ರೈತರ ಖಾತೆಗೆ ನೇರ ಸಬ್ಸಿಡಿ : ಆನ್ ಲೈನ್ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಇದೊಂದು ಡಿಜಿಟಲ್ ಮೀಟಿಂಗ್. ಫಾಸ್ಟೆಸ್ಟ್ ಕಾನ್ ಫರೆನ್ಸ್. ರಾಜ್ಯದ ರೈತರಿಗೆ ಸಿಗ್ತು ಸಬ್ಸಿಡಿ ಕಾನ್ಫಿಡೆನ್ಸ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉಂಟಾಗಿರೋ ಬರ ಪರಿಸ್ಥಿತಿ ಮತ್ತದಕ್ಕೆ ಕೈಗೊಂಡಿರುವ ಪರಿಹಾರ ಕಾಮಗಾರಿಗಳ ಪ್ರಗತಿಯ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮುಖ್ಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದುಕೊಂಡರು. ಕಾರ್ಯಕ್ರಮದ ಮತ್ತಷ್ಟು ವಿವರ ಇಲ್ಲಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿಗಳು, ಪ್ರಾದೇಶಿಕ ಆಯುಕ್ತರ ಜೊತೆ ವಿಡಿಯೊ ಸಂವಾದ ನಡೆಸಿದರು.

ಹಿಂದೆಂದೂ ಕಾಣದಂತಹ ಭೀಕರ ಬರಗಾಲ ರಾಜ್ಯವನ್ನು ಆವರಿಸಿದೆ. ಬರ ಪರಿಹಾರ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವ ಅಗತ್ಯವಿದ್ದು, ಇದು ಸವಾಲಿನ ಕೆಲಸವೂ ಆಗಿದೆ. ಹೀಗಾಗಿ ಜೂನ್ ತಿಂಗಳ ವರೆಗೆ ಜನರಿಗೆ ಕುಡಿಯುವ ನೀರು, ಉದ್ಯೋಗ, ಜಾನುವಾರುಗಳ ಮೇವಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಿ…

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ನೀಡಿದ ಆದೇಶ.
ಕುಡಿಯುವ ನೀರು ಪೂರೈಸುವ, ಕೂಲಿ ಕಾರ್ಮಿಕರಿಗೆ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವುದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜವಾಬ್ದಾರಿ ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಾಗಿ ಹೇಳಿದರು.

ತ್ವರಿತವಾಗಿ ಸಬ್ಸಿಡಿ ಜಮೆ ಮಾಡಿ:

ಸರ್ಕಾರ ಬಿಡುಗಡೆ ಮಾಡುವ ಇನ್‍ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಬೇಕು. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲ ರೈತರಿಗೂ ಹಣ ಸೇರಬೇಕು.

ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಇರುವುದು ಕಂಡು ಬಂತು. ಜನರು ನೀರಿಗಾಗಿ ಬಿಂದಿಗೆಗಳನ್ನು ಇಟ್ಟುಕೊಂಡು ಕಾಯುತ್ತಿದ್ದ ದೃಶ್ಯ ಗಮನಿಸಿದ್ದೇನೆ. ಈ ರೀತಿ ಎಲ್ಲಿಯೂ ಆಗಬಾರದು. ಸಮಸ್ಯೆ ಕಂಡು ಬಂದ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಕುಡಿಯುವ ನೀರು ಪೂರೈಸಲು ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ತೆಗೆದುಕೊಳ್ಳಿ. ಆದರೆ ಕೊಳವೆ ಬಾವಿಗಳ ಮಾಲೀಕರನ್ನು ಹೆದರಿಸಬೇಡಿ.

ಸರ್ಕಾರ ನಿಗಧಿ ಮಾಡಿರುವ ಹಣ ಕೊಟ್ಟು ವಶಪಡಿಸಿಕೊಳ್ಳಿ. ಒಟ್ಟಿನಲ್ಲಿ ಕುಡಿಯುವ ನೀರಿಗೆ ಅಗತ್ಯ ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ. ಹಣಕಾಸು ತೊಂದರೆ ಎದುರಾಗುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರಿನ ಸಮಸ್ಯೆ ಕುರಿತು ಸಹಾಯವಾಣಿ, ಜನಪ್ರತಿನಿಧಿಗಳು ಅಥವಾ ಮಾಧ್ಯಮಗಳ ಮೂಲಕ ದೂರು ಬಂದ ತಕ್ಷಣ ಕ್ರಮ ಕೈಗೊಳ್ಳಬೇಕು. ಮುಂದಿನ ಹತ್ತು ವಾರಗಳಿಗೆ ಸಾಕಾಗುವಷ್ಟು ಮೇವನ್ನು ಈಗಲೇ ಸಂಗ್ರಹ ಮಾಡಿಕೊಳ್ಳಿ. ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ತೆರೆಯಿರಿ. ಗೋಶಾಲೆ ಎಂದರೆ ಯಾವುದೋ ತೋಪಿನಲ್ಲಿ ಜಾನುವಾರುಗಳಿಗೆ ಜಾಗ ನೀಡುವುದಲ್ಲ. ರಾಸುಗಳಿಗೆ ನೀರು, ನೆರಳು ಒದಗಿಸಬೇಕು. ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ಜಾನುವಾರುಗಳ ಜೊತೆ ಬಂದವರಿಗೆ ತಂಗಲು ಮತ್ತು ಊಟದ ವ್ಯವಸ್ಥೆ ಮಾಡಬೇಕು.

ಜಾನುವಾರುಗಳಿಗೆ ನೀರು ಒದಗಿಸಲು ಪ್ರತಿ ಹಳ್ಳಿಗಳಲ್ಲೂ ತೊಟ್ಟಿಗಳನ್ನು ನಿರ್ಮಿಸಿ. ಕಾಮಗಾರಿಯನ್ನು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಳ್ಳಿ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ತಪ್ಪದೇ ಉದ್ಯೋಗ ನೀಡಬೇಕು. ಅವರ ವೇತವನ್ನು 15 ದಿನಗಳ ಒಳಗೆ ವಿತರಿಸುವಂತೆ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತರಿ ಯೋಜನೆ ಸಂಬಂಧ 2017-18ನೇ ಸಾಲಿನ ಕ್ರಿಯಾ ಯೋಜನೆ ಕೂಡಲೇ ಸಿದ್ಧವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸಬ್ಸಿಡಿ ಬಿಡುಗಡೆ :

ವಿಡಿಯೊ ಸಂವಾದ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳು ಇನ್‍ಪುಟ್ ಸಬ್ಸಿಡಿಯಾಗಿ 265 ಕೋಟಿ ರೂಪಾಯಿಗಳನ್ನು ಆನ್ ಲೈನ್ ಮೂಲಕ  ಬಿಡುಗಡೆ ಮಾಡಿದರು.

ಸಬ್ಸಿಡಿ ಹಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುವ ಆನ್‍ಲೈನ್ ಪ್ರಕ್ರಿಯೆಗೂ ಚಾಲನೆ ನೀಡಿದರು. 4.47 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ಹಣ ಜಮೆಯಾಗಲಿದೆ. ಈ ಹಿಂದೆ 12.03 ಲಕ್ಷ ರೈತರಿಗೆ 671 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿ ಬಿಡುಗಡೆಯಾಗಿತ್ತು. ಈ ವರೆಗೆ 16 ಲಕ್ಷಕ್ಕೂ ಹೆಚ್ಚು ರೈತರಿಗೆ 936 ಕೋಟಿ ರೂ.ಗಳ ಸಬ್ಸಿಡಿ ತಲುಪಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಜೊತೆ ಸಚಿವರುಗಳಾದ ಎ ಮಂಜು, ಕಾಗೋಡು ತಿಮ್ಮಪ್ಪ, ಎಚ್ ಕೆ ಪಾಟೀಲ್, ಕೃಷ್ಣ ಬೈರೇಗೌಡ ಹಾಜರಿದ್ದರು.  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s