ಅಪಮೌಲ್ಯೀಕರಣದಿಂದ ಜನಸಾಮಾನ್ಯರಿಗೆ ಅಪಾರ ಸಂಕಷ್ಟ

ಯಾವುದೇ ಸಾರ್ವಜನಿಕ ನೀತಿಯ ನಿಗದಿತ ಗುರಿಯನ್ನು ಸಾಧಿಸುವ ಉದ್ದೇಶದ ಜೊತೆಗೆ ಅದನ್ನು ಕಾರ್ಯಗತಗೊಳಿಸುವುದರಲ್ಲಿಯೂ ಹೆಚ್ಚು ಸಮರ್ಥವಾಗಿರಬೇಕು. ಅಪಮೌಲ್ಯೀಕರಣವು ಜನಸಾಮಾನ್ಯರಿಗೆ ಅಪಾರ ಸಂಕಷ್ಟ ಉಂಟು ಮಾಡಿತು. ಆದರೆ, ಅದರಿಂದ ಸಾಧಿಸಿದ ಫಲಶೃತಿಯೇನು ಎಂಬುದನ್ನು ಕೇಂದ್ರ ಸರ್ಕಾರವು ಇನ್ನೂ ತಿಳಿಸ ಬೇಕಾಗಿದೆ.

ರೈತರು ಹಾಗೂ ಗ್ರಾಮೀಣ ಜನತೆಗೆ ಸೇವೆ ನೀಡುವಲ್ಲಿ ಅತ್ಯಂತ ನಿರ್ಣಾಯಕ ಪಾತ್ರವಹಿಸುವ ಇಡೀ ಸಹಕಾರ ವಲಯವು ಅಕ್ಷರಶಃ ಸ್ಥಬ್ದಗೊಂಡಿತು. ತಮಗೆ ವಹಿಸಿದ್ದ ಜವಾಬ್ದಾರಿಯನ್ನು ನಿರ್ವಹಿಸಲು ಬ್ಯಾಂಕಿಂಗ್ ವ್ಯವಸ್ಥೆಯು ಸನ್ನದ್ಧರಾಗಿಲ್ಲದೇ ಇದ್ದದ್ದು ಅದರ ಅನುಷ್ಟಾನದ ರೀತಿಯಲ್ಲಿನ ಸಿದ್ದತೆಯ ಕೊರತೆಯನ್ನು ಜಾಹೀರು ಪಡಿಸಿತು. ಅನುಷ್ಟಾನದ ನಡುವೆಯೇ ಗುರಿಯ ದಿಕ್ಕನ್ನು ಬದಲಿಸಲಾಯಿತು ಹಾಗೂ ನಿಯಮಗಳನ್ನು ಪದೇ ಪದೇ ಪರಿಷ್ಕರಿಸಲಾಯಿತು.

 

ಅಪಮೌಲ್ಯೀಕರಣದ ಅಗತ್ಯತೆಯೇ ಚರ್ಚಾಸ್ಪದವಾಗಿದ್ದು, ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‍ಗಳು ಕನಿಷ್ಟ ಪಕ್ಷ ಮುಂದೆ ಒದಗಬಹುದಾದ ತೊಂದರೆಗಳನ್ನು ಮುಂದಾಲೋಚಿಸಿ, ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಸಾಧ್ಯ ಹಾಗೂ ಸಶಕ್ತವಾದ ವ್ಯವಸ್ಥೆಯನ್ನು ಆಚರಣೆಗೆ ತರಬೇಕಿತ್ತು ಎಂಬುದು ನನ್ನ ಅನಿಸಿಕೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s