ಅಭಿವೃದ್ಧಿ ಕೇಂದ್ರಿತ ಆಯವ್ಯಯ: ಮುಖ್ಯಮಂತ್ರಿ ಸಿದ್ದರಾಮಯ್ಯ

FILE793“2017-18ನೇ ಸಾಲಿನ ಆಯವ್ಯಯ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಕೇಂದ್ರಿತ ಆಯವ್ಯಯವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
2017-18ನೇ ಸಾಲಿನ ಆಯವ್ಯಯ ಮಂಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೃಷಿ, ನೀರಾವರಿ, ವಿದ್ಯುತ್, ಆರೋಗ್ಯ, ಸಮಾಜ ಕಲ್ಯಾಣ, ಆಹಾರ ಇಲಾಖೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ಸಾಲದ ಹೊರೆ ಹೆಚ್ಚಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿತ್ತೀಯ ಶಿಸ್ತು ಕಾಯ್ದೆಯ ಮಿತಿಯಲ್ಲಿಯೇ ಸಾಲ ಮಾಡಲಾಗಿದೆ. ಸರ್ಕಾರವು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

FILE900ತೆರಿಗೆ ಸಂಗ್ರಹದಲ್ಲಿಯೂ ಮುದ್ರಾಂಕ ಮತ್ತು ನೋಂದಣಿ ಹೊರತು ಪಡಿಸಿ ಉಳಿದ ಇಲಾಖೆಗಳಲ್ಲಿ ತೆರಿಗೆ ಸಂಗ್ರಹ ಗುರಿ ಸಾಧಿಸಲಾಗಿದೆ. ನೋಟಿನ ಅಪಮೌಲ್ಯೀಕರಣದಿಂದಾಗಿ ಶೇ. 25 ರಷ್ಟು ನೋಂದಣಿ ಕಡಿಮೆಯಾಗಿದ್ದು, 1350 ಕೋಟಿ ರೂ. ಗಳಷ್ಟು ಕೊರತೆಯಾಗಿದೆ ಎಂದು ವಿವರಿಸಿದರು.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿಶೇಷ ಘಟಕ ಯೋಜನೆ (ಎಸ್‍ಸಿಎಸ್‍ಪಿ/ ಟಿಎಸ್‍ಪಿ)ಯಡಿ ಕಳೆದ ಆಯವ್ಯಯದಲ್ಲಿ 19,543 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಈ ವರ್ಷ 27,707 ಕೋಟಿ ರೂ. ಗಳಿಗೆ ಹೆಚ್ಚಿಸಲಾಗಿದೆ. ಅಂತೆಯೇ ಭಾರೀ ಮತ್ತು ಸಣ್ಣ ನೀರಾವರಿಗೆ ಕಳೆದ 5 ವರ್ಷಗಳಲ್ಲಿ 62,000 ಕೋಟಿ ರೂ. ಒದಗಿಸಲಾಗಿದೆ. ಅಂತೆಯೇ ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದವರ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳೆಯರು, ಮಕ್ಕಳು ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿಯವರು ವಿವರಿಸಿದರು.

FILE808ಈ ಬಾರಿ ಘೋಷಣೆಯಾದ ಹೊಸ ಯೋಜನೆಗಳು ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಘಟಕಕ್ಕೆ ನೀಡುವ ಆಹಾರಧಾನ್ಯ 2 ಕೆಜಿಯಷ್ಟು ಹೆಚ್ಚಿಸಲಾಗಿದೆ; ಗರ್ಭಿಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯಡಿ ಬಿಸಿಯೂಟ ನೀಡಲಾಗುವುದು. ಇದರಿಂದ 12 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ; ಅಂತೆಯೇ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಮೆಡಿಕಲ್, ಎಂಜಿನಿಯರಿಂಗ್, ಪದವಿ ತರಗತಿಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡಲಾಗುವುದು. 1.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಇದರಲ್ಲಿ ಪರಿಶಿಷ್ಟ ಜಾತಿ/ ಪಂಗಡದ ಉದ್ಯಮಿಗಳಿಗೂ ಆಯವ್ಯಯದಲ್ಲಿ ಸಾಕಷ್ಟು ಅನುಕೂಲ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

FILE796ರಾಜ್ಯದಲ್ಲಿ ಶೇ. 20 ರಷ್ಟು ರೈತರು ಮಾತ್ರ ಸಹಕಾರ ಸಂಘಗಳ ಮೂಲಕ ಕೃಷಿ ಸಾಲ ಪಡೆದಿದ್ದಾರೆ. ಉಳಿದವರು ಶೇ. 80 ರಷ್ಟು ಮಂದಿ ರಾಷ್ಟ್ರೀಕೃತ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಅರ್ಧದಷ್ಟು ಸಾಲ ಮನ್ನಾ ಮಾಡಿದಲ್ಲಿ, ರಾಜ್ಯ ಸರ್ಕಾರವೂ ಅರ್ಧದಷ್ಟು ಕೃಷಿ ಸಾಲ ಮನ್ನಾ ಮಾಡಲಿದೆ. ಈ ಘೋಷಣೆಗೆ ತಾವು ಬದ್ಧರಾಗಿರುವುದಾಗಿ ಮುಖ್ಯಮಂತ್ರಿಯವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s