ನೀರಿನ ಮಿತ ಬಳಕೆ ರೂಡಿಸಿಕೊಳ್ಳಿ:ಜಿಲ್ಲಾ ನ್ಯಾಯಮೂರ್ತಿ ವಿ ಶ್ರೀಶಾನಂದ

World Water Day1ಅವ್ಯಾಹತವಾಗಿ ನಡೆಯುತ್ತಿರುವ ಅರಣ್ಯ ನಾಶದಿಂದ ಜಗತ್ತಿನೆಲ್ಲೆಡೆ ನೀರಿನ ಅಭಾವ ಎದುರಾಗಿದೆ. ಮುಂಬರುವ ದಿನಗಳಲ್ಲಿ ಆಮ್ಲಜನಕದ ಕೊರತೆಯೂ ಎದುರಾಗಿ ಮನುಷ್ಯ ಸೇರಿದಂತೆ ಎಲ್ಲ ಪ್ರಾಣಿ ವರ್ಗಗಳು ಸಂಕಷ್ಟ ಎದುರಿಸುವ ಆತಂಕವಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ವಿ ಶ್ರೀಶಾನಂದ ಕಳವಳ ವ್ಯಕ್ತಪಡಿಸಿದರು.

 

World Water Dayಧಾರವಾಡ ನಗರದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಜಲದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 

ಕರ್ನಾಟಕದ ಕರಾವಳಿ ಪ್ರದೇಶದ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಶೇ.87 ರಷ್ಟು ಅರಣ್ಯ ಪ್ರದೇಶವಿತ್ತು.

 

World Water Day 2 ಈಗ ಅದರ ಪ್ರಮಾಣದಲ್ಲಿ ಕುಸಿತ ಉಂಟಾಗಿದೆ. ಅರಣ್ಯ ಸಂಪತ್ತು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಪ್ರಜ್ಞಾವಂತರ ಕರ್ತವ್ಯವಾಗಿದೆ. ಕೇವಲ ಒಂದು ಬಿಂದಿಗೆ ನೀರಿಗಾಗಿ 1 ರಿಂದ 2 ಕಿ.ಮೀ.ದೂರ ಸಾಗಬೇಕಾದ ಪರಿಸ್ಥಿತಿ ಅನೇಕ ಕಡೆ ಉದ್ಭವವಾಗಿದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಐಷಾರಾಮಿ ಬದುಕಿನ ವ್ಯಾಮೋಹದಿಂದ ನೀರನ್ನು ವ್ಯರ್ಥವಾಗಿ ಖರ್ಚು ಮಾಡಬಾರದು, ನೀರಿನ ಮಿತ ಬಳಕೆ, ಮಳೆ ನೀರು ಕೊಯ್ಲು ರೂಢಿಸಿಕೊಳ್ಳಬೇಕು ಎಂದು ನ್ಯಾಯಾಧೀಶರು  ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s