ಎಸ್‍ಎಸ್‍ಎಲ್‍ಸಿ ಪ್ರಶ್ನೆಪತ್ರಿಕೆಗಳ ಸುರಕ್ಷತೆಗೆ ಹೆಚ್ಚಿನ ಒತ್ತು

ಜಿಲ್ಲೆಯಲ್ಲಿ ಮಾ. 30 ರಿಂದ ಏ. 12 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಗಳ ಭದ್ರತೆ ಕುರಿತಂತೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು. ಪರೀಕ್ಷಾ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರುವವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಸಿ ಟಿವಿ :

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಸಮರ್ಪಕವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಈ ಬಾರಿ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ಜಿಲ್ಲೆಯ 05 ಪರೀಕ್ಷಾ ಕೇಂದ್ರಗಳು ಇದುವರೆಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸದಿರುವುದು ಗಮನಕ್ಕೆ ಬಂದಿದ್ದು, ಮಾ. 30 ರ ಒಳಗಾಗಿ ಸಿಸಿ ಕ್ಯಾಮೆರಾ ಅಳವಡಿಕೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಕಡ್ಡಾಯ :

ಈ ಬಾರಿ ಒಟ್ಟು 19289 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ ಒಟ್ಟು 59 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧೆಡೆ ಪ್ರಶ್ನೆಪತ್ರಿಕೆಗಳ ಬಹಿರಂಗದ ಬಗ್ಗೆ ಇತ್ತೀಚೆಗೆ ಹಲವಾರು ಅಕ್ರಮಗಳು ನಡೆಯುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿದ್ದು, ಪ್ರಶ್ನೆಪತ್ರಿಕೆಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸೂಕ್ತ ಆಸನ, ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇರಬೇಕು. ಪರೀಕ್ಷೆ ಪ್ರಾರಂಭವಾದ ಬಳಿಕ ಕೊಠಡಿಯೊಳಗೆ ಮಾಧ್ಯಮದವರಿಗೆ ಪ್ರವೇಶ ನೀಡುವಂತಿಲ್ಲ ಆದರೆ ಪರೀಕ್ಷಾ ಕೇಂದ್ರದ ಹೊರಗಿನ ಫೋಟೋ ಅಥವಾ ಚಿತ್ರೀಕರಣ ನಡೆಸಬಹುದು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ಅದರಂತೆ ಕಾರ್ಯ ನಿರ್ವಹಿಸಬೇಕು ಎಂದು ವೆಂಕಟರಾಜಾ ಹೇಳಿದರು.

ನಿಷೇಧ :

ಅಲ್ಲದೆ ಸೂಕ್ತ ಪೊಲೀಸ್ ಬಿಗಿ ಬಂದೋಬಸ್ತ್‍ಗೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೊಠಡಿಗೆ ಯಾರೂ ಕೂಡ ಮೊಬೈಲ್‍ನೊಂದಿಗೆ ಪ್ರವೇಶಿಸುವಂತಿಲ್ಲ. ಪರೀಕ್ಷಾ ಕೇಂದ್ರದ ಮುಖ್ಯಸ್ಥರೂ ಕೂಡ, ತಮ್ಮ ಕಚೇರಿಯಲ್ಲಿ ಮಾತ್ರ ಮೊಬೈಲ್ ಬಳಸಬಹುದೇ ಹೊರತು, ಪರೀಕ್ಷಾ ಕೊಠಡಿಗೆ ಒಯ್ಯುವಂತಿಲ್ಲ. ಜಾಗೃತ ದಳದವರೂ ಕೂಡ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‍ನೊಂದಿಗೆ ಪ್ರವೇಶಿಸುವಂತಿಲ್ಲ. ಈ ನಿರ್ದೇಶನವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಕೊಡುವುದು ಅಥವಾ ಸಹಕರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಸರ್ವಶಿಕ್ಷಣ ಅಭಿಯಾನ ಉಪಸಮನ್ವಯಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಖಜಾನೆ ಇಲಾಖೆ ಅಧಿಕಾರಿಗಳು, ಸೇರಿದಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಶಾಲಾ ಮುಖ್ಯಸ್ಥರು ಭಾಗವಹಿಸಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s