ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಂಬೇಡ್ಕರ್ ಮಾಡಿದ ಸಾಧನೆ ಅನನ್ಯ

ಇಡೀ ಭಾರತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 126 ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ನಮ್ಮ ರಾಜ್ಯದಲ್ಲಂತೂ ವರ್ಷವಿಡೀ ಅಂಬೇಡ್ಕರ್ ಹಬ್ಬವನ್ನು ಆಚರಿಸಿದ್ದೇವೆ.  ‘ಭಾರತ ಭಾಗ್ಯ ವಿಧಾತ’ ಎಂಬ ಧ್ವನಿ ಬೆಳಕಿನ ವಿಶಿಷ್ಟ ಕಾರ್ಯಕ್ರಮದ ಮೂಲಕ ರಾಜ್ಯದ ಪ್ರತಿ ಜಿಲ್ಲೆಗಳಿಗೂ ಅಂಬೇಡ್ಕರ್ ವಿಚಾರ ಧಾರೆಗಳನ್ನು ತಲುಪಿಸುವಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶ್ರಮಿಸಿ, ಜನ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯ ಅಂಬೇಡ್ಕರ್ ಸಡಗರದಲ್ಲಿದ್ದಾಗಲೇ ನಾಡಿನಾದ್ಯಂತ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಆಚರಣೆಯನ್ನು ಆಚರಿಸಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜೀವನದ ಸಾಧನೆಗಳನ್ನು ಮತ್ತೆ ಮೆಲುಕಿದ್ದೇವೆ. ಹೀಗೆ ಡಾ.ಬಿ.ಆರ್ ಅಂಬೇಡ್ಕರ್ ಆಚರಣೆಯನ್ನು ಕೊಪ್ಪಳದಲ್ಲಿ ಹೇಗೆ ಆಚರಿಸಲಾಯ್ತು ಎಂಬ ವಿವರ ಇಲ್ಲಿದೆ.

ಕೊಪ್ಪಳ ಜಿಲ್ಲೆಯ ಶಾದಿಮಹಲ್ ನಲ್ಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 126 ನೇ ಜಯಂತಿಯ ನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಅಂಬೇಡ್ಕರ್ ಅವರು ಜನಿಸದೇ ಇದ್ದಿದ್ದರೆ, ದಲಿತರು ಸಮಾಜದಲ್ಲಿ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ.  ಭಾರತೀಯ ಸಮಾಜದ ಅವಕಾಶ ವಂಚಿತ ಸಮುದಾಯದ ಹಿನ್ನೆಲೆಯಿಂದ ಹುಟ್ಟಿಬಂದ ಅಂಬೇಡ್ಕರ್ ಅವರು, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮಾಡಿದ ಸಾಧನೆ ಅನನ್ಯ.  ಸಮಾನತೆ ಮತ್ತು ಮಾನವೀಯತೆಯನ್ನು ಗೌರವಿಸುವ ಅವರ ಚಿಂತನೆ ಎಲ್ಲರಿಗೂ ಆದರ್ಶವಾದುದು.  ಸಂವಿಧಾನದ ಕಲಂ 371(ಜೆ) ತಿದ್ದುಪಡಿ ತರುವ ಮೂಲಕ ನಮ್ಮ ಸರ್ಕಾರ ಪ್ರಾದೇಶಿಕ ಅಸಮಾನತೆಯನ್ನು ನೀಗಿಸುವ ಮಹತ್ವದ ಕಾರ್ಯ ನಿರ್ವಹಿಸಿದೆ  ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಜನ್ಮ ದಿನದ ಅಂಗವಾಗಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಇಂದು ಚಾಲನೆ ನೀಡಿದೆ.  ಪ.ಜಾತಿ ಮತ್ತು ಪ.ವರ್ಗದ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ 18 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿರಿಸಿದೆ.  ಪ್ರವಾಸಿ ಟ್ಯಾಕ್ಸಿ ಯೋಜನೆ ಜಾರಿಯ ಮೂಲಕ ಪರಿಶಿಷ್ಟರ ಸ್ವಾವಲಂಬಿ ಬದುಕಿಗೆ ಸರ್ಕಾರ ಶ್ರಮಿಸುತ್ತಿದೆ.  ಅಂಬೇಡ್ಕರ್ ಅವರು ಈ ದೇಶದ ಪ್ರತಿಯೊಂದು ಸಮುದಾಯಕ್ಕೂ ಸಲ್ಲಬೇಕಾದವರು.  ಮಹಿಳೆಯರಿಗೆ ಸಮಾನ ಹಕ್ಕು ನೀಡುವ ನಿಟ್ಟಿನಲ್ಲಿ ಶ್ರಮಿಸಿದರು.  ಅಂಬೇಡ್ಕರ್ ಅವರು ನಡೆದು ಬಂದ ದಾರಿ, ಅವರ ಆದರ್ಶಗಳನ್ನು ಅರಿತುಕೊಂಡು ನಾವು ಸಮಾಜದಲ್ಲಿ ಬದಲಾವಣೆ ತರಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಸಂಗಣ್ಣ ಕರಡಿ ಅವರು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ವಿಶ್ವದ ಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿರುವುದರಿಂದ, ಅಂಬೇಡ್ಕರ್ ಅವರು ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವದ ಹೆಮ್ಮೆಯ ಪುತ್ರ ಎಂದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಯಿಂದ ಹೇಳಿಕೊಳ್ಳಬಹುದಾಗಿದೆ ಎಂದು ಹೇಳಿದರು.

2015-16 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್‍ಟಾಪ್‍ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.  ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾಡಳಿತ, ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s