ವೈಯುಕ್ತಿಕ ಮಾಹಿತಿ ಕೋರಿಕೆಗೆ ಆರ್ ಟಿ ಐ ನಲ್ಲಿ ಅವಕಾಶ ಇಲ್ಲ

Koppalಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಸರ್ಕಾರಿ ಅಧಿಕಾರಿ, ನೌಕರರ ವೈಯುಕ್ತಿಕ ಮಾಹಿತಿಯನ್ನು ಅರ್ಜಿದಾರರಿಗೆ ಕೊಡುವಂತಿಲ್ಲ ಎಂದು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಕೆ.ಎಂ. ಚಂದ್ರೇಗೌಡ ಅವರು ಹೇಳಿದರು.

ಕರ್ನಾಟಕ ಮಾಹಿತಿ ಆಯೋಗದ ವತಿಯಿಂದ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರದಂದು ಹಮ್ಮಿಕೊಳ್ಳಲಾದ ಮಾಹಿತಿ ಹಕ್ಕು ಕಾಯ್ದೆ  ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈಯುಕ್ತಿಕ ಮಾಹಿತಿ ಕೊಡಬೇಡಿ:

K2ಸರ್ಕಾರಿ ಕಚೇರಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಉದ್ದೇಶಕ್ಕಾಗಿಯೇ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದಿದೆ.  ಆದರೆ ಸರ್ಕಾರಿ ನೌಕರರ ವೈಯುಕ್ತಿಕ ಮಾಹಿತಿಯನ್ನು ಕೇಳುವಂತಹ ಅರ್ಜಿಗಳು ಸಲ್ಲಿಕೆಯಾಗುತ್ತಿವೆ.  ಕೆಲವು ಇಲಾಖೆಗಳು ಮಾಹಿತಿಯನ್ನು ಕೂಡ ನೀಡುತ್ತಿವೆ.  ಆದರೆ ಇದು ಸರಿಯಲ್ಲ.  ಮಾಹಿತಿ ಹಕ್ಕು ಕಾಯ್ದೆಯಡಿ ನಿಯಮ 8(1)ಜೆ ಅನ್ವಯ ಸರ್ಕಾರಿ ನೌಕರರ ಯಾವುದೇ ವೈಯುಕ್ತಿಕ ಮಾಹಿತಿಯನ್ನು ನೀಡುವಂತಿಲ್ಲ.  ಚರ, ಸ್ಥಿರಾಸ್ತಿ ವಿವರ, ಬಯೋಡೇಟಾ, ವೈಯುಕ್ತಿಕ ದಾಖಲೆಗಳು, ನೇಮಕಾತಿ ದಾಖಲೆಗಳು, ಸೇವಾಪುಸ್ತಕ, ಅಂಕಪಟ್ಟಿ, ವಿದ್ಯಾರ್ಹತೆ ಕುರಿತ ದಾಖಲೆಗಳು, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್, ಭವಿಷ್ಯನಿಧಿ ವಿವರ, ಸರ್ಕಾರಿ ವಸತಿ ಗೃಹ ಹೊರತುಪಡಿಸಿ ಖಾಸಗಿ ಮನೆಯ ವಿಳಾಸ ಸೇರಿದಂತೆ ವೈಯುಕ್ತಿಕ ಮಾಹಿತಿಯನ್ನು ನೀಡುವಂತಿಲ್ಲ.

ಸುಪ್ರೀಂ-ಹೈ ಆದೇಶ ಗಮನಿಸಿ:

K1ಅರ್ಜಿದಾರರು, ಸಾರ್ವಜನಿಕ ಮಾಹಿತಿ ಅಧಿಕಾರಿಯಿಂದ ಮಾಹಿತಿ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾದಲ್ಲಿ, ಮೊದಲ ಮೇಲ್ಮನವಿ ಪ್ರಾಧಿಕಾರಕ್ಕೆ ಅಪೀಲು ಸಲ್ಲಿಸಬೇಕೆ ಹೊರತು, ನೇರವಾಗಿ ಆಯೋಗಕ್ಕೆ ಅಪೀಲು ಸಲ್ಲಿಸಬಾರದು.  ಮೇಲ್ಮನವಿ ಪ್ರಾಧಿಕಾರದಿಂದಲೂ ಮಾಹಿತಿ ಲಭ್ಯವಾಗದಿದ್ದಲ್ಲಿ ಮಾತ್ರ ಆಯೋಗಕ್ಕೆ ಅಪೀಲು ಸಲ್ಲಿಸಬೇಕು.  ಅರ್ಜಿಗೆ ಬಿಪಿಎಲ್ ಕಾರ್ಡ್ ಪ್ರತಿ ಸಲ್ಲಿಸಿ ಉಚಿತವಾಗಿ ಮಾಹಿತಿ ನೀಡಿ ಎಂದು ಅರ್ಜಿ ಸಲ್ಲಿಸಿದರೆ, ಕೊಡುವ ಅಗತ್ಯವಿಲ್ಲ.  ಚಾಲ್ತಿ ಸಾಲಿನ ಆದಾಯ ಪ್ರಮಾಣಪತ್ರ ಸಲ್ಲಿಸಿದಲ್ಲಿ ಮಾತ್ರ ಬಿಪಿಎಲ್ ಎಂಬುದಾಗಿ ಪರಿಗಣಿಸಬೇಕು.  ಕಾಯ್ದೆಯಡಿ ಯಾವ ಮಾಹಿತಿ ಕೊಡಬೇಕು, ಕೊಡಬಾರದು ಎಂಬುದರ ಬಗ್ಗೆ ಸುಪ್ರಿಂಕೋರ್ಟ್, ಹೈಕೋರ್ಟ್‍ಗಳು ಅನೇಕ ಆದೇಶಗಳನ್ನು ಹೊರಡಿಸಿವೆ.  ಸರ್ಕಾರವೂ ಕೂಡ ಸುತ್ತೋಲೆಗಳನ್ನು ಹೊರಡಿಸಿದೆ, ಇವೆಲ್ಲವುಗಳ ಬಗ್ಗೆ ಅಧಿಕಾರಿಗಳು ವೆಬ್‍ಸೈಟ್ ಮೂಲಕ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಕೆ.ಎಂ. ಚಂದ್ರೇಗೌಡ ಅವರು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s