ನೀರಿನ ಮಿತ ಬಳಕೆಗೆ ಆದ್ಯತೆ ನೀಡಿ :ಮುಖ್ಯಮಂತ್ರಿ ಸಿದ್ದರಾಮಯ್ಯ

2ವಿಶ್ವ ಜಲ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜನೆಯಾಗಿದ್ದ ನೀರು ಉಳಿಸಿ ಬೆಂಗಳೂರು ಉಳಿಸಿ ಜಾಗೃತಿ ಜಾಥಾ ಅಭಿಯಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ನೀರು ಭೂಮಿಯ ಮೇಲೆ ವಾಸಿಸುವ ಮನುಷ್ಯರು, ಪ್ರಾಣಿಗಳು, ಪಕ್ಷಿಗಳು, ಗಿಡ-ಮರಗಳು ಒಳಗೊಂಡಂತೆ ಎಲ್ಲಾ ಜೀವರಾಶಿಗಳಿಗೆ ಅತ್ಯಾವಶ್ಯಕವಾದುದು. ಬದುಕಿಗೆ ನೀರು ಅತ್ಯಂತ ಅವಶ್ಯಕ. ನೀರು ಕೇವಲ ಕುಡಿಯಲು ಮಾತ್ರವಲ್ಲ, ವ್ಯವಸಾಯ ಹಾಗೂ ಇನ್ನಿತರ ಉಪಯೋಗಕ್ಕೂ ಬರುತ್ತದೆ. ಆದ್ದರಿಂದ ಅತ್ಯಮೂಲ್ಯ ನೀರಿನ ಮಿತ ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

5ನಾವು ಬಳಸುವ ನೀರಿನಲ್ಲಿ ವ್ಯರ್ಥವಾಗುವುದೇ ಹೆಚ್ಚು. ಶೇಕಡಾ 80 ರಷ್ಟು ನೀರು ವ್ಯರ್ಥವಾಗುತ್ತದೆ. ಆಸ್ಟ್ರೇಲಿಯಾ, ಇಸ್ರೇಲ್ ಹಾಗೂ ಸಿಂಗಾಪುರ ದೇಶಗಳಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿನಿತ್ಯ 1200 ದಶಲಕ್ಷ ಲೀಟರ್‍ ನಿಂದ 1300 ದಶಲಕ್ಷ ಲೀಟರ್‍ ನಷ್ಟು ತ್ಯಾಜ್ಯ ನೀರು ಉತ್ಪತ್ತಿಯಾಗುತ್ತದೆ. ತ್ಯಾಜ್ಯ ನೀರು ಮರು ಬಳಕೆಗೆ ಬೆಂಗಳೂರು ಜಲ ಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಯತ್ನ ನಡೆಸಿವೆ. ಈ ನೀರನ್ನು ಕುಡಿಯುವ ನೀರಿಗೆ ಬಳಸದೆ ಇತರ ಉದ್ದೇಶಕ್ಕೆ ಬಳಸಿದರೆ ಕುಡಿಯುವ ನೀರನ್ನು ಉಳಿಸಬಹುದಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಈ ವರ್ಷ ಭೀಕರ ಬರಗಾಲವಿದೆ. ಕುಡಿಯುವ ನೀರಿಗೆ ತೀವ್ರ ಕೊರತೆ ಇದೆ. ಕಾವೇರಿ ಪಾತ್ರದ ಕಾವೇರಿ, ಕಬಿನಿ ಹಾಗೂ ಹೇಮಾವತಿ ನದಿಗಳಲ್ಲೂ ಅಗತ್ಯ ಪ್ರಮಾಣದಲ್ಲಿ ನೀರಿಲ್ಲ. 6ಇದರಿಂದ ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಗೆ ಕುಡಿಯುವ ನೀರಿನ ಕೊರತೆ ಉದ್ಭವಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಸವೋಚ್ಛ ನ್ಯಾಯಾಲಯವು ತಮಿಳುನಾಡಿಗೆ ಕಾವೇರಿ ನದಿಯಿಂದ ಪ್ರತಿದಿನ 2000 ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ. ಆದಕಾರಣ, ನೀರಿನ ಮಹತ್ವವನ್ನು ಅರಿತು ನೀರನ್ನು ಅಪವ್ಯಯ ಮಾಡದೆ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸುವ ಪರಿಪಾಠವನ್ನು ನಾವು ರೂಢಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.

ವಿಶ್ವ ಜಲ ದಿನದ ಅಂಗವಾಗಿ ಮುಖ್ಯಮಂತ್ರಿಯವರು ಅಲ್ಲಿ ನೆರೆದಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ನೀರಿನ ಮರು ಬಳಕೆ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದರು. ನಗರಾಭಿವೃದ್ದಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯೂ ಆದ ಬೆಂಗಳೂರು ಜಲ ಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s