ಕಸ ವಿಲೇವಾರಿಯ ಹೊಣೆಗಾರಿಕೆಯನ್ನು ಅರಿಯಿರಿ:ಮುಖ್ಯಮಂತ್ರಿ ಸಿದ್ದರಾಮಯ್ಯ

1 (8)ಬೆಂಗಳೂರು ನಗರ ಸೇರಿದಂತೆ ರಾಜ್ಯದ ಇತರೆ ನಗರ, ಪಟ್ಟಣಗಳನ್ನು ಸ್ವಚ್ಛವಾಗಿಡುವುದು, ಆ ಮೂಲಕ ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ, ರೈತರಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡುವುದು ನಮ್ಮ ಸರ್ಕಾರದ ಮುಖ್ಯ ಧ್ಯೇಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಇಂದು ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮ, ಕೃಷಿ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ, ರಿಯಾಯಿತಿ ದರದಲ್ಲಿ ರೈತರಿಗೆ ಕಾಂಪೋಸ್ಟ್ ರಸಗೊಬ್ಬರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೂರು-ನಾಲ್ಕು ವರ್ಷಗಳ ಹಿಂದೆ ಬೆಂಗಳೂರು ನಗರವನ್ನು ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿತ್ತು. ನಗರದಲ್ಲಿ ಕಸ ವಿಲೇವಾರಿ ಒಂದು ದೊಡ್ಡ ಸಮಸ್ಯೆ ಆಗಿತ್ತು.1 (9) ಬೆಂಗಳೂರು ನಗರದ ಶುಚಿತ್ವ ಕಾಪಾಡಲು ಹಾಗೂ ನಗರದಲ್ಲಿ ಕಸ ವಿಲೇವಾರಿ ಮಾಡಲು ನಮ್ಮ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದೆ. ಆ ಹಣ ಸದುಪಯೋಗ ಆಗಬೇಕಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ಸರ್ಕಾರದ ಇಂತಹ ಯೋಜನೆಗಳಿಗೆ ಸ್ಪಂದಿಸಬೇಕು ಎಂದು ನುಡಿದರು.

ಪ್ರತಿ ಮನೆಯಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸುವುದು ಕಡ್ಡಾಯವಾಗಿ ಮಾಡಬೇಕು ಎಂದು ನುಡಿದ ಮುಖ್ಯಮಂತ್ರಿಯವರು, ಸದ್ಯದಲ್ಲೇ ಬೆಂಗಳೂರು ನಗರದ ಎಲ್ಲಾ ವಾರ್ಡುಗಳಲ್ಲಿ ಕಾಂಪೋಸ್ಟ್ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ಮೂಲಕ ಖರೀದಿಸಿದ ಗೊಬ್ಬರವನ್ನು ರೈತರ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡಲಾಗುವುದು ಎಂದರು.

1 (2)ಸಿಟಿ ಕಾಂಪೋಸ್ಟ್ ಗೊಬ್ಬರವನ್ನು 1 ಟನ್‍ಗೆ 800 ರೂ. ನಂತೆ ರೈತರಿಗೆ ಸರಬರಾಜು ಮಾಡಲಾಗುವುದು. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಗೊಬ್ಬರವನ್ನು ರೈತರಿಗೆ ಒದಗಿಸಲಾಗುವುದು. ರಾಜ್ಯದಲ್ಲಿನ ನಗರ ಪ್ರದೇಶಗಳನ್ನು ಸ್ವಚ್ಛವಾಗಿ ಮಾಡುವ ಮೂಲಕ ರೈತರ ಹೊಲಗಳಿಗೆ ಗೊಬ್ಬರವನ್ನು ನೀಡುವ ಕಾರ್ಯದಲ್ಲಿ ನಾವೆಲ್ಲರೂ ಪಾಲ್ಗೊಳ್ಳೋಣ ಎಂದು ಮುಖ್ಯಮಂತ್ರಿಯವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ 6 ರಿಂದ 7 ಕಾಂಪೋಸ್ಟ್ ಗೊಬ್ಬರ ತಯಾರಿಕಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ನಮ್ಮಲ್ಲಿ ಸುಮಾರು 9 ಸಾವಿರ ಟನ್ ಗೊಬ್ಬರ ದಾಸ್ತಾನು ಇದೆ. ಒಂದು ಟನ್ ಗೊಬ್ಬರ ತಯಾರಿಸಲು 2600 ರೂ. ಖರ್ಚು ಬರುತ್ತದೆ. 1 (3)ಅದನ್ನು ರೈತರಿಗೆ 800 ರೂ. ಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದರು. ಖರೀದಿ ಕೇಂದ್ರಗಳಿಗೆ ಬಂದು ರೈತರು ಗೊಬ್ಬರ ಖರೀದಿಸಿದರೆ ಕೇವಲ 200 ರೂ. ಗಳಿಗೆ 1 ಟನ್ ಗೊಬ್ಬರ ಲಭ್ಯವಾಗಲಿದೆ ಎಂದು ತಿಳಿಸಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಪದ್ಮಾವತಿ, ವಿಧಾನ ಪರಿಷತ್ತಿನ ಸದಸ್ಯರಾದ ವಿ.ಎಸ್. ಉಗ್ರಪ್ಪ, ಹೆಚ್. ಎಂ. ರೇವಣ್ಣ, ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆಂಚೇಗೌಡ, ಉಪಾಧ್ಯಕ್ಷ ವೆಂಕಟೇಶ್, ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s