ಹೆದ್ದಾರಿಗಳಲ್ಲಿ ಪ್ರತಿ 40 ಕಿ.ಮೀ.ಗೊಂದು ಗಸ್ತು ವಾಹನ:ಸಚಿವ ಡಿ ಕೆ ಶಿವಕುಮಾರ್

dk_shivakumarರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ ಟೋಲ್ ಕೇಂದ್ರಗಳಿಂದ ಸುಮಾರು 40 ಕಿ.ಮೀ ವ್ಯಾಪ್ತಿಗೆ ಒಂದರಂತೆ ಗಸ್ತು ವಾಹನ, ಅಂಬ್ಯುಲೆನ್ಸ್ ಮತ್ತು ಕ್ರೇನ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ, ಗಸ್ತು ವಾಹನಗಳಿಗೆ ಜಿ.ಪಿ.ಎಸ್. ಟ್ರ್ಯಾಕಿಂಗ್ ಅಳವಡಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಕಲಾಪದಲ್ಲಿ ಬಸವನಗೌಡ ಆರ್. ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಅನುಪಸ್ಥಿತಿಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುವ ಅಪಘಾತಗಳಲ್ಲಿ ಸಾವನ್ನಪ್ಪುವ ಪ್ರಾಣಿಗಳ ಕಳೇಬರವನ್ನು ತೆರವುಗೊಳಿಸಲು ಸಂಬಂಧಪಟ್ಟ ಹೆದ್ದಾರಿ ನಿರ್ವಹಣೆ ಗುತ್ತಿಗೆದಾರರ ಜವಾಬ್ದಾರಿಯಾಗಿದೆ ಎಂದು ಸಚಿವರು ಪರಿಷತ್ತಿಗೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ನಿಯಂತ್ರಣಕ್ಕಾಗಿ ಹೈವೇ ಗಸ್ತುವಾಹನಗಳನ್ನು ಹಗಲು-ರಾತ್ರಿ ಕರ್ತವ್ಯಕ್ಕೆ ನೇಮಿಸಲಾಗಿದ್ದು ಹೆಚ್ಚುವರಿಯಾಗಿ ಆಯಾ ಪೊಲೀಸ್ ಕಂಟ್ರೋಲ್ ರೂಂ ವಾಹನಗಳನ್ನು ಸಹ ಗಸ್ತಿಗಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಸ್ತು ವಾಹನಗಳನ್ನು ಹಾಗೂ ಸಿಬ್ಬಂದಿಗಳನ್ನು ನೇಮಿಸಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s