ದಲಿತರ ಮೇಲಿನ ದೌರ್ಜನ್ಯ ತಡೆ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ:ಮುಖ್ಯಮಂತ್ರಿ ಸಿದ್ದರಾಮಯ್ಯ

1ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಸಂಬಂಧ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮತನಾಡುತ್ತಾ ಮುಖ್ಯಮಂತ್ರಿಯವರು ಈ ಸೂಚನೆ ನೀಡಿದರು.

ಗಂಭೀರವಾಗಿ ಪರಿಗಣಿಸಿ:
ನ್ಯಾಯಾಲಯಗಳ ಸ್ಥಾಪನೆ ಸಂಬಂಧ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ಸಮಾಜ ಕಲ್ಯಾಣ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಖಾತೆ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇದಕ್ಕೆ ಪೂರವಾದ ಕ್ರಮಗಳನ್ನು ಪ್ರಾಸಿಕ್ಯುಷನ್, ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಮೇಲ್ಮನವಿ ಪ್ರಕ್ರಿಯೆ ಚುರುಕಾಗಲಿ:
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ದೌರ್ಜನ್ಯ ಪ್ರಕರಣಗಳಲ್ಲಿ ಹಿನ್ನೆಡೆಯಾಗುತ್ತಿದ್ದು, ತಪ್ಪಿತಸ್ಥರು ಶಿಕ್ಷೆಯಿಂದ ಬಚಾವಾಗುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡದೆ ಸಾಕ್ಷ್ಯಾಧಾರ ಮತ್ತು ಸಾಕ್ಷಿಗಳನ್ನು ಒದಗಿಸುವ ಕೆಲಸ ಆಗಬೇಕು ಎಂದು ಹೇಳಿದರು. ವಜಾಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚುರುಕಾಗಬೇಕು. ಮೇಲ್ಮನವಿ ಸಲ್ಲಿಕೆಗೆ ಅರ್ಹವಾದ ಪ್ರಕರಣಗಳ ಕುರಿತು ಅಧಿಕಾರಿಗಳು ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ಅಪೀಲು ಸಲ್ಲಿಸಲು ಅವಕಾಶವಿದ್ದರೂ ಆ ರೀತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕೈಗೊಂಡಿರುವ ಕ್ರಮ ಕುರಿತು ಪರಿಶೀಲನೆ ನಡೆಸಿದ ಮುಖ್ಯಮಂತ್ರಿಯವರು, ಸುಳ್ಳು ಮಾಹಿತಿ ನೀಡಿ ಜಾತಿ ಪ್ರಮಾಣ ಪಡೆದವರ ಜೊತೆಗೆ ಅವರಿಗೆ ಸಹಕರಿಸುವ ಅಧಿಕಾರಿಗಳನ್ನೂ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸೂಚಿಸಿದರು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರು, ಅರ್ಜಿ ಸಲ್ಲಿಸುವವರ ಮೇಲೆ ಪೊಲೀಸ್ ಅಧಿಕಾರಿಗಳು ನಿಗಾ ಇರಿಸಬೇಕು. ಸುಳ್ಳು ಮಾಹಿತಿ ನೀಡಿರುವುದು ಸಾಬೀತಾದ ಕೂಡಲೇ ಕ್ರಮ ಜರುಗಿಸಬೇಕು ಎಂದರು.
3ತಿಂಗಳಿಗೊಮ್ಮೆ ಕಡ್ಡಾಯ ಸಭೆ:
ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಿಗೂ ಸೂಚನೆ ನೀಡುವುದಾಗಿ ಹೇಳಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳವರಿಗೆ ಕ್ಷೌರ ಮಾಡಲು ಮತ್ತು ದೇಗುಲಗಳಿಗೆ ಪ್ರವೇಶ ನಿರಾಕರಿಸುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಆದರೂ ಆಗಾಗ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಈ ಕುರಿತೂ ಜಿಲ್ಲಾಧಿಕಾರಿಗಳು ಸಭೆ ನಡೆಸುವ ಮೂಲಕ ಗಮನ ಹರಿಸಬೇಕು ಎಂದು ತಿಳಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಸಮಾಜ ಕಲ್ಯಾಣ ಸಚಿವ ಆಂಜನೇಯ, ಸಣ್ಣ ಕೈಗಾರಿಕೆಗಳ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಗೋವಿಂದ ಕಾರಜೋಳ, ಚಿಕ್ಕಮಾದು, ಶಿವಮೂರ್ತಿ, ತುಕಾರಾಂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s