ನೀರಿನ ಅಭಾವ ಕೊಪ್ಪಳಕ್ಕಿಲ್ಲ

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯಲ್ಲಿನ ಬರ ಪರಿಹಾರ ಕಾಮಗಾರಿಗಳ ಕುರಿತು ಸಭೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಜನ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಕಾಣಿಸದಂತೆ ನೀರು ಪೂರೈಸಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಹಾಗಾದ್ರೆ ಸಭೆಯಲ್ಲಿ ಇನ್ನೂ ಏನೆಲ್ಲಾ ಹೇಳಿದ್ರು ಅನ್ನೋ ಡೀಟೆಲ್ಸ್ ಇಲ್ಲಿದೆ.

 

ಟ್ರಾಕ್ಟರ್ ಮೂಲಕ ನೀರು ಸರಬರಾಜು :

ಕೊಪ್ಪಳ ಜಿಲ್ಲೆ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ಬರ ಮತ್ತು ಪರಿಹಾರ ಕಾಮಗಾರಿಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ತುಂಗಭದ್ರ ಜಲಾಶಯದಲ್ಲಿ ಈಗಾಗಲೇ ನೀರಿನ ಪ್ರಮಾಣ ಕಡಿಮೆಯಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದೆ.

ಹೆಚ್ಚುವರಿ ಗೋಶಾಲೆ :

ಜಿಲ್ಲೆಗೆ ಅಗತ್ಯ ನೀರು ಪೂರೈಕೆಗೆ ನಾರಾಯಣಪುರ, ಆಲಮಟ್ಟಿ ಜಲಾಶಯಗಳ ಅಧಿಕಾರಿಗಳೊಡನೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಿ. ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಕ್ರಮಕ್ಕೆ ಆದ್ಯತೆ ನೀಡಿ. ಜಿಲ್ಲೆಯಲ್ಲಿ ಒಟ್ಟು 4 ಗೋಶಾಲೆಗಳಿದ್ದು, ಕೊಪ್ಪಳ ತಾಲೂಕಿನ ಇರಕಲ್ಲಗಡ, ಕುಷ್ಟಗಿ ತಾಲೂಕಿನ ತಾವರಗೇರ ಹಾಗೂ ಗಂಗಾವತಿ ತಾಲೂಕಿನ ಹುಲಿಹೈದರ ಗ್ರಾಮಗಳಲ್ಲಿ ಇನ್ನೂ ಹೆಚ್ಚುವರಿ ಮೂರು ಗೋಶಾಲೆಗಳನ್ನು ಪ್ರಾರಂಭಿಸಲು ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಸವರಾಜ ರಾಯರಡ್ಡಿ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ಸಂಸದ ಸಂಗಣ್ಣ ಕರಡಿ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಹಲವು ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s