ಕೊಪ್ಪಳ, ಮೇವು ಬ್ಯಾಂಕ್ ಸ್ಥಾಪನೆಗೆ ಸ್ಥಾಪನೆಗೆ ಸೂಚನೆ:ಸಚಿವ ಬಸವರಾಜ ರಾಯ ರಡ್ಡಿ

ಜಿಲ್ಲೆಯಲ್ಲಿನ ಭೀಕರ ಬರ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಜಾನುವಾರುಗಳಿಗೆ ರಕ್ಷಣೆ ನೀಡಲು ಅಗತ್ಯವಿರುವ ಕಡೆಗಳಲ್ಲಿ ಮೇವು ಬ್ಯಾಂಕ್ ಸ್ಥಾಪಿಸಿ, ರೈತರಿಗೆ ಮೇವು ಪೂರೈಕೆ ಮಾಡಬೇಕು. ಅಲ್ಲದೆ ಅಗತ್ಯಕ್ಕನುಗುಣವಾಗಿ ಗೋಶಾಲೆ ತೆರೆಯುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳದ ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ವಿಫಲಗೊಂಡ ಹಿನ್ನೆಲೆಯಲ್ಲಿ ಮೇವಿನ ಕೊರತೆಯನ್ನು ರೈತರು ತೀವ್ರವಾಗಿ ಎದುರಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಅಳವಂಡಿ, ಚಿಕ್ಕವಂಕಲಕುಂಟಾ, ತಲ್ಲೂರು, ವೆಂಕಟಗಿರಿ, ಕನಕಗಿರಿ ಮತ್ತು ಕಲಕೇರಿ ಗ್ರಾಮಗಳಲ್ಲಿ ಈಗಾಗಲೆ ಗೋಶಾಲೆಗಳನ್ನು ತೆರೆದು, ಜಾನುವಾರುಗಳಿಗೆ ಮೇವು ಪೂರೈಸಲಾಗುತ್ತಿದೆ. ಅಲ್ಲದೆ ಕುಕನೂರು ಮತ್ತು ಬಂಡಿಹರ್ಲಾಪುರ ಗ್ರಾಮಗಳಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಬೇರೆ, ಬೇರೆ ಗ್ರಾಮಗಳಲ್ಲಿ ಗೋಶಾಲೆ ತೆರೆಯುವಂತೆ ಬೇಡಿಕೆಗಳು ಬರುತ್ತಿವೆ.
ಬರುವ ದಿನಗಳಲ್ಲಿ ಕೊಪ್ಪಳ ತಾಲೂಕಿನ ಇರಕಲ್ಲಗಡ ಮತ್ತು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮಗಳಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ಕೈಗೊಳ್ಳಬೇಕು. ಅದೇ ರೀತಿ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ, ಯಲಬುರ್ಗಾ ತಾಲೂಕಿನ ಮಂಗಳೂರು, ಕುಷ್ಟಗಿ ತಾಲೂಕಿನ ಹನುಮಸಾಗರ ಮತ್ತು ತಾವರಗೇರಾದಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

32. 75 ಕೋಟಿ ರೂ. ಮುಂಗಾರು ಪರಿಹಾರ :

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆ ವಿಫಲಗೊಂಡ ಕಾರಣದಿಂದ ಬೆಳೆ ನಷ್ಟವಾದ ನಂತರ, ರಾಜ್ಯ ಸರ್ಕಾರ ನೀಡಿದ ವರದಿಯ ಹೊರತಾಗಿಯೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ಕಡಿಮೆ ಪರಿಹಾರ ಕೊಟ್ಟ ಕಾರಣದಿಂದ, ರೈತರಿಗೆ ಇನ್‍ಪುಟ್ ಸಬ್ಸಿಡಿ ನೀಡುವುದು ವಿಳಂಬವಾಗಿದೆ. ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 32. 75 ಕೋಟಿ ರೂ. ಇನ್‍ಪುಟ್ ಸಬ್ಸಿಡಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಒದಗಿಸಿದ್ದು, ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗಳಿಗೆ ರಾಜ್ಯ ಮಟ್ಟದಿಂದಲೇ ನೇರವಾಗಿ ಹಣ ಜಮಾ ಆಗಲಿದೆ.
ಈ ಮೊದಲು ಜಿಲ್ಲಾ ಮಟ್ಟದಲ್ಲಿ ರೈತರಿಗೆ ಹಣ ಪಾವತಿಸಲಾಗುತ್ತಿತ್ತು. ಅನಗತ್ಯ ವಿಳಂಬವನ್ನು ತಪ್ಪಿಸಲು ‘ಪರಿಹಾರ’ ಎನ್ನುವ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ನೇರವಾಗಿ ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಇದುವರೆಗೂ ಜೋಡಿಸದೇ ಇರುವ ರೈತರು ಕೂಡಲೆ ಈ ಕಾರ್ಯವನ್ನು ಮಾಡಬೇಕು ಎಂದು ಮಂತ್ರಿಗಳು ಹೇಳಿದರು.

ಮಾಧ್ಯಮಗಳ ವರದಿಗೆ ಸ್ಪಂದಿಸಿ :

ಜಿಲ್ಲೆಯಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರು, ಉದ್ಯೋಗದ ತೊಂದರೆ, ಭ್ರಷ್ಟಾಚಾರ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ತಿಳಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಕೆಲಸ ಮಾಡುತ್ತವೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ದಿನನಿತ್ಯ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುವ ವರದಿಗಳಿಗೆ ಕೂಡಲೆ ಸ್ಪಂದಿಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು.

ಯಾವುದೇ ನಗರ, ಪಟ್ಟಣ ಅಥವಾ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಕಂಡುಬಂದಲ್ಲಿ, ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಅಂತರ್ಜಲ ದಿನದಿಂದ, ದಿನಕ್ಕೆ ತೀವ್ರ ಕುಸಿತ ಕಾಣುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆಯನ್ನು ಸಿದ್ಧಪಡಿಸಿಕೊಳ್ಳಬೇಕು. ಆದಷ್ಟು ಶಾಶ್ವತ ಪರಿಹಾರ ಕೈಗೊಳ್ಳುವತ್ತ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಮಂತ್ರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಲೂಕುವಾರು ಸಭೆ ಕೈಗೊಳ್ಳಿ :

ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಂಬಂಧಿಸಿದಂತೆ ತೀವ್ರತರವಾದ ಸಮಸ್ಯೆಗಳನ್ನು ಅರಿತು, ಪರಿಹರಿಸುವ ನಿಟ್ಟಿನಲ್ಲಿ ಆಯಾ ತಾಲೂಕು ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೈಗೊಳ್ಳಬೇಕು. ಈ ಸಭೆಗೆ ಆಯಾ ತಾಲೂಕಿನ ಜಿ.ಪಂ. ಸದಸ್ಯರುಗಳು, ತಾ.ಪಂ. ಸದಸ್ಯರು, ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಅಲ್ಲದೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ಸಭೆ ಕೈಗೊಳ್ಳಬೇಕು. ಹೀಗಾದಾಗ ಮಾತ್ರ ಅಧಿಕಾರಿಗಳಿಗೆ ವಾಸ್ತವಾಂಶ ಗೊತ್ತಾಗಲಿದ್ದು, ಸಮಸ್ಯೆ ಪರಿಹರಿಸಲು ಸಾಧ್ಯವಾಗಲಿದೆ. ಮಾರ್ಚ್ ತಿಂಗಳ ಒಳಗಾಗಿ ಎಲ್ಲ ತಾಲೂಕುಗಳಲ್ಲಿ ಸಭೆ ಕೈಗೊಳ್ಳುವಂತೆ ಮಂತ್ರಿಗಳು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s