ಜನ ವಸತಿ ಗ್ರಾಮಗಳು ಇನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ:ಸಚಿವ ಕಾಗೋಡು ತಿಮ್ಮಪ್ಪ

7ರಾಜ್ಯದಲ್ಲಿ ತಾಂಡಾ, ಕ್ಯಾಂಪ್ ಹೀಗೆ ವಿವಿಧ ಹೆಸರಿನಲ್ಲಿ ಕರೆಯಲ್ಪಡುವ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲು ಸರ್ಕಾರ ಈಗಾಗಲೆ ನಿರ್ಧರಿಸಿದೆ ಎಂದು ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಬೇಕಾಗಿರುವ ಜನವಸತಿ ಪ್ರದೇಶಗಳನ್ನು ಗುರುತಿಸಲು, ಆಯಾ ತಾಲೂಕು ಮಟ್ಟದಲ್ಲಿ, ತಾ.ಪಂ. ವತಿಯಿಂದ ಸಭೆ ಕೈಗೊಂಡು, ಸಮಗ್ರ ವರದಿ ಸಂಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆಯನ್ನು ತ್ವರಿತವಾಗಿ ಕಳುಹಿಸಿಕೊಡಬೇಕು. ಜಿಲ್ಲಾ ಪಂಚಾಯತಿ ಅಧ್ಯಕ್ಷರು ಹಾಗೂ ಸಿಇಒ ಅವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು

4ನೀರು, ಮೇವು ಮೊದಲ ಆದ್ಯತೆ :

ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ತೊಂದರೆಯನ್ನು ನಿವಾರಿಸುವುದಕ್ಕೆ ಹಾಗೂ ಜಾನುವಾರುಗಳಿಗೆ ಸಮರ್ಪಕ ಮೇವು ಲಭ್ಯವಾಗುವಂತೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯ ವಿಷಯವಾಗಿದೆ. ಇದನ್ನು ಅಧಿಕಾರಿಗಳು ಸವಾಲಾಗಿ ಸ್ವೀಕರಿಸಿ, ಯಾವುದೇ ನೀರಿನ ಲಭ್ಯತೆ ಆಗದಿದ್ದಲ್ಲಿ, ಅಂತಹ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕವಾದರೂ ಸರಿಯೇ, ನೀರು ಪೂರೈಸುವುದಾಗಿ ಜನರಿಗೆ ವಿಶ್ವಾಸ ಮೂಡಿಸಿ, ಅದೇ ರೀತಿ ನಡೆದುಕೊಳ್ಳಿ ಎಂದು ಸಚಿವರು ಸೂಚನೆ ನೀಡಿದರು.

5ಜಾನುವಾರುಗಳಿಗೆ ಗೋಶಾಲೆಯಲ್ಲಿ ಸಮರ್ಪಕ ಮೇವು ಹಾಗೂ ನೀರಿನ ವ್ಯವಸ್ಥೆ ಮಾಡಿ, ಮೇವು ಬ್ಯಾಂಕ್‍ಗಳಿಂದ ಮೇವು ಖರೀದಿಸಬಯಸುವ ರೈತರಿಗೆ ಕೆ.ಜಿ.ಗೆ ರೂ. 02 ರಂತೆ ಮೇವು ಒದಗಿಸಲು ಕ್ರಮ ವಹಿಸಿ. ನೀರಾವರಿ ಪ್ರದೇಶದಲ್ಲಿ ಮೇವು ಬೆಳೆಯಲು ಬಯಸುವ ರೈತರಿಗೆ ಉಚಿತ ಮೇವಿನ ಬೀಜ ಪೂರೈಸಿ, ಮೇವು ಬೆಳೆಸಲು ಉತ್ತೇಜನ ನೀಡಬೇಕು. ಜೂನ್ ತಿಂಗಳ ಅಂತ್ಯದವರೆಗೂ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸಮರ್ಪಕವಾಗಿ ಒದಗಿಸಲು ಅಗತ್ಯವಿರುವ ಅನುದಾನವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ 19 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

ಜಿಲ್ಲೆಯಲ್ಲಿ 07 ಗೋಶಾಲೆಗಳನ್ನು ತೆರೆಯಲಾಗಿದ್ದು, 06 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಈವರೆಗೆ 90134 ಜಾನುವಾರುಗಳಿಗೆ ಗೋಶಾಲೆಯಲ್ಲಿ ಮೇವು ಪೂರೈಸಲಾಗಿದ್ದು, 686.49 ಮೆ.ಟನ್ ಮೇವು ಖರೀದಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳು, ಜಿಪಂ ಸಿಇಓ, ತಹಸಿಲ್ದಾರರು, ತಾ.ಪಂ. ಇಒ, ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಇಂಜಿನಿಯರ್‍ ಗಳು ಪ್ರತಿ ಹದಿನೈದು ದಿನಕ್ಕೊಮ್ಮೆ ಪ್ರತಿ ತಾಲೂಕಿನಲ್ಲಿ ಸಭೆ, ನಡೆಸಿ, ಪ್ರತಿ ಗ್ರಾಮ ಪಂಚಾಯತಿವಾರು, ಆಯಾ ತಾಲೂಕಿನ ಕುಡಿಯುವ ನೀರಿನ ಪರಿಸ್ಥಿತಿಯನ್ನು ಅವಲೋಕಿಸಿ, ಸಮಸ್ಯೆ ತೀವ್ರವಿದ್ದಲ್ಲಿ, ಸಭೆಯಲ್ಲಿಯೇ ನಿರ್ಣಯ ಕೈಗೊಂಡು, ಪರಿಹಾರಕ್ಕೆ ಕ್ರಮ ವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪ್ರದೇಶದ ಕೂಲಿಕಾರರಿಗೆ ಹೆಚ್ಚು, ಹೆಚ್ಚು ಉದ್ಯೋಗ ನೀಡುವ ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಸಚಿವರಾದ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s