ಏಪ್ರಿಲ್ 17ರಂದು ಕೆಂಪೇಗೌಡ ಜಯಂತಿ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

cm-181ಪ್ರತಿ ವರ್ಷ ಏಪ್ರಿಲ್ 17 ರಂದು ರಾಜ್ಯ ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಪ್ರಸಕ್ತ ವರ್ಷದಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಂದು ನಾಡಪ್ರಭು ಕೆಂಪೇಗೌಡ ದಿನಾಚರಣೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪಾಲಿಕೆ ಕಚೇರಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನಮನೆಯಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 220 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.
4
ಕಳೆದ 58 ವರ್ಷಗಳ ಹಿಂದೆ ಬೆಂಗಳೂರು ಮಹಾನಗರ ಪಾಲಿಕೆಯಾಗಿ ರೂಪುಗೊಂಡ  ನಂತರ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಿರ್ಮಿಸಿದ ನಾಲ್ಕು ಗೋಪುರಗಳನ್ನು ದಾಟಿ ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆದಿದೆ. ವಿಶ್ವದಲ್ಲಿ ಭಾರತವನ್ನು ಗುರುತಿಸುವುದು ಬೆಂಗಳೂರು ನಗರದಿಂದಲೇ. ಡೈನಾಮಿಕ್ ಸಿಟಿ, ವೈಬ್ರಂಟ್ ಸಿಟಿ, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಇನ್ನಿತರ ಹೆಸರುಗಳಿಂದ ಖ್ಯಾತಿ ಪಡೆದಿರುವ ಈ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ, ಕಸದ ಸಮಸ್ಯೆ, ಸಂಚಾರ ದಟ್ಟಣೆ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ, ವಾಯುಮಾಲಿನ್ಯ, ಶಬ್ಧಮಾಲಿನ್ಯ ಇನ್ನಿತರ ಸಮಸ್ಯೆಗಳು ಸವಾಲಾಗಿ ಪರಿಣಮಿಸಿದೆ.2 ಈ ಸಮಸ್ಯೆಗಳನ್ನು ನಿಭಾಯಿಸಿ ಬೆಂಗಳೂರನ್ನು ಇನ್ನಷ್ಟು ಸುಂದರನಗರಿಯನ್ನಾಗಿಸಲು 7300 ಕೋಟಿ ರೂ.ಗಳನ್ನು ಅಭಿವೃದ್ಧಿಗಾಗಿ ಬಿಡುಗಡೆ ಮಾಡಲಾಗಿದೆ ಎಂದರು.

ನಗರಾಭಿವೃದ್ಧಿ ಮತ್ತು‌ ನಗರ ಯೋಜನೆ ಹಾಗೂ ನಗರ ಜಿಲ್ಲಾ ಉಸ್ತುವಾರಿ ಸಚಿವರಾದ  ಕೆ.ಜೆ.ಜಾರ್ಜ್ ಪ್ರಶಸ್ತಿ ಪುರಸ್ಕೃತರ ಸಾಧನೆ ವಿವರಗಳನ್ನೊಳಗೊಂಡ ಕಿರು ಪರಿಚಯ ಪುಸ್ತಕ ಬಿಡುಗಡೆಗೊಳಿಸಿದರು. ಬಿಬಿಎಂಪಿ ಮಹಾಪೌರರಾದ ಜಿ.ಪದ್ಮಾವತಿ ಪ್ರಾಸ್ತಾವಿಕ ನುಡಿ ನುಡಿದರು. ಆಯುಕ್ತರಾದ ಎನ್.ಮಂಜುನಾಥ್ ಪ್ರಸಾದ್ ಸ್ವಾಗತಿಸಿದರು.
6
ಸಮಾರಂಭದಲ್ಲಿ ನಗರಾಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವರಾದ ಆರ್.ರೋಷನ್ ಬೇಗ್, ಇಂಧನ ಸಚಿವರಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಉಪ ಮಹಾಪೌರ ಎಂ.ಆನಂದ್ ಸೇರಿದಂತೆ  ಬಿಬಿಎಂಪಿ ಸ್ಥಾಯಿಸಮಿತಿ ಅಧ್ಯಕ್ಷರುಗಳು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s