ಸಮರ್ಪಕ ನೀರು ಪೂರೈಕೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

ಬರ ಪರಿಹಾರ ಕಾಮಗಾರಿ ಮತ್ತು ಬೇಸಿಗೆಯಲ್ಲಿ ನೀರು ಒದಗಿಸುವ ಕಾರ್ಯದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆಯನ್ನು ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಡಳಿತಗಳೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅದರಲ್ಲೂ ಹೆಚ್ಚು  ಬಿಸಿಲಿನ  ತಾಪವಿರುವ ಬಳ್ಳಾರಿ ಜಿಲ್ಲೆಯಲ್ಲೂ ಈ ವಿಷಯಗಳ ಕುರಿತು ಅಧಿಕಾರಿಗಳು ಕಟ್ಟೆಚ್ಚರವಹಿಸಿದ್ದಾರೆ. ಸಾಲು ಸಾಲು ಸಭೆಗಳು, ಪರಿಶೀಲನೆಗಳು ನಡೆದು ಹಲವಾರು ನಿರ್ಧಾರಗಳನ್ನು ಕೈಗೊಳ್ಳುವುದರ ಜೊತೆಗೆ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ ಸಿಗುತ್ತಿದೆ. ಗಣಿ ನಾಡು ಬಳ್ಳಾರಿಯಲ್ಲಿ ಜಿಲ್ಲಾಡಳಿತ ನಡೆಸಿದ ಸಾಮಾನ್ಯ ಸಭೆಯ ವರದಿಯನ್ನು ಇಲ್ಲಿ ನೀಡಲಾಗಿದೆ.

ತಿಂಗಳ ಮೊದಲ ವಾರದಲ್ಲಿ ಹಣ ಪಾವತಿ :

ಜಿಲ್ಲೆಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಮತ್ತು ಜನರಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಖಾಸಗಿ ಬೊರವೆಲ್‍ಗಳನ್ನು  ಬಾಡಿಗೆ ತೆಗೆದುಕೊಳ್ಳಲಾಗಿದ್ದು, ಆ ಬೊರವೆಲ್‍ಗಳ ಬಾಡಿಗೆ ಹಣವನ್ನು ತಿಂಗಳ ಮೊದಲ ವಾರದಲ್ಲಿ ಪಾವತಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಬೊರವೆಲ್‍ದಾರರು ಜನರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಬಾಡಿಗೆ ಸೇವೆ ಒದಗಿಸುವ ರೂಪದಲ್ಲಿ ನೀಡುತ್ತಿರುವ ಸೇವೆ ಅನನ್ಯವಾದುದು. ಅವರಿಗೆ 7ರಿಂದ 9 ಸಾವಿರ ರೂ.ಗಳ ಹಣವನ್ನು ತಿಂಗಳ ಮೊದಲ ವಾರದಲ್ಲಿ ಪಾವತಿಸುವುದು ನಮ್ಮ ಕರ್ತವ್ಯ ಎಂದರು. ಬಾಡಿಗೆ ಪಡೆದ ಖಾಸಗಿ ಬೊರವೆಲ್‍ಗಳಿಗೆ ಹಣ ಪಾವತಿಸುವುದು ವಿಳಂಬವಾಗಿದೆ ಎಂಬ ದೂರುಗಳು ಬಂದಲ್ಲಿ ನಿಮ್ಮ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ :

ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಎಲ್ಲಿಯೂ ಆಗದಂತೆ ನೋಡಿಕೊಳ್ಳಿ, ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಹೇಳಿದ ಜಿಪಂ ಸಿಇಒ ಅವರು, ಗ್ರಾಮೀಣ ಕುಡಿಯುವ ನೀರು ಸರಬರಾಜುಗೆ ಸಂಬಂಧಿಸಿದಂತೆ ಜಿಪಂ ಸದಸ್ಯರನ್ನೊಳಗೊಂಡ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ, ಸದಸ್ಯರು ತಮ್ಮ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ಅವರು ಅದರಲ್ಲಿ ನಮೂದಿಸಲಿದ್ದಾರೆ. ಅದಕ್ಕೆ 2 ಗಂಟೆಯೊಳಗೆ ಬಗೆಹರಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಮತ್ತು ಮಾಡಿರುವುದನ್ನು ಗ್ರೂಪ್‍ನಲ್ಲಿ ನಮೂದಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳಿಗೆ ಹೇಳಿದರು. ಜಿಪಂ ಹಂಗಾಮಿ ಅಧ್ಯಕ್ಷೆ ಪಿ.ದೀನಾ ಮಂಜುನಾಥ ಅವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಿಪಂ ಸದಸ್ಯರು, ವಿವಿಧ ತಾಪಂಗಳ ಅಧ್ಯಕ್ಷರು, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s