ಗಣಿ ನಾಡಿನಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ ಸಂಭ್ರಮ

ಜಗತ್ತೇ ಒಮ್ಮೆ ನಮ್ಮ ಭಾರತದತ್ತ ತಿರುಗಿ ನೋಡಿದೆ. ಅಷ್ಟೊಂದು ಅದ್ಧೂರಿಯಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ 126 ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದ್ದೇವೆ. ನಮ್ಮ ರಾಜ್ಯದಲ್ಲಂತೂ ವರ್ಷವಿಡೀ ಅಂಬೇಡ್ಕರ್ ಹಬ್ಬವನ್ನು ಆಚರಿಸಿದ್ದೇವೆ. ‘ಭಾರತ ಭಾಗ್ಯ ವಿಧಾತ’ ಎಂಬ ಧ್ವನಿ ಬೆಳಕಿನ ವಿಶಿಷ್ಟ ಕಾರ್ಯಕ್ರಮದ ಮೂಲಕ ರಾಜ್ಯದ ಪ್ರತಿ ಜಿಲ್ಲೆಗಳಿಗೂ ಅಂಬೇಡ್ಕರ್ ವಿಚಾರ ಧಾರೆಗಳನ್ನು ತಲುಪಿಸುವಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶ್ರಮಿಸಿ, ಜನ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯ ಅಂಬೇಡ್ಕರ್ ಯಶೋಗಾಥೆಯ ಸಡಗರದಲ್ಲಿದ್ದಾಗಲೇ ನಾಡಿನಾದ್ಯಂತ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜೀವನದ ಸಾಧನೆಗಳನ್ನು ಮತ್ತೆ ಮೆಲುಕಿದ್ದೇವೆ. ಹೀಗೆ ಡಾ.ಬಿ.ಆರ್ ಅಂಬೇಡ್ಕರ್ ಆಚರಣೆಯನ್ನು ಬಳ್ಳಾರಿಯಲ್ಲಿ ಹೇಗೆ ಆಚರಿಸಲಾಯ್ತು ಎಂಬ ವಿವರ ಇಲ್ಲಿದೆ.

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‍ಅವರ 126ನೇ ಜನ್ಮದಿನೋತ್ಸವದ ನಿಮಿತ್ತ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಗರದಲ್ಲಿ ಶುಕ್ರವಾರ ನಡೆಯಿತು. ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾದ ಮೆರವಣಿಗೆಯು ರಾಯಲ್ ಸರ್ಕಲ್ ಮುಖಾಂತರ ಬೆಂಗಳೂರು ರಸ್ತೆ, ಬ್ರೂಸ್‍ಪೇಟೆ ಪೊಲೀಸ್ ಠಾಣೆ ಮಾರ್ಗವಾಗಿ ಮೋತಿ ಸರ್ಕಲ್ ಮುಖಾಂತರ ವೇದಿಕೆ ಕಾರ್ಯಕ್ರಮ ನಡೆಯುವ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ತೆರಳಿತು.

ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಶಾಸಕರಾದ ಕೆ.ಸಿ.ಕೊಂಡಯ್ಯ, ಎನ್.ವೈ.ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಎಸ್ಪಿ ಆರ್.ಚೇತನ್, ಮೇಯರ್ ಜಿ.ವೆಂಕಟರಮಣ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಮಾನಯ್ಯ, ಪಾಲಿಕೆ ಸದಸ್ಯ ಬೆಣಕಲ್ ಬಸವರಾಜ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ದಲಿತ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಇದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s