‍ಸಾಂಗ್ ಕಂಪೆನಿಯು ಈ ಒಂದು ಸಾವಿರ ಟ್ಯಾಬ್ಲೆಟ್‍ಗಳನ್ನು ಉಚಿತವಾಗಿ ನೀಡಲು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡರೆ, ಇನ್ನು ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಚಿವರು ಮನವಿ ಮಾಡಿದರು.


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s