ಶಿಕ್ಷಣ ಸಾಲ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

cm-181ಹೆಚ್ಚು ಅಂಕ ಗಳಿಸಿ ಅರಿವು ಶಿಕ್ಷಣ ಸಾಲ ಯೋಜನೆಯ ಸದುಪಯೋಗಪಡಿಸಿಕೊಳ್ಳಿ :ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಹೆಚ್ಚು ಅಂಕ ಗಳಿಸುವ ಮೂಲಕ ಅರಿವು ಶಿಕ್ಷಣ ಸಾಲ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಶಿಕ್ಷಣ ಸಾಲ ಯೋಜನೆಯಡಿ ಆಯ್ಕೆಯಾದ ಫಲಾನುಭವೀ ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವು ಒದಗಿಸಲು ಬೋಧನಾ ಶುಲ್ಕವನ್ನು ಮುಂಗಡವಾಗಿ ಪಾವತಿಸಲು 20 ಕೋಟಿ ರೂ ಮೊತ್ತದ ಚೆಕ್ಕನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹಸ್ತಾಂತರಿಸಿದ ನಂತರ ಅರಿವು 0.2 ಹೊಸ ತಂತ್ರಾಂಶಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದರು.

WhatsApp Image 2017-04-25 at 1.10.53 PMಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಅವರು 2017 ನೇ ಸಾಲಿನ ವೃತ್ತಿಪರ ಶಿಕ್ಷಣ ಹಾಗೂ ಇನ್ನಿತರ ಶಿಕ್ಷಣದ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದಿಂದ ಹೊಸ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು. ಈ ತಂತ್ರಾಂಶದ ಬಳಕೆಯಿಂದ ಅರ್ಜಿಯ ಪರಿಶೀಲನಾ ಪ್ರಕ್ರಿಯೆ ಅತ್ಯಂತ ಕ್ಷಿಪ್ರವಾಗಿ ನಡೆಯಲು ಅನುಕೂಲವಾಗಲಿದೆ ಎಂದರು.
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅರಿವು ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದೆ. WhatsApp Image 2017-04-25 at 1.10.51 PMಅದರಂತೆ, 2014-15 ನೇ ಸಾಲಿನಲ್ಲಿ 19,044 ಫಲಾನುಭವಿಗಳಿಗೆ 51.82 ಕೋಟಿ ರೂ, 2015-16 ನೇ ಸಾಲಿನಲ್ಲಿ 24,518 ಫಲಾನುಭವಿಗಳಿಗೆ 69.07 ಕೋಟಿ ರೂ ಹಾಗೂ 2016-17 ನೇ ಸಾಲಿನಲ್ಲಿ 23,822 ಫಲಾನುಭವಿಗಳಿಗೆ 82.79 ಕೋಟಿ ರೂ ವೆಚ್ಚ ಮಾಡಲಾಗಿದೆ. ಅರಿವು ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ ಮೀಸಲಿರಿಸಲಾಗಿದೆ ಎಂದು ಅಂಕಿ-ಅಂಶಗಳನ್ನು ವಿವರಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು ಟಿ ಖಾದರ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರೆಡ್ಡಿ, ಕೋಲಾರ ಲೋಕಸಭಾ ಸದಸ್ಯ ಕೆ ಹೆಚ್ ಮುನಿಯಪ್ಪ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಅಲ್ಪಸಂಖ್ಯಾತರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಎ ಗಫೂರ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎನ್ ಟಿ ಅಬ್ರೂ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.⁠⁠⁠⁠

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s