ಜಲಾಶಯದ ನೀರು ಕುಡಿಯಲು ಮಾತ್ರ ಬಳಕೆಗೆ ಕ್ರಮ:ಸಚಿವ ಎಂ ಬಿ ಪಾಟೀಲ್

M B Patilರಾಜ್ಯವು ತೀವ್ರ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ,   ಈಗಿರುವ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಉಳಿದಿರುವ ನೀರನ್ನು ಕುಡಿಯಲು ಮಾತ್ರ ಬಳಕೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ತಿಳಿಸಿದರು.

ವಿಧಾನ ಸೌಧದ ತಮ್ಮ ಕಛೇರಿಯಲ್ಲಿ ಇಂದು ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲಮಟ್ಟಿ, ನಾರಾಯಣಪುರ, ಹಿಡಕಲ್, ಹಿಪ್ಪರಗಿ, ಮಲಪ್ರಭ, ತುಂಗಭದ್ರಾ, ಸಿಂಗಟಾಲೂರು ಏತನೀರಾವರಿ, ಕಬಿನಿ ಮತ್ತು ಕೆ.ಆರ್.ಎಸ್. ನೀರನ್ನು ಸಂಪೂರ್ಣವಾಗಿ ಕುಡಿಯುವ ನೀರಿಗೆ ಬಳಕೆ ಮಾಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜೂನ್ 15ರ ವರೆಗೆ ನಿರಾತಂಕ:
ಜನರು ಕುಡಿಯುವ ನೀರಿಗಾಗಿ ಆತಂಕ ಪಡುವ ಅಗತ್ಯ ಇಲ್ಲ ಎಂದ ಸಚಿವ ಎಂ.ಬಿ. ಪಾಟೀಲ್ ಅವರು ಜೂನ್ 15 ರವರೆಗೆ ಬೆಂಗಳೂರು ನಗರ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ  ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ರೈತ ಸಮುದಾಯದವರಲ್ಲಿ ಕಳಕಳಿಯ ವಿನಂತಿ ಏನೆಂದರೆ ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಜಲಾಶಯಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಿರುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು.


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s