ಸಿದ್ಧಗಂಗಾ ಶ್ರೀಗಳಿಗೆ ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ತುಮಕೂರಿನ ಸಿದ್ದಗಂಗಾ ಮಠದ ಅಂಗಳದಲ್ಲಿ ನಾಡಿನ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಗೆ ಹಲವು ಮಹತ್ವದ ವೈಶಿಷ್ಟ್ಯಗಳಿವೆ. ಇದೇ ಮೊಟ್ಟ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರದಾನ ಮಾಡಲಾಗುತ್ತೆ.

ಈ ಪ್ರಶಸ್ತಿಯ ಮೊದಲ ಆಯ್ಕೆಯೇ ಡಾ. ಶಿವಕುಮಾರ್ ಸ್ವಾಮೀಜಿಗಳು ಎನ್ನುವುದು ಮತ್ತೊಂದು ವಿಶೇಷ. 10 ಲಕ್ಷ ನಗದು ಮತ್ತು ಶ್ರೀ ಭಗವಾನ್ ಮಹಾವೀರ ಸ್ಮರಣಿಕೆ ಹಾಗೂ ಫಲಕವನ್ನು ಈ ಪ್ರಶಸ್ತಿಯು ಒಳಗೊಂಡಿದೆ.

ಇಂಥಹ ಹಲವು ಮೊದಲುಗಳನ್ನು ಒಳಗೊಂಡ ಅಮೂಲ್ಯ ಪ್ರಶಸ್ತಿಯನ್ನು ಡಾ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ 2016ನೇ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯೂ ಲಭಿಸುವಂತಾಗಲಿ, ಆ ಕ್ಷಣಗಳನ್ನು ನೋಡುವ ಭಾಗ್ಯ ನಮ್ಮದಾಗಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಸಚಿವರಾದ ಟಿ ಬಿ ಜಯಚಂದ್ರ, ಉಮಾಶ್ರೀ, ವಿಧಾನ ಪರಿಷತ್ ಸದಸ್ಯ ವಿ ಎಸ್ ಉಗ್ರಪ್ಪ ಮತ್ತು ಗಣ್ಯರು ಉಪಸ್ಥಿತರಿದ್ದರು.ತುಮಕೂರು ಸಿದ್ಧಗಂಗಾ ಮಠದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿತ್ತು.

Advertisements
Posted in CM

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s