ಕೃಷಿಕರಿಗೆ ಯಶಸ್ವಿನಿ ಯೋಜನೆಯಡಿ ಆರೋಗ್ಯ ಭಾಗ್ಯ :ಸಚಿವ ಕೆ ಆರ್ ರಮೇಶ್ ಕುಮಾರ್

ramesh_kumarರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಯಶಸ್ವಿನಿ ಯೋಜನೆಯಡಿ ಆರೋಗ್ಯ ನೀಡಬೇಕೆಂಬುದು ಸರ್ಕಾರ ಉದ್ದೇಶವಾಗಿದೆ ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಮಧ್ಯಾಹ್ನ ಬಜೆಟ್ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಯಶಸ್ವಿ ಯೋಜನೆಯಾಗಿರುವ, ಯಶಸ್ವಿನಿ ಯೋಜನೆಯನ್ನು ಸಹಕಾರಿ ಕ್ಷೇತ್ರದಿಂದ ಆರೋಗ್ಯ ಇಲಾಖೆಗೆ ವರ್ಗಾವಣೆ ಮಾಡುವುದು ಸರಿಯಾದುದಲ್ಲವೆಂದು ತಿಳಿಸಿದ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವರು, ಸಹಕಾರ ಸಂಘಗಳಲ್ಲಿ ಶೇ 6 ರಷ್ಟು ಮಾತ್ರ ರೈತರು ಸದಸ್ಯರಾಗಿದ್ದಾರೆ.ಆದ್ದರಿಂದ ಯಾವುದೇ ಸಹಕಾರಿ ಸಂಘದಲ್ಲಿ ಸದಸ್ಯತ್ವ ಪಡೆಯದಿರುವ ಪ್ರೀಮಿಯಂ ಕಟ್ಟದಿರುವ ಎಲ್ಲಾ ರೈತರಿಗೆ ಮತ್ತು ಕಾರ್ಮಿಕರಿಗೆ ಆರೋಗ್ಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ 2 ಲಕ್ಷದ ಒಳಗೆ ಸೀಮಿತವಾಗಿ ಆರೋಗ್ಯ ಸೇವೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಈ ಮಿತಿಯನ್ನು ತೆಗೆದು ರೋಗಿ ಸಂಪೂರ್ಣವಾಗಿ ಗುಣಮುಖವಾಗುವ ತನಕ ತಗಲುವ ವೆಚ್ಚವನ್ನು ಭರಿಸಬೇಕೆಂದು ಸರ್ಕಾರದ ಉದ್ದೇಶವಾಗಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s