ಅಂಬೇಡ್ಕರ್ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ಡಾ.ಬಿ.ಆರ್ ಅಂಬೇಡ್ಕರ್ ಮಹಾ ಮಾನವತಾವಾದಿ, ಅವರ ಜೀವನದ ಘಟನೆಗಳನ್ನು ಅವಲೋಕಿಸಿಕೊಂಡು ಅವರು ಅನುಸರಿಸಿದ ನೀತಿ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆದರೆ ಅದು  ಅವರಿಗೆ ನಾವು ನೀಡುವ ಬಹು ದೊಡ್ಡ ಗೌರವವಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಉಪ ಮಹಾ ಪೌರ ಲಕ್ಷ್ಮೀಬಾಯಿ ಬಿಜವಾಡ ಅಭಿಪ್ರಾಯಪಟ್ಟರು.

ಅಂಬೇಡ್ಕರ ಅವರನ್ನು ಕೇವಲ ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು ಅವರು ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲ ಸಮುದಾಯದ ಬಡವರ ಜೀವನ ಸುಧಾರಣೆಗಾಗಿ ಹೋರಾಡಿದ ಮಹಾನ್ ವ್ಯಕ್ತಿ ಎನ್ನುವುದನ್ನು ಯಾರು ಮರೆಯಬಾರದು ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ರಕ್ಷಣಾ ಸಮಿತಿಯವರು ತೇಜಸ್ವಿನಗರದಲ್ಲಿ ಸಂವಿದಾನ ಶಿಲ್ಪಿ ಡಾ,ಅಂಬೇಡ್ಕರ್ ಅವರ 126 ನೇ ಜಯತ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು.

ಮೆರವಣೆಗೆಗೆ ಚಾಲನೆ ನೀಡಿ ಮಾತನಾಡಿದ ಧಾರವಾಡ ವಕೀಲರ ಸಂಘದ ಅಧ್ಯಕ್ಷ ಆರ್.ಯು ಬೆಳ್ಳಕ್ಕಿ ಅವರು ದೇಶದ ಕಾನೂನುಗಳನ್ನು ಇಷ್ಟೊಂದು ಬಲಿಷ್ಟ ಮಾಡುವಲ್ಲಿ ಅವರ ಪಾತ್ರ ಅಮೋಘವಾದದ್ದು ಎಂದು ತಿಳಿಸಿದರು . ಕಾರ್ಯಕ್ರಮದಲ್ಲಿ ಹಿರಿಯರು ಸಮಿತಿಯ ಪದಾದಿಕಾರಿಗಳು ಉಪಸ್ಥಿತರಿದ್ದರು.

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s